Karnataka Heavy Rain: ಸೈಕ್ಲೋನ್ ಎಫೆಕ್ಟ್ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಈ ಭಾಗದಲ್ಲಿ ಹೈ ಅಲರ್ಟ್!
Karnataka Heavy Rain: ಚಂಡಮಾರುತ ಪ್ರಸರಣದ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ನೈರುತ್ಯ ಮಾನ್ಸೂನ್ ಚುರುಕು ಪಡೆದುಕೊಂಡಿದ್ದು ಭಾರೀ ಮಳೆ ಆಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ.
ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ಟ್ರಫ್ ಈಗ ಬಿಕನೇರ್, ದೆಹಲಿ, ಲಕ್ನೋ, ಪಾಟ್ನಾ ಮೂಲಕ ಹಾದುಹೋಗುತ್ತದೆ ಮತ್ತು ಅಲ್ಲಿಂದ ಪೂರ್ವಕ್ಕೆ ಮಣಿಪುರದ ಕಡೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ವರೆಗೆ ವಿಸ್ತರಿಸುತ್ತದೆ. ದಕ್ಷಿಣ ಕರಾವಳಿ ತಮಿಳುನಾಡು ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಮೇಲ್ಬಾಗದ ವಾಯು ಚಂಡಮಾರುತದ ಪರಿಚಲನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.

Karnataka Heavy Rain: ಈ ಭಾಗಗಳಲ್ಲಿ ಧಾರಾಕಾರ ಮಳೆ
ಇನ್ನು ಕರಾವಳಿಯ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಆಗುತ್ತಿದ್ದು, ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಭಾಗದಲ್ಲಿ ಕೆಲವು ಕಡೆದ ಜನ ಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರೆ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಕರಾವಳಿಯ ವಿವಿಧ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಭಾಗದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ.
ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆ ಇರಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಇನ್ನು ದಕ್ಷಿಣ ಕನ್ನಡ ಹಾಗೂ ಮಲೆನಾಡಿನಲ್ಲೂ ಭಾರೀ ಮಳೆ ಮುಂದುವರಿದಿದೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ನಿರಂತರ ಗಾಳಿಯೊಂದಿಗೆ (30-40 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
Karnataka Heavy Rain: ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಬೆಂಗಳೂರಿನಲ್ಲೂ ತಂಪಾದ ವಾತಾವರಣವಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುತ್ತಿದೆ. ಬೆಂಗಳೂರು ನಗರದಲ್ಲಿ ಬಹುತೇಕ ಮೋಡ ಕವಿದ ವಾತಾವರಣವಿದ್ದು, ಕೆಲವು ಭಾಗದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುತ್ತಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ತಿಳಿಸಿದೆ.
ಇನ್ನು ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡು ಕರ್ನಾಟಕದ ಅನೇಕ ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡು ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಅತಿ ಹೆಚ್ಚು ಮಳೆಯು ಉತ್ತರ ಕನ್ನಡದ ಜೋಯಿಡಾ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಆಗಿದೆ.


Click it and Unblock the Notifications
