Congress Guarantee: ಗ್ಯಾರಂಟಿ ಯೋಜನೆಗಳು ಬಿಪಿಎಲ್ ಕಾರ್ಡ್‌ದಾರರಿಗೆ ಮಾತ್ರವೇ?: ಬಜೆಟ್‌ ಹೊತ್ತಲಿ ಏನಿದು ಚರ್ಚೆ?

ಬೆಂಗಳೂರು, ಫೆಬ್ರವರಿ 26: ರಾಜ್ಯ ಕಾಂಗ್ರೆಸ್‌ 2023 ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಪಂಚ ಗ್ಯಾರಂಟಿ ಯೋಜನೆಗಳ ಭರವಸೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದೀಗ ಪಂಚ ಗ್ಯಾರಂಟಿ ಯೋಜನೆಯಲ್ಲಿ ಭಾರೀ ಬದಲಾವಣೆಗಳಾಗುತ್ತಿವೆ. ಕಾಂಗ್ರೆಸ್‌ ಬಹುಮತದಿಂದ ಅಧಿಕಾರಕ್ಕೆ ಬಂದರೆ ಪಂಚ ಗ್ಯಾರಂಟಿ ಯೋಜನೆಗಳು ಜಾರಿ ಎಂದಿದ್ದ ಕಾಂಗ್ರೆಸ್‌ ನಲ್ಲಿ ಇದೀಗ ಈ ಗ್ಯಾರಂಟಿ ಯೋಜನೆಗಳು ಬಿಪಿಎಲ್‌ ಕಾರ್ಡ್‌ದಾರರಿಗೆ ಮಾತ್ರ ಎಂಬ ಚರ್ಚೆ ನಡೆಯುತ್ತಿದೆ.

ಹೌದು, ಪಂಚ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಹಿರಿಯ ಸದಸ್ಯರೇ ಆಕ್ಷೇಪ ಎತ್ತುವ ಮೂಲಕ ಸಾರ್ವಜನಿಕ ವಲಯದಲ್ಲಿಈ ಕುರಿತು ಚರ್ಚೆ ನಡೆಯುವಂತಾಗಿದೆ. ಈಗಾಗಲೇ ಮಾರ್ಚ್‌ 7 ರಂದು ರಾಜ್ಯ ಬಜೆಟ್‌ ಅನ್ನು ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದತೆಯನ್ನ ಮಾಡಿಕೊಳ್ಳುತ್ತಿದ್ದಾರೆ. ಈ ಹೊತ್ತಲ್ಲಿ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಅವರು ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿರುವ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ.

Karnataka Guarantee Schemes Limited To Bpl Family The Ministers Statement

ಈ ಕುರಿತು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್‌ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಬಿಪಿಎಲ್ ಕಾರ್ಡ್‌ದಾರರಿಗೆ ಮಾತ್ರ ಯಾಕೆ ನೀಡಬಾರದು ಎಂದು ತುರುವೆಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ತುಮಕುರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಲಹೆ ನೀಡಿದರು. ವಿಪಕ್ಷದವರು ಸಲಹೆ ನೀಡಿದರೆ ಚರ್ಚೆ ಮಾಡುವುದಾಗಿ ಈ ವೇಳೆ ಹೇಳಿದ್ದೇನೆ. ಸ್ವಯಂಪ್ರೇರಿತವಾಗಿ ಅನೇಕ ಜನ ಗ್ಯಾರಂಟಿ ಯೋಜನೆಗಳನ್ನು ಬಿಡುತ್ತಿದ್ದಾರೆ. ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು ಸೇರಿದಂತೆ ಬಹಳಷ್ಟು ಜನ ಬಿಟ್ಟಿದ್ದಾರೆ. ಅದನ್ನು ಮುಂದುವರಿದು ಬಡವರಿಗಾಗಿ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಸಲಹೆ ಕೊಟ್ಟಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಅಗತ್ಯತೆಯ ಬಗ್ಗೆ ಚರ್ಚೆ ಮಾಡಬೇಕು. ನಂತರ ಏನೆಂಬುದು ಗೊತ್ತಾಗಲಿದೆ. ಸಾಧಕ-ಬಾಧಕಗಳನ್ನು ಚರ್ಚಿಸಬೇಕು. ಚುನಾವಣೆ ಸಂದರ್ಭದಲ್ಲಿ ಬರೀ ಬಿಪಿಎಲ್ ಕಾರ್ಡ್‌ದಾರರಿಗೆ ಮಾತ್ರ ಎಂದು ಹೇಳಿರಲಿಲ್ಲ. ಚರ್ಚೆ ಮಾಡಿದ ಮೇಲೆ ಸರ್ಕಾರ ತೀರ್ಮಾನ ಮಾಡಬೇಕಾಗುತ್ತದೆ. ಗ್ಯಾರಂಟಿ ಯೋಜನೆಗಳಿಂದ ಹೊರೆಯಾಗಿದೆ ಎಂಬುದರಲ್ಲಿ ಎರಡು‌ ಮಾತಿಲ್ಲ. ಬಡವರಿಗಾಗಿ ಯೋಜನೆಗಳನ್ನು ನೀಡಿದ್ದರಿಂದ ಹೊರೆಯಾಗಿದೆ? ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತದೆ ಎಂಬುದು ಗೊತ್ತಿತ್ತು. ಬಡವರಿಗಾಗಿ ಕೊಡುವ ಕಾರ್ಯಕ್ರಮಗಳಿಂದ ಹೊರೆಯಾಗಲೇಬೇಕು. ಈ ವಿಚಾರ ಗೊತ್ತಿದ್ದೆ ಮಾಡಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದ ನಡುವೆಯೇ 2025-26ನೇ ಸಾಲಿನ ಬಜೆಟ್‌ ಮಂಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಹೊತ್ತಲಿ ಪರಮೇಶ್ವರ್‌ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ಡಾ. ಜಿ ಪರಮೇಶ್ವರ ಅವರು ಅಧ್ಯಕ್ಷರಾಗಿದ್ದರು ಎನ್ನುವುದೂ ಗಮನಾರ್ಹ. ಇದೀಗ ಗೃಹ ಸಚಿವರದ ಪರಮೇಶ್ವರ್‌ ಅವರೇ ಪಂಚ ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಭಾರವಾಗುತ್ತಿದೆ ಎನ್ನುವ ಮಾಡು ತೀವ್ರ ಚರ್ಚೆಗೆ ಕಾರಣವಾಗಿದೆ.

ಇತ್ತ ಕಾಂಗ್ರೆಸ್‌ ಪಾಳಯದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿ ಕುರಿತು ಮೊದಲಿನಿಂದಲೂ ತೀವ್ರ ವಿರೋಧ ಕೇಳಿ ಬಂದಿದೆ. ಗ್ಯಾರಂಟಿಯಿಂದಾಗಿ ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಅಭಿವೃದ್ಧಿ ಯೋಜನೆಗೂ ಒತ್ತು ಸಿಗಬೇಕು ಎಂಬ ಒತ್ತಾಯ ಆಡಳಿತಾರೂಢ ಕಾಂಗ್ರೆಸ್‌ ಶಾಸಕರಿಂದಲೇ ಕೇಳಿ ಬಂದಿದೆ. ಬಜೆಟ್‌ ಹೊತ್ತಲಿ ಈ ಚರ್ಚೆಯನ್ನ ಗಮನಿಸಿದರೇ ಗ್ಯಾರಂಟಿಗಳ ಪರಿಷ್ಕರಣೆ ಆಗಲಿದೆಯಾ? ಎನ್ನುವ ಪ್ರಶ್ನೆ ಉದ್ಭವಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+