Karnataka Rains: ಕರ್ನಾಟಕದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ: ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

ಬೆಂಗಳೂರು, ಆಗಸ್ಟ್‌ 30: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಆರಂಭದಿಂದಲೂ ಹೆಚ್ಚು ಮಳೆಯಾಗಿದೆ. ಇದೀಗ ಮತ್ತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆದಿದೆ, ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಿಗೆ ಇಂದು ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಹಾಗೂ ಮಲೆನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

Karnataka Heavy Rain Heavy Rainfall warning IMD issues red alert for Coastal districts

ಮಲೆನಾಡು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 31 ರಂದು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹಾಸನ, ಸಕಲೇಶಪುರ, ಬನವಾಸಿ, ಗೋಕರ್ಣ, ಲೋಂಡಾ, ಹುಂಚದಕಟ್ಟೆ, ಬಾಳೆಹೊನ್ನೂರು, ಕಮ್ಮರಡಿ, ನಾಪೋಕ್ಲು, ಮೂರ್ನಾಡು, ಕಾರವಾರ, ಯಲ್ಲಾಪುರ, ಕೂಡಲಸಂಗಮ, ಮೂಡಿಗೆರೆ, ಆನವಟ್ಟಿ, ತ್ಯಾಗರ್ತಿ, ಎನ್​ಆರ್​ಪುರ, ಹಾರಂಗಿ, ತರೀಕೆರೆ, ತಿಪಟೂರು, ಶ್ರವಣಬೆಳಗೊಳ, ಕುಶಾಲನಗರದಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್​, ಕಲಬುರಗಿ, ಬೆಳಗಾವಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗುರುವಾರದಿಂದ ಮಳೆ ಶುರುವಾಗಿದ್ದು, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಪಣಂಬೂರು, ಮಾಣಿ, ಶಿರಾಲಿ, ಗೇರುಸೊಪ್ಪ, ಪುತ್ತೂರು, ಕುಂದಾಪುರ, ಮಂಕಿ, ಸಿದ್ದಾಪುರ, ಕೊಟ್ಟಿಗೆಹಾರ, ಭಾಗಮಂಡಲ, ಕೊಲ್ಲೂರು, ಹೊನ್ನಾವರ, ಕ್ಯಾಸಲ್​ರಾಕ್, ಮಂಗಳೂರು, ಕೋಟ, ಸುಳ್ಯ, ಮುಲ್ಕಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಇನ್ನು, ಸೆಪ್ಟೆಂಬರ್ 1ರವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+