Karnataka Rains: ಕರ್ನಾಟಕದಲ್ಲಿ ಮತ್ತೆ ಹೆಚ್ಚಾಗಲಿದೆ ಮಳೆ; ಈ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್

ಬೆಂಗಳೂರು, ಆಗಸ್ಟ್‌ 23: ಕರ್ನಾಟಕದಲ್ಲಿ ಮಳೆ ಅಬ್ಬರ ಮತ್ತೆ ಶುರುವಾಗಿದೆ. ಕರಾವಳಿ, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಒಳನಾಡಿನ ಕೆಲವಾರು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ.

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಆಗಸ್ಟ್ 26ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Heavy Rain It will rain till August 25 in the coastal parts of Karnataka

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 25 ಮತ್ತು 26 ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗಲಿದ್ದು, ಆಗಸ್ಟ್ 25 ಮತ್ತು 26 ರಂದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕದ್ರಾ, ಕಾರವಾರ, ಕ್ಯಾಸಲ್​ರಾಕ್, ಮುದ್ದೇಬಿಹಾಳ, ರೋಣ, ಗದಗ, ಶಿಗ್ಗಾಂವ್, ಬೆಳ್ಳಟ್ಟಿ, ಗಂಗಾವತಿ, ಗೋಕಾಕ್, ಲಕ್ಷ್ಮೇಶ್ವರ, ನಿಪ್ಪಾಣಿ, ಆನವಟ್ಟಿ, ಬಾಳೆಹೊನ್ನೂರು, ಸೋಮವಾರಪೇಟೆ ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಹಗರಿಬೊಮ್ಮನಹಳ್ಳಿ, ದಾವಣಗೆರೆ, ಗುಬ್ಬಿ, ರಾಮನಗರ, ಮೂಡಿಗೆರೆ, ಸುಳ್ಯ, ಪಣಂಬೂರು, ಕೊಟ್ಟಿಗೆಹಾರ, ಗುತ್ತಲ್, ತಿಕ್ಕೋಟ, ದೇವರಹಿಪ್ಪರಗಿ, ಭಾಗಮಂಡಲ, ಸಿದ್ದಾಪುರ, ಕೊಲ್ಲೂರು, ಇಳಕಲ್, ರಾಯಚೂರು, ಕುಷ್ಟಗಿ, ಹಾವೇರಿ, ಸೇಡಂ, ಕೂಡಲಸಂಗಮ, ತ್ಯಾಗರ್ತಿ, ದಾವಣಗೆರೆ, ಕುಂದಾಪುರ, ನಾಪೋಕ್ಲು, ಚಿಟಗುಪ್ಪ, ಸೈದಾಪುರ, ಸವಣೂರು, ಮುನಿರಾಬಾದ್, ಯಲಬುರ್ಗಾ, ನಾರಾಯಣಪುರಲದಲ್ಲಿ ಮಳೆಯಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+