ಕೆಮ್ಮಿನ ಸಿರಪ್ ಬಳಕೆ ಕುರಿತು ಆರೋಗ್ಯ ಇಲಾಖೆಯು ಮಹತ್ವದ ಸೂಚನೆಗಳು: ಪೋಷಕರೇ ಪಾಲಿಸಿ
ಬೆಂಗಳೂರು, ಅಕ್ಟೋಬರ್ 07: ಮಕ್ಕಳಲ್ಲಿ ಕೆಮ್ಮು ಸಿರಪ್ ತರ್ಕಬದ್ದ ಮತ್ತು ಸುರಕ್ಷಿತ ಬಳಕೆ ಕುರಿತು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಹತ್ವದ ಸೂಚನೆ ನೀಡಿದೆ. ಕೆಮ್ಮಿನ ಸಿರಪ್ ಗಳ ದುರುಪಯೋಗದಿಂದಾಗಿ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾವುಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಎಲ್ಲಾ ಮಕ್ಕಳ ಸುರಕ್ಷತೆಯನ್ನು ಕಾಪಾಡಲು, ಪೋಷಕರು, ಆರೈಕೆದಾರರು ಮತ್ತು ಸಾರ್ವಜನಿಕರು ಈ ಕೆಳಗಿನ ಮಾರ್ಗದರ್ಶನಗಳನ್ನು ಅನುಸರಿಸುವಂತೆ ಇಲಾಖೆ ತಿಳಿಸಿದೆ.
1. ಚಿಕ್ಕ ಮಕ್ಕಳಿಗೆ ಕೆಮ್ಮಿನ ಸಿರಪ್ ಗಳನ್ನು ನೀಡಬೇಡಿ,
* ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್ ಗಳನ್ನು ನೀಡಬಾರದು.
*ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಈ ಔಷಧಿಗಳನ್ನು ನೀಡುವುದು.

2. ಹಿರಿಯ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡುವಾಗ ವೈದ್ಯರ ಸಲಹೆಯ ಮೇರೆಗೆ ಮಾತ್ರ ಕೊಡಬೇಕು.
* ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಅನ್ನು ಬಳಸಿ.
* ಬಹು ಔಷಧಿಗಳ ಸಂಯೋಜನೆ ಇರುವ ಸಿರಪ್ ಗಳನ್ನು ಉಪಯೋಗಿಸಬಾರದು.
3. ಸುರಕ್ಷಿತ ಮನೆಮದ್ದುಗಳು
* ಹೆಚ್ಚಿನ ಸಂದರ್ಭಗಳಲ್ಲಿ ಮಕ್ಕಳಲ್ಲಿ ಕೆಮ್ಮು ಮತ್ತು ಶೀತವು ಸೌಮ್ಯವಾಗಿರುತ್ತದೆ ಮತ್ತು ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ.
* ಪೋಷಕರು ಮಕ್ಕಳಿಗೆ ಸಾಕಷ್ಟು ದ್ರವಪದಾರ್ಥಗಳನ್ನು ನೀಡಬೇಕು
* ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು
* ಪೌಷ್ಟಿಕ ಆಹಾರವನ್ನು ನೀಡಬೇಕು.
4. ಸ್ವಯಂ ಔಷಧೋಪಚಾರ ಮಾಡಬೇಡಿ
* ವೈದ್ಯರ ಪ್ರಿಸಿಪ್ಷನ್ ಇಲ್ಲದೆ ಕಮ್ಮಿನ ಸಿರಪ್ ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ.
* ಈ ಹಿಂದೆ ಬಳಸಿ ಉಳಿದ ಔಷಧಿಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಿಗಳನ್ನು ಬಳಸುವುದನ್ನು ನಿಲ್ಲಿಸಿ.
* ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆಯನ್ನು ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ವರದಿ ಮಾಡಿ.
ನೀವು ಯಾವಾಗಲೂ ಔಷಧದ ಅವಧಿ ಮುಗಿಯುವ ದಿನಾಂಕಗಳನ್ನು (expiry date) ಪರಿಶೀಲಿಸಿ ಮತ್ತು ಲೇಬಲ್ ಗಳನ್ನು ಎಚ್ಚರಿಕೆಯಿಂದ ಓದಿ. ನಿಮ್ಮ ಮಕ್ಕಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಬೇಕು.
* ಉಸಿರಾಟದ ತೊಂದರೆ ಅಥವಾ ವೇಗವಾಗಿ ಉಸಿರಾಟ.
* ನಿರಂತರ ಅಥವಾ ಉಲ್ಬಣಗೊಳ್ಳುತ್ತಿರುವ ಕೆಮ್ಮು
* ಅತಿಯಾದ ಜ್ವರ ಅಥವಾ ಆಹಾರ ತಿರಸ್ಕರಿಸುವುದು.
* ನಿದ್ರಾವಸ್ಥೆ ಅಥವಾ ಅಸಹಜ ಪ್ರತಿಕ್ರಿಯೆ.
ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ಔಷಧಿಗಳ ತರ್ಕಬದ್ಧ ಬಳಕೆಯನ್ನು ಉತ್ತೇಜಿಸಲು ಮತ್ತು ಕೆಮ್ಮು ಸಿರಪ್ ಗಳ ಅನುಚಿತ ಬಳಕೆಯಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಈ ಮೇಲಿನ ಸಲಹೆಗಳು ಸಹಕಾರಿಯಾಗಲಿದ್ದು, ಈ ಸೂಚನೆ ಪಾಲಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications