ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಕೊರೊನಾ ಲಸಿಕೆ ಪಡೆಯುವವರಿಗೆ ಸಿಹಿಸುದ್ದಿ!

|
Google Oneindia Kannada News

ಬೆಂಗಳೂರು, ಮಾರ್ಚ್ 25: ರಾಜ್ಯದಲ್ಲಿ ಕೊವಿಡ್-19 ಸೋಂಕಿನ ಎರಡನೇ ನಿಯಂತ್ರಣಕ್ಕೆ ಲಸಿಕೆ ವಿತರಣೆ ಕಾರ್ಯಕ್ಕೆ ವೇಗ ಹೆಚ್ಚಿಸಲಾಗುತ್ತಿದೆ. ಇದರ ಮಧ್ಯೆ ನಾಲ್ಕು ದಿನಗಳಲ್ಲಿ ಕೊರೊನಾ ಲಸಿಕೆ ಖಾಲಿ ಆಗುತ್ತೆ ಅನ್ನುವಷ್ಟರಲ್ಲೇ ಸರ್ಕಾರ ಸಿಹಿಸುದ್ದಿ ನೀಡಿದೆ.

"ನಿನ್ನೆ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೊನಾವೈರಸ್ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರವು ನೀಡಿದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಕೊವಿಡ್-19 ಲಸಿಕೆ ರವಾನೆಯಾಗಲಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು, ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕೆಂದು ಕೋರುತ್ತೇನೆ" ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮುಂದೇನು: ಕರ್ನಾಟಕದಲ್ಲಿ 4 ದಿನಕ್ಕೆ ಕೊರೊನಾ ಲಸಿಕೆ ಖಾಲಿ!ಮುಂದೇನು: ಕರ್ನಾಟಕದಲ್ಲಿ 4 ದಿನಕ್ಕೆ ಕೊರೊನಾ ಲಸಿಕೆ ಖಾಲಿ!

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಣ ಹೇಗೆ ಸಾಧ್ಯ. ಕೊರೊನಾವೈರಸ್ ಲಸಿಕೆ ಪಡೆದುಕೊಳ್ಳುವುದಕ್ಕೆ ಏನು ಮಾಡಬೇಕು. ಲಸಿಕೆ ಪಡೆಯಲು ಅನುಸರಿಸಬೇಕಾದ ನಿಯಮಗಳ ಬಗ್ಗೆ ಸುಧಾಕರ್ ಸರಣಿ ಟ್ವೀಟ್ ಕುರಿತು ಒಂದು ಮಾಹಿತಿ ಇಲ್ಲಿದೆ.

ಮುನ್ನಚ್ಚರಿಕೆ ವಹಿಸಿ ಲಸಿಕೆ ಹಾಕಿಸಿಕೊಳ್ಳಿರಿ

ಮುನ್ನಚ್ಚರಿಕೆ ವಹಿಸಿ ಲಸಿಕೆ ಹಾಕಿಸಿಕೊಳ್ಳಿರಿ

"ಕಳೆದ ವರ್ಷ ಕೊರೊನಾ ವೈರಾಣುವಿನ ಮೊದಲ ಅಲೆ ಅಪ್ಪಳಿಸಿದಾಗ ಲಸಿಕೆ ನಮಗೆ ಒಂದು ಆಶಾಕಿರಣವಾಗಿತ್ತು. ಆದರೆ ಈಗ ಅದು ವಾಸ್ತವವಾಗಿದೆ. ಇದು ಅಷ್ಟು ಸಾಮಾನ್ಯವಾದ ವಿಷಯವಲ್ಲ, ಅಷ್ಟು ಸುಲಭದ ಕೆಲಸವೂ ಆಗಿರಲಿಲ್ಲ. ಇದರ ಹಿಂದೆ ನಮ್ಮ ವಿಜ್ಞಾನಿಗಳ ಅಚಲ ತಪಸ್ಸು, ಕಠಿಣ ಪರಿಶ್ರಮ, ನಿರಂತರ ಪ್ರಯತ್ನಗಳಿವೆ. ಉದಾಹರಣೆಗೆ ರೋಟಾ ವೈರಸ್ ಲಸಿಕೆ ಸಿಗಲು 29 ವರ್ಷ ಬೇಕಾಯ್ತು. ಎಬೋಲಾ ವೈರಸ್ ಲಸಿಕೆ ಕಂಡುಹಿಡಿಯಲು 20 ವರ್ಷ ಕಾಯಬೇಕಾಯ್ತು" ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೊರೊನಾಗೆ ಅತಿ ಕಡಿಮೆ ಅವಧಿಯಲ್ಲೇ ಲಸಿಕೆ

ಕೊರೊನಾಗೆ ಅತಿ ಕಡಿಮೆ ಅವಧಿಯಲ್ಲೇ ಲಸಿಕೆ

"ಕೊರೊನಾವೈರಸ್ ಲಸಿಕೆ ಬರುವ ಮುನ್ನ, ಮಂಪ್ಸ್ ವೈರಸ್ ಸೋಂಕಿಗೆ 4 ವರ್ಷದಲ್ಲಿ ಲಸಿಕೆ ಕಂಡುಹಿಡಿದಿದ್ದೇ ಈವರೆಗೂ ನಮಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಸಿಕ್ಕ ಲಸಿಕೆಯಾಗಿತ್ತು. ಈಗ ಕೊರೊನಾವೈರಸ್ ಸೋಂಕಿಗೆ 1 ವರ್ಷದೊಳಗೆ ಲಸಿಕೆ ಕಂಡುಹಿಡಿಯಲಾಗಿದೆ. ಇಂತಹ ಕಠಿಣ ಪರಿಶ್ರಮದ ಪ್ರತಿಫಲವಾದ ಲಸಿಕೆ ನಮಗೆ ದೊರೆತಿರುವಾಗ ಅದರ ಲಾಭ ಪಡೆಯುವುದು ನಮ್ಮೆಲ್ಲರ ಕರ್ತವ್ಯ" ಎಂದು ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿ

ಲಸಿಕೆ ಹಾಕಿಸಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿ

"ಲಸಿಕೆ ಪಡೆದುಕೊಂಡ ವ್ಯಕ್ತಿ ತಾನು ಸೋಂಕಿನಿಂದ ಸುರಕ್ಷಿತವಾಗುವುದರ ಜೊತೆಗೆ ಇತರರ ಸುರಕ್ಷತೆಗೂ ಸಹಕಾರಿಯಾಗುವುದರಿಂದ ಲಸಿಕೆ ಪಡೆಯುವುದು ನಮ್ಮ ಸುರಕ್ಷತೆ ಜೊತೆಗೆ ಒಂದು ಸಾಮೂಹಿಕ ಸಾಮಾಜಿಕ ಜವಾಬ್ದಾರಿಯೂ ಆಗಿದೆ. ಆದ್ದರಿಂದ ಎಲ್ಲ ಅರ್ಹ ವ್ಯಕ್ತಿಗಳು ಈ ಕೂಡಲೇ http://cowin.gov.in ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿಕೊಂಡು ಅಥವಾ ತಮ್ಮ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ತಪ್ಪದೆ ಲಸಿಕೆ ಪಡೆಯಬೇಕೆಂದು ಮನವಿ ಮಾಡುತ್ತೇನೆ" ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

Recommended Video

ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ, ತರಗತಿಗಳು ನಡೆಯಲಿವೆ- ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ್ ಮಾಹಿತಿ | Oneindia Kannada
ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಪ್ರೋತ್ಸಾಹ

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಪ್ರೋತ್ಸಾಹ

"ತಮ್ಮ ಮನೆಯಲ್ಲಿ, ನೆರೆಹೊರೆಯಲ್ಲಿ, ಸ್ನೇಹಿತರಲ್ಲಿ ಬಂಧು-ಬಳಗದಲ್ಲಿರುವ ಎಲ್ಲ ಅರ್ಹ ವ್ಯಕ್ತಿಗಳಿಗೆ, ಅದರಲ್ಲೂ ವಿಶೇಷವಾಗಿ ಹಿರಿಯ ನಾಗರೀಕರಿಗೆ ಮತ್ತು ಸಹ-ಅಸ್ವಸ್ಥತೆ ಹೊಂದಿರುವವರಿಗೆ ಲಸಿಕೆ ಪಡೆಯಲು ಅರಿವು ಮೂಡಿಸಿ, ಪ್ರೋತ್ಸಾಹಿಸಿ, ಸಹಾಯ ಮಾಡಿರಿ. ನಾವೆಲ್ಲರೂ ಒಗ್ಗಟ್ಟಿನಿಂದ ಕರ್ನಾಟಕವನ್ನು ಕೊರೊನಾ ಮುಕ್ತ ರಾಜ್ಯವನ್ನಾಗಿ ಮಾಡೋಣ" ಎಂದು ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

English summary
Karnataka Has Received 4 Lakh Doses Of Coronavirus Vaccine, Dr Sudhakar Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X