ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯರ ಮುಷ್ಕರ: ರಜೆ ರದ್ದುಗೊಳಿಸಿದ ಆರೋಗ್ಯ ಇಲಾಖೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 10: ಅಲೋಪತಿ ಮತ್ತು ಆಯುರ್ವೇದ ವೈದ್ಯ ಪದ್ಧತಿಗಳನ್ನು ವಿಲೀನಗೊಳಿಸಿ, ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ಮಾಡಲು ಅನುಮತಿ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆಗಳು ಹೊರರೋಗಿ ವಿಭಾಗವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ.

ಭಾರತೀಯ ವೈದ್ಯ ಸಂಘ ನೀಡಿರುವ ಮುಷ್ಕರದ ಕರೆಯ ಹಿನ್ನೆಲೆಯಲ್ಲಿ ಶುಕ್ರವಾರ ಎಲ್ಲ ಖಾಸಗಿ ಆಸ್ಪತ್ರೆಗಳ ಒಪಿಡಿ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಆಗಲಿವೆ. ಆದರೆ ತುರ್ತು ಸೇವೆಗಳು ಹಾಗೂ ಕೋವಿಡ್-19 ಸೇವೆಗಳಿಗೆ ತೊಂದರೆಯಾಗುವುದಿಲ್ಲ.

ಕರ್ನಾಟಕ; ಡಿ. 11ರಂದು ಖಾಸಗಿ ಆಸ್ಪತ್ರೆ ಓಪಿಡಿ ಬಂದ್ಕರ್ನಾಟಕ; ಡಿ. 11ರಂದು ಖಾಸಗಿ ಆಸ್ಪತ್ರೆ ಓಪಿಡಿ ಬಂದ್

ಖಾಸಗಿ ಆಸ್ಪತ್ರೆಗಳ ವೈದ್ಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಮುಷ್ಕರದ ಅವಧಿಯಲ್ಲಿ ವೈದ್ಯರಿಗೆ ರಜೆಯನ್ನು ಮಂಜೂರು ಮಾಡದಂತೆ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಹೊರರೋಗಿ ವಿಭಾಗ ಸೇರಿದಂತೆ ಎಲ್ಲ ಆರೋಗ್ಯ ಸೇವೆಗಳು ಯಾವುದೇ ವ್ಯತ್ಯಯವಾಗದಂತೆ ಎಂದಿನಂತೆ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆಯು ಸುತ್ತೋಲೆಯಲ್ಲಿ ಸೂಚಿಸಿದೆ.

Karnataka Health Dept Cancels Leaves Of Government Doctors As Private Doctors To Close OPDs

Recommended Video

ರೌಡಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದು ಯಾಕೆ ಗೊತ್ತಾ ? | Oneindia Kannada

ಇತ್ತೀಚಿನ ಗೆಜೆಟ್ ಅಧಿಸೂಚನೆಯಲ್ಲಿ ಕೇಂದ್ರ ಸರ್ಕಾರವು ಶಸ್ತ್ರ ಚಿಕಿತ್ಸೆ ಮಾಡಲು ಆಯುರ್ವೇದ ವೈದ್ಯರಿಗೆ ಅನುಮತಿ ನೀಡಿದೆ. ಶಸ್ತ್ರಚಿಕಿತ್ಸೆ ನಡೆಸಲು ಆಯುರ್ವೇದ ವೈದ್ಯರಿಗೆ ಅವಕಾಶ ನೀಡಿರುವುದರಿಂದ ಆಗುವ ಅನಾಹುತಗಳನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು. ನೀಡಿರುವ ಅನುಮತಿಯನ್ನು ತಕ್ಷಣ ಹಿಂಪಡೆಯಬೇಕು. ಸರ್ಕಾರ ಈ ನಿರ್ಧಾರದ ಮೂಲಕ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವೈದ್ಯರು ಆರೋಪಿಸಿದ್ದಾರೆ.

English summary
Karnataka health department has ordered to cancel all leaves of government doctors on Friday as the private doctors decided to close OPD to protest against allowing Ayurveda doctors to conduct surgeries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X