Karnataka Rains: ರಾಜ್ಯದಲ್ಲಿ ಮತ್ತೆ ಶುರುವಾಯ್ತು ಮಳೆ ಅಬ್ಬರ; ಸೆಪ್ಟೆಂಬರ್‌ 3ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು, ಆಗಸ್ಟ್‌ 31: ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಬಂಗಾಳ ಉಪಸಾಗರದಲ್ಲಿ ಭಾರೀ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಸೆಪ್ಟೆಂಬರ್‌ 3ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 31 ರಿಂದ ಸೆಪ್ಟೆಂಬರ್ 08 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸೆಪ್ಟೆಂಬರ್ 03 ರವರೆಗೆ ವ್ಯಾಪಕವಾಗಿ ಮಳೆಯಾಗಲಿದ್ದು, ಸೆಪ್ಟೆಂಬರ್‌ 3 ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಮಲೆನಾಡಿನ ಭಾಗದಲ್ಲಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Karnataka Heavy Rain Rainfall In The Coastal Part Of The State Till September 3

ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು & ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದ ದಿನಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಶುಕ್ರವಾರ(ನಿನ್ನೆ) ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಜೊತೆಗೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಪ್ರದೇಶದಲ್ಲಿ ಹಲವು ಕಡೆ ಮಳೆ ಸುರಿದಿದೆ. ಧರ್ಮಸ್ಥಳದಲ್ಲಿ 6cm, ಆಗುಂಬೆಯಲ್ಲಿ 5cm, ಭಾಗಮಂಡಲದಲ್ಲಿ 4cm ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ರಾಯಚೂರು, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಬಿಜಾಪುರ, ಕೊಡಗು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದಿನಿಂದ 4 ದಿನ ಧಾರಾಕಾರ ಮಳೆಯಾಗಲಿದೆ. ಹೀಗಾಗಿ ಸೆಪ್ಟೆಂಬರ್‌ 3ರವರೆಗೆ ಮಳೆಯ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 3ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಪ್ರದೇಶದಲ್ಲಿ ಇಂದು ಭಾರೀ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+