Gruha Arogya Scheme: ಕರ್ನಾಟಕಕ್ಕೆ ಕ್ಯಾನ್ಸರ್ ಕಂಟಕ, ಗ್ರಾಮೀಣ ಭಾಗದಲ್ಲಿ ಮಧುಮೇಹ, ರಕ್ತದೊತ್ತಡ ಹೆಚ್ಚಳ
Gruha Arogya Scheme: ಕರ್ನಾಟಕದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ನಂತರ ಜನರಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಕಾಳಜಿ ಹೆಚ್ಚಾಗಿದೆ. ಕೋವಿಡ್ ಸಂಕಷ್ಟದಲ್ಲಿ ಕರ್ನಾಟಕದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಆಸ್ಪತ್ರೆಗಳ ವ್ಯವಸ್ಥೆಯೂ ಒಂದು ಹಂತದಲ್ಲಿ ಸ್ವಲ್ಪ ಸುಧಾರಿಸಿತ್ತು. ಇದಾದ ನಂತರ ಕರ್ನಾಟಕದಲ್ಲಿ ದೆಹಲಿ ಮಾದರಿಯ ನಮ್ಮ ಕ್ಲಿನಿಕ್ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿ ಮಾಡಲಾಗಿತ್ತು. ಕರ್ನಾಟಕ ಸರ್ಕಾರದ ಈ ಯೋಜನೆಯು ಮುಖ್ಯವಾಗಿ ಕೊಳಗೇರಿ ನಿವಾಸಿಗಳು, ದಿನಗೂಲಿ ಕಾರ್ಮಿಕರು ಮತ್ತು ಬಡ ಜನರಿಗೆ ಉಚಿತ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶವನ್ನು ಒಳಗೊಂಡಿದೆ.
ಪ್ರತಿ ಕ್ಲಿನಿಕ್ 10-20 ಸಾವಿರ ಜನರಿಗೆ ಸೇವೆ ನೀಡುವ ಉದ್ದೇಶದೊಂದಿಗೆ ಪ್ರಾರಂಭವಾಯಿತು. 12 ಬಗೆಯ ಸೇವೆಗಳು ಇದರಲ್ಲಿ ಸೇರಿವೆ. ಗರ್ಭಿಣಿ ಆರೈಕೆ, ಲಸಿಕೆ, ಮಧುಮೇಹ, ರಕ್ತದೊತ್ತಡ, 14 ಬಗೆಯ ಲ್ಯಾಬ್ ಪರೀಕ್ಷೆಗಳು ಹಾಗೂ ಉಚಿತ ಔಷಧಿ ಸೇವೆಯೂ ಇದೆ. ಇದು ಸೋಮವಾರ - ಶನಿವಾರ ಬೆಳಿಗ್ಗೆ 9ರಿಂದ ಸಂಜೆ 4:30 ಒದಗಿಸುತ್ತದೆ. ಆದರೆ ಈ ಯೋಜನೆಯು ಅಷ್ಟು ಪರಿಣಾಮಕಾರಿಯಾಗಿ ಜಾರಿ ಆಗಿಲ್ಲ ಎನ್ನುವ ಅಸಮಾಧಾನ ಸಾರ್ವಜನಿಕರಲ್ಲಿದೆ. ಇದೀಗ ಕರ್ನಾಟಕ ಸರ್ಕಾರವು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡುವ ಗೃಹ ಆರೋಗ್ಯ ಯೋಜನೆಯನ್ನು ಪರಿಚಯಿಸಿದ್ದು, ಈ ಯೋಜನೆಯಡಿ 22 ಲಕ್ಷಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದೆ. ಆಘಾತಕಾರಿ ಅಂಶವೆಂದರೆ ಇದರಲ್ಲಿ 5,000ಕ್ಕೂ ಹೆಚ್ಚು ಶಂಕಿತ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ.

ಇನ್ನು ಸಾಮಾನ್ಯವಾಗಿ ವರ್ಷಕ್ಕೆ ಒಮ್ಮೆಯಾದರೂ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎನ್ನುವುದು ವೈದ್ಯರ ಸಲಹೆ. ಆದರೆ ಬಡವರು ಹಾಗೂ ಮಧ್ಯಮ ವರ್ಗದವರು ಯಾವುದಾದರೂ ಗಂಭೀರವಾದ ಆರೋಗ್ಯ ಸಮಸ್ಯೆ ಎದುರಾಗುವ ವರೆಗೂ ಸಂಪೂರ್ಣ ಆರೋಗ್ಯ ಪರೀಕ್ಷೆಗೆ ಒಳಗಾಗುವುದೇ ಇಲ್ಲ. ಇದೀಗ ಕರ್ನಾಟಕ ಸರ್ಕಾರವು ಕರ್ನಾಟಕದಲ್ಲಿ ಮನೆ - ಮನೆ ಆರೋಗ್ಯ ತಪಾಸಣೆ ಕಾರ್ಯಕ್ರಮವಾದ "ಗೃಹ ಆರೋಗ್ಯ" ಯೋಜನೆಯನ್ನು ಪರಿಚಯಿಸಿದೆ. ಜಿಲ್ಲಾವಾರು ಆರೋಗ್ಯ ನಕ್ಷೆಯನ್ನು ಬಿಡುಗಡೆ ಮಾಡಿದ್ದು, ಇದು ಕರ್ನಾಟಕದಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಮಾತ್ರವಲ್ಲದೇ, ವಿವಿಧ ಪ್ರದೇಶಗಳಲ್ಲಿ ರೋಗದ ಪ್ರಮಾಣದ ವರದಿಯೂ ಸಿಕ್ಕಿದೆ. ಏನಿದು ಯೋಜನೆ, ಇದರಿಂದ ಕರ್ನಾಟಕದ ಆರೋಗ್ಯ ಕ್ಷೇತ್ರದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವುದು ಸೇರಿದಂತೆ ಸಂಪೂರ್ಣ ವಿವರ ಈ ಲೇಖನದಲ್ಲಿದೆ.
ಕರ್ನಾಟಕ ಸರ್ಕಾರದ 'ಗೃಹ ಆರೋಗ್ಯ' ಯೋಜನೆ
ಕರ್ನಾಟಕ ಸರ್ಕಾರದ ಗೃಹ ಆರೋಗ್ಯ ಯೋಜನೆಯು ಕರ್ನಾಟಕದ ಗ್ರಾಮೀಣ - ನಗರ ಭಾಗದ ಜನರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡುವುದು ಆಗಿದೆ. ಕರ್ನಾಟಕದಲ್ಲಿ 30 ವರ್ಷ ಮೇಲ್ಪಟ್ಟವರಿಗೆ ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ ಮಾಡುವುದು ಹಾಗೂ ಉಚಿತವಾಗಿ ಔಷಧಿಗಳನ್ನು ನೀಡುವ ಮಹತ್ವದ ಯೋಜನೆ ಇದಾಗಿದೆ. ಅಲ್ಲದೆ ಮುಖ್ಯವಾಗಿ ಮಧುಮೇಹ, ರಕ್ತದೊತ್ತಡ ಹಾಗೂ ಕ್ಯಾನ್ಸರ್‌ನಂತಹ ಸಾಂಕ್ರಾಮಿಕವಲ್ಲದ ರೋಗಗಳನ್ನು (NCDs) ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡುವುದು ಮತ್ತು ಅದಕ್ಕೆ ಚಿಕಿತ್ಸೆ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯನ್ನು ಮೊದಲು ಗ್ರಾಮೀಣ ಭಾಗಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ / ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುತ್ತಿದೆ.
ಗೃಹ ಆರೋಗ್ಯ ಯೋಜನೆಯ ಪ್ರಮುಖಾಂಶಗಳು
1. ಕರ್ನಾಟಕದಲ್ಲಿ ಮನೆ ಬಾಗಿಲಿಗೆ ಸೇವೆ: ಈ ಯೋಜನೆಯ ಭಾಗವಾಗಿ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಯು ಮನೆ-ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ.
2. 30 ವರ್ಷ ಮೇಲ್ಪಟ್ಟವರಿಗೆ ಆದ್ಯತೆ: ಇನ್ನು ಈ ಯೋಜನೆಯಲ್ಲಿ ಮುಖ್ಯವಾಗಿ 30 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತಿದೆ. 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಈ ಯೋಜನೆಯ ಮೂಲಕ ಉಚಿತ ಆರೋಗ್ಯ ತಪಾಸಣೆ ಲಭ್ಯವಿದೆ.
3. ಈ ರೋಗಗಳ ಪರಿಶೀಲನೆ: ಈ ಯೋಜನೆಯ ಮೂಲಕ ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ, ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್ ಸೇರಿದಂತೆ 14 ಅಸಾಂಕ್ರಾಮಿಕ ರೋಗಗಳನ್ನು ಪರೀಕ್ಷಿಸಲಾಗುತ್ತದೆ.
4. ಉಚಿತ ಔಷಧಿ ಸೌಲಭ್ಯ: ಆರೋಗ್ಯ ತಪಾಸಣೆಯ ನಂತರ ಅಗತ್ಯವಿರುವವರಿಗೆ ಸ್ಥಳದಲ್ಲೇ ಉಚಿತ ಔಷಧಿ ನೀಡಲಾಗುತ್ತದೆ.
5. ಹೇಗೆ ಕಾರ್ಯನಿರ್ವಹಿಸುತ್ತದೆ: ಎನ್‌ಸಿಡಿ ಆ್ಯಪ್ (NCD App) ಮೂಲಕ ನೋಂದಣಿ ಮಾಡಿ, ಕಲರ್ ಕೋಡೆಡ್ ಸ್ಟಿಕ್ಕರ್‌ಗಳನ್ನು ಮನೆ ಬಾಗಿಲಿಗೆ ಅಂಟಿಸಲಾಗುತ್ತದೆ.
6. ಉದ್ದೇಶವೇನು: ಈ ಯೋಜನೆಯು ಗ್ರಾಮೀಣ ಭಾಗದ ಜನರ ಆರೋಗ್ಯ ಮಟ್ಟವನ್ನು ಸುಧಾರಿಸುವುದು ಹಾಗೂ ಅಕಾಲಿಕ ಮರಣಗಳನ್ನು ತಡೆಯುವುದಕ್ಕೆ ಸಹಕಾರಿಯಾಗಿದೆ.
ಗೃಹ ಆರೋಗ್ಯ ಯೋಜನೆ ಪ್ರಾರಂಭ
ಕರ್ನಾಟಕದಾದ್ಯಂತ ಗೃಹ ಆರೋಗ್ಯ ಯೋಜನೆಯನ್ನು ಪ್ರಾರಂಭಿಸಲಾಗಿದೆ. 2025ರ ಆಗಸ್ಟ್ ಮತ್ತು 2026ರ ಜನವರಿ ನಡುವೆ ಕರ್ನಾಟಕದಲ್ಲಿ 41,92,801 ಮನೆಗಳನ್ನು ಆಶಾ ಕಾರ್ಯಕರ್ತರ ಸಹಕಾರದೊಂದಿಗೆ ಪರಿಶೀಲನೆ ಮಾಡಲಾಗಿದೆ. ಈ ಯೋಜನೆಯಲ್ಲಿ ಕಿರಿಯ ವ್ಯಕ್ತಿಗಳಲ್ಲಿ ರಕ್ತಹೀನತೆ, ಅಧಿಕ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಮತ್ತು ವಯಸ್ಕರಲ್ಲಿ ಇತರ ದೀರ್ಘಕಾಲದ ಆರೋಗ್ಯದ ಮೇಲೆ ಸಮಸ್ಯೆಗಳನ್ನುಂಟು ಮಾಡಬಹುದಾದ 14 ಸಾಂಕ್ರಾಮಿಕವಲ್ಲದ ರೋಗಗಳನ್ನು (NCDs) ಮೊದಲೇ ಪತ್ತೆಹಚ್ಚುವುದು ಮುಖ್ಯ ಉದ್ದೇಶವಾಗಿದೆ. ಇದೀಗ ಆರೋಗ್ಯ ಇಲಾಖೆಯು ಗೃಹ ಆರೋಗ್ಯ ಯೋಜನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಪ್ರದೇಶಗಳಿಗೆ ವಿಸ್ತರಿಸಲು ಮುಂದಾಗಿದೆ.
ಹೆಚ್ಚುತ್ತಿದೆ ಅಧಿಕ ರಕ್ತದೊತ್ತಡ - ಮಧುಮೇಹ ಆರೋಗ್ಯ ಸಮಸ್ಯೆ
ಕರ್ನಾಟಕದಲ್ಲಿ ಗೃಹ ಆರೋಗ್ಯ ತಪಾಸಣೆಯ ವೇಳೆ ಜನರಲ್ಲಿ ಹಲವು ಗಂಭೀರ ಆರೋಗ್ಯ ಸಮಸ್ಯೆಗಳು ಇರುವುದು ವರದಿಯಾಗಿದೆ. ಅಧಿಕ ರಕ್ತದೊತ್ತಡ ಮತ್ತು ಟೈಪ್ II ಮಧುಮೇಹ ಆರೋಗ್ಯ ಸಮಸ್ಯೆ ಹಲವರಲ್ಲಿ ಕಾಣಿಸಿಕೊಂಡಿದೆ. ಆರೋಗ್ಯ ಇಲಾಖೆಯು ಈ ಯೋಜನೆಯ ಭಾಗವಾಗಿ 30 ವರ್ಷಕ್ಕಿಂತ ಮೇಲ್ಪಟ್ಟ 76,07,739 ಜನರನ್ನು ಪರೀಕ್ಷೆಗೆ ಒಳಪಡಿಸಿದೆ. ಇದರಲ್ಲಿ ರಕ್ತದೊತ್ತಡ ಮತ್ತು ಮಧುಮೇಹಕ್ಕೆ ಸಂಬಂಧಿಸಿದಂತೆ 72,75,369 ಜನರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 19,94,530 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 14,78,842 ಜನರಲ್ಲಿ ಮಧುಮೇಹವಿರುವುದು ಖಚಿತವಾಗಿದೆ. ಈ ಪ್ರಮಾಣವು ಕರ್ನಾಟಕದಲ್ಲಿ ಸಾಂಕ್ರಾಮಿಕವಲ್ಲದ ರೋಗ ಪ್ರಮಾಣ ಹೆಚ್ಚಳವಾಗುತ್ತಿರುವುದರ ಸಂಕೇತವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಕರ್ನಾಟಕದ ಯಾವ ಜಿಲ್ಲೆಯಲ್ಲಿ ಹೇಗಿದೆ ಆರೋಗ್ಯ ಸಮಸ್ಯೆ
ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಧಿಕ ರಕ್ತದೊತ್ತಡ ಪ್ರಕರಣಗಳು ದಾಖಲಾಗಿವೆ. ಈ ಜಿಲ್ಲೆಯಲ್ಲಿ 14,15,047 ಜನರಲ್ಲಿ ತಪಾಸಣೆಗೆ ಒಳಪಡಿಸಲಾಗಿದ್ದು, ಅದರಲ್ಲಿ 3,24,403 ಜನರಲ್ಲಿ ಅಧಿಕ ರಕ್ತದೊತ್ತಡ ಇರುವುದು ಖಚಿತವಾಗಿದೆ. ಮೈಸೂರು ಜಿಲ್ಲೆಯಲ್ಲಿ 4,35,504 ಜನರನ್ನು ಪರೀಕ್ಷಿಸಲಾಗಿದ್ದು, 1,87,089 ಪ್ರಕರಣಗಳು ವರದಿಯಾಗಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ 2,23,679 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,34,725 ಜನರು ರಕ್ತದೊತ್ತಡ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಉಡುಪಿ ಮತ್ತು ತುಮಕೂರು ಜಿಲ್ಲೆಯಲ್ಲೂ ಹೆಚ್ಚು ಜನರಲ್ಲಿ ಈ ಆರೋಗ್ಯ ಸಮಸ್ಯೆ ಇದೆ. ಯಾದಗಿರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಡಿಮೆ ಜನರಲ್ಲಿ ಈ ಆರೋಗ್ಯ ಸಮಸ್ಯೆ ಇರುವುದು ವರದಿಯಾಗಿದೆ.
ಮಧುಮೇಹ ಯಾವ ಜಿಲ್ಲೆಯಲ್ಲಿ ಹೆಚ್ಚು
ರಕ್ತದೊತ್ತಡದ ನಂತರ ಮಧುಮೇಹ ಆರೋಗ್ಯ ಸಮಸ್ಯೆ ಹಲವರಲ್ಲಿ ಇದೆ. 13,81,829 ಜನರನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,77,231 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಬೆಳಗಾವಿ ಮತ್ತೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮೈಸೂರು 1,40,994 ಪ್ರಕರಣಗಳು ವರದಿಯಾಗಿದೆ. ತುಮಕೂರು, ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಹೆಚ್ಚಿನ ಜನರಲ್ಲಿ ಮಧುಮೇಹ ಕಾಣಿಸಿಕೊಂಡಿದೆ. ಇನ್ನು ಬೆಂಗಳೂರು ನಗರದಲ್ಲಿ ಪೂರ್ಣ ಪ್ರಮಾಣದಲ್ಲಿ ಗೃಹ ಆರೋಗ್ಯ ಯೋಜನೆಯ ಪರಿಶೀಲನೆ ನಡೆದಿಲ್ಲವಾದರೂ, 54,775 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಅದರಲ್ಲಿ 19,336 ಜನರಲ್ಲಿ ಮಧುಮೇಹ ಕಾಣಿಸಿಕೊಂಡಿದೆ.
ಕ್ಯಾನ್ಸರ್ ತಪಾಸಣೆ
ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಹೆಚ್ಚು ಆತಂಕ ಮೂಡಿಸಿರುವ ಆರೋಗ್ಯ ಸಮಸ್ಯೆ ಎಂದರೆ ಅದು ಕ್ಯಾನ್ಸರ್. ಕರ್ನಾಟಕದಲ್ಲಿ 52,06,304 ಜನರನ್ನು ಬಾಯಿಯ ಕ್ಯಾನ್ಸರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 3,964 ಜನರಲ್ಲಿ ಬಾಯಿ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. 21,157 ಜನರಲ್ಲಿ ಕ್ಯಾನ್ಸರ್ ಇರುವ ಸಾಧ್ಯತೆ ಇದೆ ಎಂದು ಪರಿಗಣಿಸಲಾಗಿದ್ದು, ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಬಾಯಿ ಕ್ಯಾನ್ಸರ್ ಪ್ರಕರಣಗಳು ದೃಢಪಟ್ಟಿವೆ. ಮೂರನೇ ನಗರವಾಗಿ ಬೆಳಗಾವಿ ಇದೆ. ಇನ್ನು ಸ್ತನ ಕ್ಯಾನ್ಸರ್ ತಪಾಸಣೆಯನ್ನು 20,70,858 ಜನ ಮಹಿಳೆಯರಿಗೆ ಮಾಡಲಾಗಿದ್ದು, ಅದರಲ್ಲಿ 3,272 ಪ್ರಕರಣಗಳನ್ನು ಗುರುತಿಸಲಾಗಿದೆ. ಉಡುಪಿ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಜನರಲ್ಲಿ ಸ್ತನ ಕ್ಯಾನ್ಸರ್ ದೃಢಪಟ್ಟಿದೆ.
16,07,446 ಮಹಿಳೆಯರನ್ನು ಗರ್ಭಕಂಠದ ಕ್ಯಾನ್ಸರ್ ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲಿ 1,658 ಜನರಿಗೆ ಗರ್ಭಕಂಠ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು. ಉಡುಪಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ.
ಮೂತ್ರಪಿಂಡ, ಯಕೃತ್ತು, ಶ್ವಾಸಕೋಶದ ಆರೋಗ್ಯ ಪರಿಶೀಲನೆ
ಕರ್ನಾಟಕದಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಅನುಮಾನ - ಸಂಬಂಧಿಸಿದ ಸಮಸ್ಯೆಗಳಿರುವ 31,53,077 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರಲ್ಲಿ 11,108 ಜನರಲ್ಲಿ ಮೂತ್ರಪಿಂಡ ಆರೋಗ್ಯ ಸಮಸ್ಯೆ ಇರುವುದು ದೃಢಪಟ್ಟಿದೆ. ಬೆಳಗಾವಿ, ಮೈಸೂರು ಮತ್ತು ವಿಜಯನಗರಗಳಲ್ಲಿ ಹೆಚ್ಚಿನ ಜನರಲ್ಲಿ ಈ ಆರೋಗ್ಯ ಸಮಸ್ಯೆ ವರದಿಯಾಗಿದೆ.
ಮದ್ಯಪಾನೇತರ ಫ್ಯಾಟಿ ಲಿವರ್ ಕಾಯಿಲೆ (NAFLD) ಪರೀಕ್ಷೆಯನ್ನು 31,43,460 ಜನರಲ್ಲಿ ಮಾಡಲಾಗಿದ್ದು, ಅದರಲ್ಲಿ 4,481 ಜನರಲ್ಲಿ ಈ ರೋಗ ದೃಢಪಟ್ಟಿದೆ. ಪ್ರತಿರೋಧಕ ಶ್ವಾಸಕೋಶದ ಕಾಯಿಲೆ (COPD) ಪರಿಶೀಲನೆಗೆ 31,34,623 ಜನರನ್ನು ಒಳಪಡಿಸಲಾಗಿದ್ದು, ಅವರಲ್ಲಿ 24,379 ಜನರಲ್ಲಿ ಈ ರೋಗ ದೃಢಪಟ್ಟಿದೆ. ಬೆಳಗಾವಿಯಲ್ಲಿ 4,200 ಪ್ರಕರಣಗಳು ಮೈಸೂರು, ಉಡುಪಿ ಮತ್ತು ಮಂಡ್ಯದಲ್ಲಿ ವರದಿಯಾಗಿವೆ.
ಮಾನಸಿಕ ಆರೋಗ್ಯ ತಪಾಸಣೆ
ಕರ್ನಾಟಕದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಯೂ ಹೆಚ್ಚಾಗಿದೆ. ಕೋವಿಡ್ ನಂತರ ಹಲವರು ಮಾನಸಿಕ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದಾರೆ. ಒತ್ತಡದ ಜೀವನ ಶೈಲಿಯೂ ಇದಕ್ಕೆ ಕಾರಣವಾಗಿದೆ. 30,04,223 ಜನರನ್ನು ಮಾನಸಿಕ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದ್ದು, ಅದರಲ್ಲಿ 20,353 ಜನರಲ್ಲಿ ಆರೋಗ್ಯ ಸಮಸ್ಯೆ ಇರುವುದು ದೃಢಪಟ್ಟಿದೆ. 28,12,968 ಜನರನ್ನು ನರವೈಜ್ಞಾನಿಕ ಅಸ್ವಸ್ಥತೆಗಳ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದ್ದು, 8,658 ಜನರಲ್ಲಿ ಆರೋಗ್ಯ ಸಮಸ್ಯೆ ಇರುವುದು ಕಂಡು ಬಂದಿದೆ. ಮೈಸೂರು ಮತ್ತು ಬೆಳಗಾವಿಯಲ್ಲಿ ಹೆಚ್ಚು ಜನರಲ್ಲಿ ಈ ಆರೋಗ್ಯ ಸಮಸ್ಯೆ ವರದಿಯಾಗಿದೆ.
ಗ್ರಾಮೀಣ ಭಾಗದಲ್ಲೂ ಆರೋಗ್ಯ ಸಮಸ್ಯೆ
ಗೃಹ ಆರೋಗ್ಯ ಯೋಜನೆ - ಆರೋಗ್ಯ ಪರಿಶೀಲನೆಯಲ್ಲಿ ಕಂಡು ಬಂದಿರುವ ಅತಿ ದೊಡ್ಡ ಆಘಾತಕಾರಿ ಅಂಶವೆಂದರೆ ಇಲ್ಲಿಯ ವರೆಗೆ ವಿವಿಧ ಆರೋಗ್ಯ ಸಮಸ್ಯೆಗಳು ನಗರ ಭಾಗದಲ್ಲಿ ಹೆಚ್ಚಾಗಿತ್ತು ಎಂದು ಅಂದಾಜಿಸಲಾಗಿತ್ತು. ಆದರೆ ಈ ಯೋಜನೆಯ ಮೂಲಕ ನಗರ ಪ್ರದೇಶಗಳಲ್ಲಿ ಮಾತ್ರವಲ್ಲ. ಕರ್ನಾಟಕದ ಗ್ರಾಮೀಣ ಭಾಗಗಳಲ್ಲೂ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇನ್ನು ಈ ಯೋಜನೆಯ ಮೂಲಕ ಪ್ರಾರಂಭದ ಹಂತದಲ್ಲೇ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡುತ್ತಿರುವುದರಿಂದ ಮುಂದೆ ಚಿಕಿತ್ಸೆಗೆ ಸಹಕಾರಿಯಾಗಿದೆ.
ಗೃಹ ಆರೋಗ್ಯ ಯೋಜನೆಗೆ ಸಂಬಂಧಿಸಿದಂತೆ ಜನ ಹೆಚ್ಚಾಗಿ ಕೇಳುವ ಪ್ರಶ್ನೆಗಳು
1. ಗೃಹ ಆರೋಗ್ಯ ಯೋಜನೆ ಎಂದರೇನು ?
ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಆರಂಭಿಸಿರುವ ಪ್ರಮುಖ ಯೋಜನೆ ಇದಾಗಿದೆ. 30 ವರ್ಷ ಮೇಲ್ಪಟ್ಟ ಜನರಿಗೆ ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧಿ ನೀಡುವುದು ಇದರ ಉದ್ದೇಶವಾಗಿದೆ.
2. ಗೃಹ ಆರೋಗ್ಯ ಯೋಜನೆಯಲ್ಲಿ ಯಾವ ರೋಗಗಳನ್ನು ಪರೀಕ್ಷಿಸಲಾಗುತ್ತದೆ ?
ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್ ಸೇರಿದಂತೆ 14 ಸಾಂಕ್ರಾಮಿಕವಲ್ಲದ ರೋಗಗಳನ್ನು ಪರೀಕ್ಷಿಸಲಾಗುತ್ತದೆ.
3. ಗೃಹ ಆರೋಗ್ಯ ಯೋಜನೆಯಲ್ಲಿ ಯಾರು ಆರೋಗ್ಯ ತಪಾಸಣೆ ಮಾಡುತ್ತಾರೆ ?
ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸುತ್ತಾರೆ.
4. ಗೃಹ ಆರೋಗ್ಯ ಯೋಜನೆಯಲ್ಲಿ ಔಷಧಿ ಉಚಿತವಾಗಿದೆಯೇ?
ಹೌದು. ಆರೋಗ್ಯ ತಪಾಸಣೆ ಬಳಿಕ ಅಗತ್ಯವಿರುವವರಿಗೆ ಸ್ಥಳದಲ್ಲೇ ಉಚಿತ ಔಷಧಿ ನೀಡಲಾಗುತ್ತದೆ.
5. ಗೃಹ ಆರೋಗ್ಯ ಯೋಜನೆಯ ಉದ್ದೇಶ ಏನು?
ಜನರಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಿ ಸಮಯಕ್ಕೆ ಚಿಕಿತ್ಸೆ ನೀಡುವುದು ಮತ್ತು ಅಕಾಲಿಕ ಮರಣಗಳನ್ನು ತಪ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ













Click it and Unblock the Notifications