ಸಚಿವ ಶ್ರೀರಾಮುಲುಗೆ ಕೋವಿಡ್ ಸೋಂಕು; ಸರ್ಕಾರಿ ಆಸ್ಪತ್ರೆಗೆ ದಾಖಲು

ಬೆಂಗಳೂರು, ಆಗಸ್ಟ್ 09: ಕರ್ನಾಟಕದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನಲ್ಲಿರುವ ಸಚಿವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾನುವಾರ ಟ್ವೀಟ್ ಮೂಲಕ ಆರೋಗ್ಯ ಸಚಿವ ಬಿ. ಶ್ರೀರಾಮುಲು ಕೋವಿಡ್ ಸೋಂಕು ತಗುಲಿರುವ ಕುರಿತು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಶ್ರೀರಾಮುಲು ದಾಖಲಾಗಿದ್ದಾರೆ.

"ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ" ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಬಿ. ಸಿ. ಪಾಟೀಲ್, ಸಾಗರ ಶಾಸಕ ಹರತಾಳು ಹಾಲಪ್ಪ, ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಕರ್ನಾಟಕದ ಹಲವು ಶಾಸಕರು, ಸಚಿವರಿಗೆ ಈವರೆಗೆ ಕೋವಿಡ್ ಸೋಂಕು ತಗುಲಿದೆ.

ಬೌರಿಂಗ್ ಆಸ್ಪತ್ರೆಗೆ ಶ್ರೀರಾಮುಲು ದಾಖಲು

"ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದೇನೆ.ಶೀಘ್ರ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ" ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಸಚಿವ ಶ್ರೀರಾಮುಲುಗೆ ಕೋವಿಡ್ ಸೋಂಕು

ಸಚಿವ ಶ್ರೀರಾಮುಲುಗೆ ಕೋವಿಡ್ ಸೋಂಕು

"ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ" ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಜನರ ಸೇವೆ ಮಾಡಲು ಪ್ರಾರ್ಥನೆ

ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಡಾ. ಸುಧಾಕರ್ ಟ್ವೀಟ್

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಚಿವ ಬಿ. ಶ್ರೀರಾಮುಲು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+