• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕರ್ನಾಟಕ: ಅ.28ಕ್ಕೆ ಗ್ರಾಮ ಪಂಚಾಯತಿ ಚುನಾವಣೆ, ಅ.30ಕ್ಕೆ ಫಲಿತಾಂಶ ಪ್ರಕಟ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 04: ಕರ್ನಾಟಕದ ರಾಜ್ಯದ ಒಟ್ಟು 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ ಆಗಿದೆ. ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 30ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಕರ್ನಾಟಕ ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.

ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಣೆ ಮಾಡಿರುವ ರಾಜ್ಯ ಚುನಾವಣೆ ಆಯೋಗವು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಉಳಿದ ಮತ್ತು ತೆರವಾದ ಸದಸ್ಯ ಸ್ಥಾನಗಳಿಗೂ ಉಪಚುನಾವಣೆಯನ್ನು ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ.

ಇದೇ ವರ್ಷ 2022ರ ಕಳೆದ ಆಗಸ್ಟ್‌ನಿಂದ ಮುಂಬರಲಿರುವ ನವೆಂಬರ್ ವೇಳೆ ಮುಕ್ತಾಯ ಆಗಲಿರುವ 203 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. ಅದೇ ರೀತಿ ಕೆಲವು ಕಾರಣಗಳಿಂದಾಗಿ ಖಾಲಿಯಾದ ಹಾಗೂ ತೆರವಾಗಿರುವ 49 ಗ್ರಾಮ ಪಂಚಾಯತಿಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.

ಗ್ರಾಮ ಪಂಚಾಯಿತಿ ನೇಮಕಾತಿ; ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿಗ್ರಾಮ ಪಂಚಾಯಿತಿ ನೇಮಕಾತಿ; ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಅ.18 ನಾಮಪತ್ರ ಸಲ್ಲಿಕೆಗೆ ಕಡೆ ದಿನ
ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಕ್ಟೋಬರ್ 13ರಂದು ಗುರುವಾರ ಅಧಿಸೂಚನೆ ಹೊರಡಿಸಲಿದ್ದಾರೆ. 2022 ಅಕ್ಟೋಬರ್ 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆಯು 2022 ಅಕ್ಟೋಬರ್ 19ರಂದು ನಡೆಯಲಿದೆ. ಅಕ್ಟೋಬರ್ 21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ ಎಂದು ಚುನಾವಣೆ ಆಯೋಗದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಇದೇ ಅಕ್ಟೋಬರ್ 28ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 5ರವರೆಗ ಗ್ರಾಮಪಂಚಾಯತಿ ಚುನಾವಣೆಗಳ ಮತದಾನ ಪ್ರಕ್ರಿಯೆ ಜರುಗಲಿದೆ. ಮರು ಮತದಾನ ಅಗತ್ಯವಿದ್ದಲ್ಲಿ ಮಾತ್ರ ಅಕ್ಟೋಬರ್ 30-ರಂದು ನಡೆಸಲಾಗುವುದು. ಮತ ಎಣಿಕೆ ಪ್ರಕ್ರಿಯೆಯು ಅಕ್ಟೋಬರ್ 31ರಂದು ಬೆಳಗ್ಗೆ 8ಗಂಟೆಯಿಂದ ಶುರುವಾಗಲಿದೆ ಎಂದು ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.

English summary
Karnataka Gram panchayat election on Oct. 28th and results announced on Oct. 30th, Karnataka Election Commission said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X