ಮುರುಘಾ ಶ್ರೀ ಜಾಮೀನು ರಹಿತ ವಾರೆಂಟ್‌ಗೆ ಹೈಕೋರ್ಟ್ ತಡೆ: ಜೈಲಿನಿಂದ ಬಿಡುಗಡೆ
ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ಎರಡನೇ ಪ್ರಕರಣದಲ್ಲಿ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ವಿರುದ್ಧದ ಹೊರಡಿಸಲಾಗಿದ್ದ ಜಾಮೀನು ರಹಿತ ವಾರೆಂಟ್‌ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ತಡೆ ನೀಡಿದೆ.
ಚಿತ್ರದುರ್ಗ ಜಿಲ್ಲೆಯ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಸೋಮವಾರ ಬೆಳಗ್ಗೆ ಹೊರಡಿಸಿದ ವಾರೆಂಟ್ ಅನ್ನು ಕೆಲವೇ ಗಂಟೆಗಳ ನಂತರ ಹೈಕೋರ್ಟ್ ತಡೆಹಿಡಿಯಿತು. ನಂತರ ಮುರುಘಾ ಶ್ರೀಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ನವೆಂಬರ್ 8 ರಂದು ಹೈಕೋರ್ಟ್ ಮೊದಲ ಪ್ರಕರಣದಲ್ಲಿ ಶ್ರೀಗಳಿಗೆ ಮಧ್ಯಂತರ ಜಾಮೀನು ನೀಡಿತ್ತು, ಅವರು ಸಾಕ್ಷ್ಯವನ್ನು ಹಾಳು ಮಾಡಬಾರದು ಮತ್ತು ವಿಚಾರಣೆ ಮುಗಿಯುವವರೆಗೆ ಜಿಲ್ಲೆಯಿಂದ ದೂರವಿರಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ವಿಚಾರಣಾ ನ್ಯಾಯಾಲಯ ಹಾಗೂ ಪಬ್ಲಿಕ್ ಪ್ರಾಸಿಕ್ಯೂಟರ್ ಕ್ರಮಗಳು ಮೊದಲ ಪ್ರಕರಣದಲ್ಲಿ ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿವೆ ಎಂದು ಹೇಳಿದರು.
ಮೊದಲ ಪ್ರಕರಣದಲ್ಲಿ, ಮುರುಘಾ ಮಠದ ಮಠಾಧೀಶರು ಮಠದ ಹಾಸ್ಟೆಲ್‌ನಲ್ಲಿ ಇಬ್ಬರು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಎರಡನೆಯ ಪ್ರಕರಣದಲ್ಲಿ, ಮಠದ ಮಾಜಿ ಉದ್ಯೋಗಿಯ ಹದಿಹರೆಯದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊರಿಸಲಾಗಿದೆ.
ಮುರುಘಾಶ್ರೀ ನ್ಯಾಯಾಲಯಕ್ಕೆ ಹಾಜರಾಗುತ್ತಿಲ್ಲ ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುತ್ತಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಮಾಹಿತಿ ನೀಡಿದ ನಂತರ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ವಿಚಾರಣಾ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತು.
ಜಾಮೀನುರಹಿತ ಬಂಧನ ವಾರೆಂಟ್ ನೀಡುತ್ತಿದ್ದಂತೆ ಮುರುಘಾ ಅವರು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 482 (ಹೈಕೋರ್ಟ್‌ನ ಅಂತರ್ಗತ ಅಧಿಕಾರಗಳ ಉಳಿತಾಯ) ಅಡಿಯಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ಸಂಜೆ ತುರ್ತು ವಿಚಾರಣೆ ನಡೆಸಿತು.
ಚಿತ್ರದುರ್ಗ ಜಿಲ್ಲೆಯಿಂದ ದೂರ ಉಳಿಯುವಂತೆ ಮೊದಲ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಆದೇಶದ ಬಗ್ಗೆ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ತಿಳಿದಿಲ್ಲದಿರುವುದು ಆಘಾತಕಾರಿ ಎಂದು ಹೈಕೋರ್ಟ್ ನ್ಯಾಯಾಧೀಶರು ಹೇಳಿದರು.
ಮುರುಘಾ ಅವರು ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧವು ಜಿಲ್ಲೆಯಲ್ಲಿ ಅವರ ವಿರುದ್ಧದ ಯಾವುದೇ ಪ್ರಕ್ರಿಯೆಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಒಂದೊಮ್ಮೆ ಅರ್ಜಿದಾರರು ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸದಂತೆ ಈ ನ್ಯಾಯಾಲಯವು ನಿರ್ಬಂಧವನ್ನು ವಿಧಿಸಿದರೆ, ಇದು ಅರ್ಜಿಯು ಉದ್ಭವಿಸಿದ ಪ್ರಕರಣಗಳಿಗೆ ಮಾತ್ರವಲ್ಲದೆ ಚಿತ್ರದುರ್ಗ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕ್ರಿಯೆಗಳಿಗೂ ಅನ್ವಯಿಸುತ್ತದೆ ಎಂದು ಅದು ಹೇಳಿದೆ.
ಈ ಆದೇಶದಿಂದ ಮುರುಘಾಗೆ ತೀವ್ರ ಅನ್ಯಾಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ವಾರಂಟ್‌ಗೆ ತಡೆ ನೀಡಿ, ಚಿತ್ರದುರ್ಗದ ಜಿಲ್ಲಾ ಕಾರಾಗೃಹದಿಂದ ಮುರುಘಾ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿತು.












Click it and Unblock the Notifications