Basavaraj Bommai: ಕರ್ನಾಟಕ ಜಂಗಲ್ ರಾಜ್ ಆಗಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು ಜನವರಿ 16: ತುಂಗಭದ್ರಾ ನೀರು ವಿಷವಾಗುತ್ತಿದ್ದು, ಬೀದರ್‌ನಲ್ಲಿ ಎಟಿಎಂ ಬಳಿ ನಡೆದ ಶೂಟಿಂಗ್ ಪ್ರಕರಣದಿಂದ ಕರ್ನಾಟಕ ಜಂಗಲ್ ರಾಜ್ ಆಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ 'ಎಕ್ಸ' ಖಾತೆಯ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಸರಣಿ ಟ್ವಿಟ್ ಮಾಡುವ ಮೂಲಕ ಕಾಂಗ್ರೆಸ್ ಆಡಳಿತದ ವಿರುದ್ಧ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ನಡೆದ ಭಯಾನಕ ಘಟನೆಯ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ಕರ್ನಾಟಕ ಜಂಗಲ್ ರಾಜ್ ಆಗಿದೆ ಎಂದು ಹೇಳಿದ್ದಾರೆ. 'ಬೀದರನಲ್ಲಿ ಹಾಡ ಹಗಲೇ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದು ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ.
ಬೀದರನಲ್ಲಿ ಹಾಡ ಹಗಲೇ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದು ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ.
— Basavaraj S Bommai (@BSBommai) January 16, 2025
ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ…
ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು, ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಅಪರಾಧ ಮಾಡುವವರಿಗೆ ಯಾರದೇ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ.

ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ' ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ಕೊಟ್ಟಿದ್ದಾರೆ.
ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದೇ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
'ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ತುಂಗಭದ್ರಾ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು ಸುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ. ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಲು ಹೊರಗಡೆಯಿಂದ ಕಲುಷಿತ ನೀರು ಅಥವಾ ರಸಾಯನಿಕ ನದಿಗೆ ಸೇರ್ಪಡೆಯಾಗುತ್ತಿರುವ ಕುರಿತು ಜಿಲ್ಲಾಡಳಿತ ತಕ್ಷಣೆ ಪತ್ತೆ ಹಚ್ಚುವ ಕೆಲಸ ಮಾಡಬೇಕು. ಜಿಲ್ಲಾಧಿಕಾರಿಗಳು ಕೂಡಲೇ ನೀರನ್ನು ತಪಾಸಣೆಗೆ ಕಳುಹಿಸಿಕೊಡಬೇಕು. ಅಲ್ಲದೇ ನದಿಯ ನೀರನ್ನು ಯಾರೂ ಜನ ಜಾನುವಾರುಗಳಿಗೆ ಬಳಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು' ಎಂದು ಆಗ್ರಹಿಸಿದ್ದಾರೆ.












Click it and Unblock the Notifications