ಕರ್ನಾಟಕ ದ್ವೇಷ ಭಾಷಣ ವಿಧೇಯಕ: ಇದು ಜನರ ಧ್ವನಿ ಹತ್ತಿಕ್ಕುವ ಕಾಯ್ದೆ: ಕರವೇ ತೀವ್ರ ವಿರೋಧ
Karnataka Hate Speech Bill 2025: ಕರ್ನಾಟಕ ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳು, ರೈತರು, ವಿಪಕ್ಷ ನಾಯಕರ ಪ್ರತಿಭಟನೆ ಎದುರಿಸಿತ್ತು. ಇದೀಗ ಕನ್ನಡ ಪರ ಚಳವಳಿಗಾರರ ಪ್ರತಿಭಟನೆ ಎದುರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ರಾಜ್ಯ ಸರ್ಕಾರ ಇತ್ತೀಚೆಗೆ ಸದನದಲ್ಲಿ ಮಂಡಿಸಿದ "ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ 2025" ಈ ಕಾನೂನು ಅನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ವಿರೋಧಿಸಿದ್ದಾರೆ. ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಏಕೆ ಕಾರಣವೇನು?, ಹೊಸ ಕಾನೂನು ಹಿಂದಿನ ಉದ್ದೇಶವೇನೆಂದು ಈ ಲೇಖನದಲ್ಲಿ ತಿಳಿಯೋಣ.
ರಾಜ್ಯದಲ್ಲಿ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಕಳೆದ ಬುಧವಾರ "ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ 2025' ಮಂಡಿಸಿತು. ಗೃಹ ಸಚಿವರು ಹೊಸ ಮಸೂದೆ ಮಂಡಿಸುತ್ತಿದ್ದಂತೆ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅವರ ಬೆನ್ನಲ್ಲೆ ಕರವೇ ಆಕ್ಷೇಪ ವ್ಯಕ್ತಪಡಿಸಿದೆ. ಮಸೂದೆ ಖಂಡಿಸಿ ಕರವೇ ನಾರಾಯಣಗೌಡ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕ ಸರ್ಕಾರವು ಪರಿಚಯಿಸಿರುವ "ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ, 2025" ಈ ಕಾನೂನು ಭಾರತದ ಸಂವಿಧಾನಕ್ಕೆ ವಿರೋಧವಾಗಿದೆ. ಇದು ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಕರ್ನಾಟಕ ರಕ್ಷಣಾ ವೇದಿಕೆಯು ಇದನ್ನು ತೀವ್ರವಾಗಿ ಖಂಡಿಸುತ್ತದೆ. ಈ ವಿಧೇಯಕವು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಕೂಡಲೇ ಇದನ್ನು ಹಿಂದಕ್ಕೆ ಪಡೆಯಬೇಕೆಂದು ಅವರು ಆಗ್ರಹಿಸಿದರು.
ಭಾರತದ ಸಂವಿಧಾನದ ಅನುಚ್ಛೇದ 19(1)(ಎ)ಯಲ್ಲಿ ಮಾತನಾಡುವ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಲಾಗಿದೆ. ಆದರೆ ಈ ವಿಧೇಯಕದಲ್ಲಿ "ದ್ವೇಷ ಭಾಷಣ"ಕ್ಕೆ ನೀಡಿರುವ ವ್ಯಾಖ್ಯೆಯೇ ಅಸ್ಪಷ್ಟವಾಗಿದೆ. ಸರ್ಕಾರದ ಉದ್ದೇಶವೇ ಅನುಮಾನ ಹುಟ್ಟಿಸುವಂತಿದೆ. ಹಿಂಸೆಗೆ ಪ್ರಚೋದನೆ ನೀಡುವ ಭಾಷಣಗಳನ್ನು ತಡೆಯಲು ಈಗಿರುವ ಕಾನೂನುಗಳಲ್ಲೇ ಅವಕಾಶ ಇದೆ. ಆದರೆ ಸರ್ಕಾರ ಈಗ ರೂಪಿಸಿರುವ ದ್ವೇಷಭಾಷಣ ಕಾಯ್ದೆಯ ಕರಡಿನಲ್ಲಿ ಧರ್ಮ, ಜಾತಿ, ಲಿಂಗ, ಭಾಷೆ, ಲೈಂಗಿಕತೆ ಮುಂತಾದವುಗಳ ಆಧಾರದಲ್ಲಿ "ಅಸಾಮರಸ್ಯ ಅಥವಾ ದ್ವೇಷದ ಭಾವನೆಗಳನ್ನು" ಮೂಡಿಸುವ ಯಾವುದೇ ಮಾತು ಅಥವಾ ಬರಹವನ್ನು ಅಪರಾಧ ಎಂದು ಕರೆಯಲಾಗಿದೆ.
ಪ್ರಜಾಪ್ರಭುತ್ವದ ಮೂಲ ತತ್ವಕ್ಕೆ ಹಾನಿ
ಕಾಯ್ದೆ ಜಾರಿಯಾದರೆ ಸರ್ಕಾರದ ನೀತಿಗಳ ವಿರುದ್ಧದ ಟೀಕೆ, ಸಾಮಾಜಿಕ ಚರ್ಚೆ, ಹಾಸ್ಯ ಅಥವಾ ಸತ್ಯವನ್ನು ಹೇಳುವುದು ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವಾಗಿದ್ದಂತಿದೆ. ಇದು ಪ್ರಜಾಪ್ರಭುತ್ವದ ಮೂಲ ತತ್ವಕ್ಕೆ ಹಾನಿ ಮಾತ್ರವಲ್ಲ ಪ್ರಜಾಪ್ರಭುತ್ವದ ಕಚ್ಚು ಹಿಸುಕುವ ಯತ್ನ ಎಂದು ಅವರು ವಿಶ್ಲೇಷಿಸಿದರು.
ಸಂವಿಧಾನದ ಅನುಚ್ಛೇದ 19(2)ಯಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ನಿರ್ಬಂಧಗಳು ಇದ್ದರೂ, ಈ ವಿಧೇಯಕವು ಅದನ್ನು ಮೀರಿ ಹೋಗುತ್ತದೆ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳು ಸಂಜ್ಞೆಯವು ಮತ್ತು ಜಾಮೀನು ಇಲ್ಲದ್ದು. ಯಾರಾದರೂ ದೂರು ಕೊಟ್ಟರೆ ಸಾಕು, ಪೊಲೀಸರು ತಕ್ಷಣ ಬಂಧನ ಮಾಡಬಹುದು. ಆರೋಪಿಗಳಿಗೆ ನೋಟಿಸ್ ನೀಡುವ ಅಗತ್ಯವೂ ಇರುವುದಿಲ್ಲ. ಇದು ಎಂಥ ಕರಾಳ ಕಾಯ್ದೆ? ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳುಮಟ್ಟದ ಕಾಯ್ದೆ ನಮಗೆ ಬೇಕೆ? ಎಂದು ಪ್ರಶ್ನೆ ಮಾಡಿದರು.
ಇದು ಸ್ವಾತಂತ್ರ್ಯ ಕಿತ್ತುಕೊಳ್ಳುವ ಕಾನೂನು
ವಿಧೇಯಕದ ಕಲಂ 4ರಲ್ಲಿ ಪ್ರತಿಬಂಧಕ ಕ್ರಮಗಳನ್ನೂ ಸಹ ಉಲ್ಲೇಖಿಸಲಾಗಿದೆ. ಪೊಲೀಸರು ಅಥವಾ ಅಧಿಕಾರಿಗಳು "ಸಂಭಾವ್ಯ ಅಪರಾಧ" ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆಗಳು, ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯಬಹುದು. ಕಲಂ 6ರಲ್ಲಿ ಸರ್ಕಾರ ಹೇಳುತ್ತಿರುವ 'ದ್ವೇಷ ಭಾಷಣ'ಗಳನ್ನು ಬ್ಲಾಕ್ ಮಾಡುವ ಅಧಿಕಾರವನ್ನೂ ನೀಡಲಾಗಿದೆ. ಇದರ ಮೂಲಕ ಸರ್ಕಾರದ ಟೀಕೆ ಮಾಡುವ ಪೋಸ್ಟ್ಗಳನ್ನು ಸುಲಭವಾಗಿ ತೆಗೆದುಹಾಕಬಹುದು. ಇದು ಸಂವಿಧಾನದಲ್ಲಿ ನೀಡಿರುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ.
ಜನರ ಧ್ವನಿ ಹತ್ತಿಕ್ಕುವ ಕಾಯ್ದೆ ಬೇಡ!
ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೀಡಾಗುತ್ತಾರೆ. ಅನ್ಯಾಯ ಅಥವಾ ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ "ಭಾವನಾತ್ಮಕ ಹಾನಿ" ಎಂದು ಆರೋಪಿಸಿ ಬಂಧನ ಮಾಡಲು ಇದು ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಅಪಾಯಕ್ಕೆ ಸಿಲುಕುತ್ತವೆ. ಸಾಮಾಜಿಕ ಮಾಧ್ಯಮದಲ್ಲಿ ಹಾಸ್ಯ ಅಥವಾ ಟೀಕೆಯನ್ನು ದ್ವೇಷ ಎಂದು ಕರೆದು ಬ್ಲಾಕ್ ಮಾಡಬಹುದು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂಥಹ ಕಾಯ್ದೆ ಯಾವುದೇ ಕಾರಣಕ್ಕೂ ಜಾರಿಯಾಗಕೂಡದು ಎಂದು ಅವರು ಪುನರುಚ್ಚರಿಸಿದರು.
ಕಾಯ್ದೆಯ ರಾಜಕೀಯ ದುರುಪಯೋಗ ಸಾಧ್ಯತೆ
ಈ ವಿಧೇಯಕವು ಹಳೆಯ ರಾಜದ್ರೋಹ ಕಾನೂನು (ಐಪಿಸಿ ಸೆಕ್ಷನ್ 124ಎ) ಅಥವಾ ಯುಎಪಿಎಯಂತೆ ರಾಜಕೀಯ ದುರುಪಯೋಗಕ್ಕೆ ಬಳಕೆಯಾಗುವ ಸಾಧ್ಯತೆಯೇ ಹೆಚ್ಚಾಗಿದೆ. ಐಟಿ ಆಕ್ಟ್ ಸೆಕ್ಷನ್ 66ಎಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿತು. ರಾಜ್ಯ ಸರ್ಕಾರ ತಂದಿರುವ ವಿಧೇಯಕ ಇದೇ ಮಾದರಿಯದ್ದು. "ಸಾಮಾಜಿಕ ಸಾಮರಸ್ಯ"ದ ಹೆಸರಲ್ಲಿ ಅಭಿವ್ಯಕ್ತಿಯನ್ನು ನಿರ್ಬಂಧಿಸುವುದು ಪ್ರಜಾಸತ್ತೆಯನ್ನು ದುರ್ಬಲಗೊಳಿಸುತ್ತದೆ ಎಂದು ಅವರು ವಿವರಿಸಿದರು.
ಕಾನೂನು ಹಿಂಪಡೆಯದಿದ್ದರೆ ಹೋರಾಟ: ಎಚ್ಚರಿಕೆ
ಕರ್ನಾಟಕ ರಕ್ಷಣಾ ವೇದಿಕೆಯು ಈ ವಿಧೇಯಕವನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸುತ್ತದೆ. ಹಿಂದಕ್ಕೆ ಪಡೆಯದೇ ಹೋದರೆ ನಾವು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ. ಈ ದೇಶದ ನಾಗರಿಕರಿಗೆ ಸಂವಿಧಾನದ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಈ ಕಾನೂನು ನಾಗರಿಕರ ಸ್ವಾತಂತ್ರ್ಯವನ್ನು ಕೊಲ್ಲುತ್ತದೆ. ಹೀಗಾಗಿ ಇದು ಜಾರಿಯಾಗಲು ನಾವು ಅವಕಾಶ ನೀಡುವುದಿಲ್ಲ.
-
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications