Karnataka Weather: ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ: ಹವಾಮಾನ ವೈಪರಿತ್ಯ ಮುನ್ಸೂಚನೆ
ಬೆಂಗಳೂರು, ಜನವರಿ 16: ಕರ್ನಾಟಕದಾದ್ಯಂತ ಒಣಹವೆಯ ಅನುಭವ ಉಂಟಾಗುತ್ತಿದ್ದರು ಸಹಿತ ಸಮುದ್ರದ ಮೇಲ್ಮೈನಲ್ಲಿ ಉಂಟಾಗುತ್ತಿರುವ ವೈಪರಿತ್ಯಗಳ ಪ್ರಭಾವದಿಂದಾಗಿ ಮಳೆ ಮುನ್ಸೂಚನೆ ಇದೆ. ರಾಜ್ಯದ ಕೆಲವು ಜಿಲ್ಲೆಗಳು ಇಂದು ಜನವರಿ 16ರಂದು ವ್ಯಾಪಕ ಮಳೆಗೆ ಸಾಕ್ಷಿಯಾಗಲಿವೆ. ಬೆಂಗಳೂರು ನಗರ ಸೇರಿದಂತೆ ಈ ಆರು ಜಿಲ್ಲೆಗಳಲ್ಲಿ ಮಳೆ ಆಗಲಿದೆ, ಮುಂದಿನ ಐದು ದಿನಗಳ ಹವಾಮಾನ ಮುನ್ಸೂಚನೆಯ ವಿವರ ಇಲ್ಲಿದೆ.
ದಕ್ಷಿಣ ಅರೇಬಿಯನ್ ಸಮುದ್ರದ ಮಧ್ಯ ಭಾಗಗಳು ಮತ್ತು ಹಿಂದೂ ಮಹಾಸಾಗರದ ಪಕ್ಕದ ಸಮಭಾಜಕ ವೃತ್ತದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪ್ರಸರಣ ಉಂಟಾಗಿದೆ. ಇದರ ತೀವ್ರತೆ ತಕ್ಕ ಮಟ್ಟಿಗೆ ಕಡಿಮೆ ಆಗಿದೆಯಾದರೂ ಸಹಿತ ಪೂಣ ಪ್ರಮಾಣದಲ್ಲಿ ದುರ್ಬಲಗೊಂಡಿಲ್ಲ.

ಈ ಹವಾಮಾನ ವೈಪರಿತ್ಯದ ಪ್ರಭಾವದಿಂದಾಗಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುರುವಾರ ಮಳೆ ಆಗಲಿದೆ. ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಒಟ್ಟು 06 ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಎಚ್ಚರಿಕೆ ಬೆನ್ನಲ್ಲೆ ಉಳಿದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಐದಾರು ದಿನಗಳ ಕಾಲ ಶುಷ್ಕ ಹವಾಮಾನದ ಮುಂದುವರಿಯುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.
ಸದ್ಯ ಬೆಂಗಳೂರು ಸೇರಿದಂತೆ ವಿವಿಧೆಡೆ ಮಾತ್ರವೇ ಮಳೆ ಎಚ್ಚರಿಕೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ ,ಗದಗ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ.
ಬೆಂಗಳೂರಲ್ಲಿ ಇಂದು ತುಂತುರು ಮಳೆ
ಬೆಂಗಳೂರಿನಲ್ಲಿ ಇಂದು ಮಬ್ಬು ವಾತಾವರಣ ಕಂಡು ಬಂದಿದ್ದು, ಕೊಂಚ ಬಿಸಿಲಿನ ಪ್ರಮಾಣ ಕುಂದಿದೆ. ಅಲ್ಲಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ. ನಗರದಲ್ಲಿ ಕನಿಷ್ಠ ತಾಪಮಾನ 19ರಿಂದ 17 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದೆ. ಶುಕ್ರವಾರದಿಂದ ಕನಿಷ್ಠ ತಾಪಮಾನದಲ್ಲಿ ಮತ್ತೆ ಬದಲಾವಣೆ ಆಗುವ ಸಾಧ್ಯತೆ ಇದೆ.












Click it and Unblock the Notifications