Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಜೋರು; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?
ಬೆಂಗಳೂರು, ಆಗಸ್ಟ್ 26: ಕರ್ನಾಟಕದಲ್ಲಿ ಮತ್ತೆ ಮಳೆ ಹೆಚ್ಚಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಸೋಮವಾರದಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಕಳೆದ ಒಂದು ವಾರದಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ. ಸೆಪ್ಟೆಂಬರ್ 1ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದಿನಿಂದ ಆಗಸ್ಟ್ 29 ರಂದು ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದ್ದು, ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 29 ಮತ್ತು 30 ರಂದು ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಭಾರಿ ಮಳೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲೂ ಮಳೆಯಾಗಲಿದೆ. ಕ್ಯಾಸಲ್ರಾಕ್, ಅಂಕೋಲಾ, ಕೊಟ್ಟಿಗೆಹಾರ, ಕದ್ರಾ, ಗೇರುಸೊಪ್ಪ, ಸಿದ್ದಾಪುರ, ಗೋಕರ್ಣ, ಕುಮಟಾದಲ್ಲಿ ಮಳೆಯಾಗಿದೆ.
ಇನ್ನೂ ಬೆಂಗಳೂರಿನಲ್ಲೂ ಮೋಡ ಕವಿದವಿದ್ದು, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಗುಂಬೆ, ಭಾಗಮಂಡಲ, ಕಿರವತ್ತಿ, ಲಿಂಗನಮಕ್ಕಿ, ಜೋಯಿಡಾ, ಬೆಳಗಾವಿ, ಶಿರಹಟ್ಟಿ, ಬೈಲಹೊಂಗಲ, ನಿಪ್ಪಾಣಿ, ಔರಾದ್, ಕೊಪ್ಪ, ಪಣಂಬೂರು, ಬೆಳ್ತಂಗಡಿ, ಧರ್ಮಸ್ಥಳ, ಕೋಟ, ಚಿಕ್ಕೋಡಿ, ಶಿಗ್ಗಾಂವ್, ಸಂಕೇಶ್ವರ, ಬೀದರ್, ಮಂಠಾಳ, ಕಳಸ, ಉಡುಪಿ, ಮಾಣಿ, ಭಾಲ್ಕಿ, ಕುಂದಗೋಳ, ಖಜೂರಿ, ಚಿಕ್ಕಬಳ್ಳಾಪುರ, ತ್ಯಾಗರ್ತಿ, ನಾಪೋಕ್ಲು, ತರೀಕೆರೆ, ದಾವಣಗೆರೆ ಹಾಗೂ ಶಿವಮೊಗ್ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.












Click it and Unblock the Notifications