• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೊಂದು ತನಿಖೆಯ ಕಂಟಕ

|

ಬೆಂಗಳೂರು, ಮಾರ್ಚ್ 31: ಆಪರೇಷನ್ ಕಮಲಕ್ಕಾಗಿ ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ತನಿಖೆಯ ಕಂಟಕ ಎದುರಾಗಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ.

ಎಫ್‌ಐಆರ್ ರದ್ದುಕೋರಿ ಯಡಿಯೂರಪ್ಪ ಈ ಹಿಂದೆ ಜಲಪ್ರತಿನಿಧಿಗಳ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಎಫ್‌ಐಆರ್‌ಗೆ ತಡೆ ನೀಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ಇದೀಗ ತಡೆಯಾಜ್ಞೆ ತೆರವುಗೊಳಿಸಿ ಯಡಿಯೂರಪ್ಪ ವಿರುದ್ಧ ತನಿಖೆಗೆ ಆದೇಶಿಸಿದೆ.

ಆಪರೇಷನ್ ಕಮಲ ಆಡಿಯೋ: ಯಡಿಯೂರಪ್ಪ ಪ್ರಕರಣ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ

ಜೆಡಿಎಸ್ ಬಿಟ್ಟು ಬಿಜೆಪಿಗೆ ಬರುವಂತೆ ಆಮಿಷವೊಡ್ಡಿ ಆಪರೇಷನ್ ಕಮಲ ನಡೆಸಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ದಾಖಲಿಸಿದ್ದರು.

   ಇವರ ಕೆಟ್ಟ ಆಡಳಿತದ ವಿರುದ್ಧ ನಾವು ಹೋರಾಟ ಮಾಡ್ತೀವಿ ! | DK Shivakumar | Oneindia Kannada

   ಸಿಎಂ ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಂಗೌಡ ಹಾಗೂ ಎಂಬಿ ಮರಮಕಲ್ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

   English summary
   Karnataka High Court Gives Nod For Probe Against Chief minister BS Yediyurappa In Connection With Operation Kamala
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X