• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಾಂಗ್ರೆಸ್ ನಾಯಕ ಡಿಕೆಶಿ ನಿರಾಳ: ಕೇಸು ಮುಂದೂಡಿದ ಹೈಕೋರ್ಟ್

|

ಬೆಂಗಳೂರು, ಫೆಬ್ರವರಿ 22: ಐಟಿ ದಾಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿರುವ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ನೆಮ್ಮದಿ ನೀಡಿದೆ.

ED ವಿಚಾರಣೆಗೆ ಕಾಲಾವಕಾಶ ಕೋರಿ ಹೈಕೋರ್ಟ್ ಮೊರೆ ಹೋಗಿದ್ದ ಡಿಕೆಶಿ ಅವರ ಕೋರಿಕೆಯನ್ನು ಪರಿಗಣಿಸಿದ ನ್ಯಾಯಾಲಯ ಕಾಲಾವಕಾಶ ನೀಡಲು ಒಪ್ಪಿಗೆ ಸೂಚಿಸಿದೆ.

ಡಿಕೆ ಶಿವಕುಮಾರ್‌ಗೆ ಇಡಿಯಿಂದ ಸಮನ್ಸ್ ಜಾರಿ, ಏನಿದು ಪ್ರಕರಣ?

ಕಾಲಾವಕಾಶ ನೀಡಿರುವ ಉಚ್ಚ ನ್ಯಾಯಾಲಯ ಪ್ರಕರಣವನ್ನು ಮಾರ್ಚ್ 7 ಕ್ಕೆ ಮುಂದೂಡಿದೆ . ಫೆ.8ರಂದು ಜಾರಿ ನಿರ್ದೇಶನಾಲಯದ ಮುಂದೆ ಡಿ.ಕೆ.ಶಿವಕುಮಾರ್ ಹಾಜರಾಗಬೇಕು ಎಂದು ನೋಟಿಸ್ ನೀಡಲಾಗಿತ್ತು. ಇದನ್ನು ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅದರ ವಿಚಾರಣೆ ಇಂದು ನಡೆದಿದ್ದು, ಪ್ರಕರಣದ ವಿಚಾರಣೆಯನ್ನು ಮತ್ತು ಮಾರ್ಚ್ 7 ಕ್ಕೆ ಮುಂದೂಡಲಾಗಿದೆ. ಡಿ.ಕೆ.ಶಿವಕುಮಾರ್ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು.

English summary
The Karnataka High Court on Friday adjourned the hearing of petition field by Karnataka water resources minister D.K.Shivakumar. He was seeking time to present before ED in Income Tax case. Hearing will be on March 7
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X