ಆರೋಗ್ಯ ಇಲಾಖೆ: 1,000 ಮಂದಿಗೆ ನೇಮಕಾತಿ ಆದೇಶ ವಿತರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ 'ಅಭಯ ಹಸ್ತ' ಉದ್ಘಾಟನಾ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ಸಿಎಂ ಸಿದ್ದರಾಮಯ್ಯ ವಿತರಿಸಿದರು. 1,000 ಮಂದಿ ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ ಎಂದು ಹೇಳಿದರು. ಇದು ಕೇವಲ ಉದ್ಯೋಗವಲ್ಲ. ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯ ಎಂದು ಅವರು ಅಭಿಪ್ರಾಯಪಟ್ಟರು.
2.5 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿ
ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ಬಳಿಕ ನೇಮಕಾತಿಯಲ್ಲಿ ಉಂಟಾಗಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ವಿವಿಧ ಇಲಾಖೆಗಳಲ್ಲಿರುವ 2.5 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆ ಮುಂದುವರಿದಿದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ವ್ಯವಸ್ಥೆ ಅತಿ ಮಹತ್ವದ್ದಾಗಿದ್ದು, ಈ ಕ್ಷೇತ್ರಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.

ವರ್ಗಾವಣೆಗಳಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ
ನೇಮಕಾತಿ ಮತ್ತು ವರ್ಗಾವಣೆಗಳನ್ನು ಕೌನ್ಸೆಲಿಂಗ್ ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಇದರಿಂದ ಭ್ರಷ್ಟಾಚಾರ ತಡೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು. ಈಗಾಗಲೇ 5,700 ವೈದ್ಯರನ್ನು ಸೇರಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಏಜೆಂಟ್ಗಳ ಹಾವಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ನೌಕರರು ಅವರ ಬಲೆಗೆ ಬೀಳಬಾರದು. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಇರಬಾರದು ಎಂಬುದು ಸರ್ಕಾರದ ಆಶಯ ಎಂದು ಎಚ್ಚರಿಸಿದರು.
ಇನ್ನು ವೈದ್ಯರಷ್ಟೇ ವೈದ್ಯಕೇತರ ಸಿಬ್ಬಂದಿಗಳೂ ಪ್ರಮುಖರು ಎಂದು ಸಿಎಂ ಹೇಳಿದರು. ಆರೋಗ್ಯ ಸೇವೆಯಲ್ಲಿ ಜಾತಿ-ಧರ್ಮಗಳ ಬೇಧಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ ಎಂದು ಅವರು ಒತ್ತಿ ಹೇಳಿದರು. ರೋಗಿಗಳಿಗೆ ರಕ್ತ ಬೇಕಾದಾಗ ಜಾತಿ-ಧರ್ಮಗಳನ್ನು ನೋಡಲಾಗುವುದಿಲ್ಲ. ಆದರೆ ಗುಣಮುಖರಾದ ನಂತರ ಮತ್ತೆ ಸಮಾಜ ಜಾತಿ-ಧರ್ಮಗಳ ಸುಳಿಯಲ್ಲಿ ಸಿಲುಕುತ್ತದೆ. ರೋಗ ತಡೆಗಟ್ಟುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಸಿಬ್ಬಂದಿ ಕಾರ್ಯತತ್ಪರರಾಗಬೇಕು ಎಂದು ಹೇಳಿದರು. ರಾಜ್ಯದ ಆರೋಗ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆಗಳನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಅಭಯ ಹಸ್ತ" ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications