NLSIU ಸ್ಥಳೀಯರಿಗೆ ಶೇ 25 ಮೀಸಲಾತಿ ಕಾಯ್ದೆಗೆ ಹೈಕೋರ್ಟ್ ಬ್ರೇಕ್'

ಬೆಂಗಳೂರು, ಸೆ. 29: ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ(NLSIU)ಯಲ್ಲಿ ಜಾರಿಗೆ ತಂದಿರುವ ಸ್ಥಳೀಯರಿಗೆ ಪ್ರಾತಿನಿಧ್ಯ ನೀಡಲು ಕರ್ನಾಟಕ ಸರ್ಕಾರ ವಿಧೇಯಕ ಜಾರಿಗೆ ತಂದಿತ್ತು. ಸ್ಥಳೀಯರಿಗೆ ಶೇ 25 ಮೀಸಲಾತಿ ನೀಡುವ ರಾಷ್ಟ್ರೀಯ ಕಾನೂನು ಶಾಲೆ ತಿದ್ದುಪಡಿ ಕಾಯಿದೆಯನ್ನು ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ರಾಜ್ಯದ ಸ್ಥಳೀಯ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಲ್ಲಿ ಶೇ 25ರಷ್ಟು ಮೀಸಲಾತಿ ಕಲ್ಪಿಸುವ 2020ರ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಸಿಎಲ್ಎಟಿ ಆಕಾಂಕ್ಷಿ 17 ವರ್ಷದ ಬಾಲಚಂದರ್ ಕೃಷ್ಣನ್ ಅರ್ಜಿ ಸಲ್ಲಿಸಿ, ಎನ್‌ಎಲ್‌ಎಸ್‌ಐಯುನಲ್ಲಿ ಸೀಟು ಪಡೆಯಲು ಮೀಸಲಾಯಿ ಕಾಯಿದೆ ಅಡ್ಡಿಯಾಗಲಿದೆ ಎಂದು ಮನವಿ ಸಲ್ಲಿಸಿದ್ದರು. ವಕೀಲ ಸಿ ಕೆ ನಂದಕುಮಾರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು. ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಅರ್ಜಿ ಸಲ್ಲಿಸಿತ್ತು

Karnataka HC rejects amendment giving 25 percent quota to students from state at NLSIU

ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಬಿ ವಿ ನಾಗರತ್ನ ಮತ್ತು ನ್ಯಾ. ರವಿ ಹೊಸಮನಿ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಸ್ಥಳೀಯರಿಗೆ ಶೇಕಡಾ 25 ರಷ್ಟು ಪ್ರಾತಿನಿಧ್ಯ ಕಲ್ಪಿಸಲು ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅನುಮೋದನೆಗೊಂಡು, ಮೇ ತಿಂಗಳಲ್ಲಿ ರಾಜ್ಯಪಾಲರ ಅಂಗೀಕಾರ ಪಡೆದಿತ್ತು. ಆದರೆ, ಕರ್ನಾಟಕ ಡೊಮಿಸೈಲ್ ರಿಸರ್ವೇಷನ್ ಬಿಲ್ ವಿರುದ್ಧ ಕರ್ನಾಟಕ ಹೈಕೋರ್ಟ್ ಆಲ್ಲದೆ ದೆಹಲಿಯಲ್ಲೂ ಅರ್ಜಿ ಸಲ್ಲಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+