Prajwal Revanna Case: ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು; ಆದ್ರೂ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ! ಕಾರಣವೇನು?

ಬೆಂಗಳೂರು: ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ನಿಗದಿತ 90 ದಿನಗಳ ಗಡುವಿನೊಳಗೆ ದೋಷಾರೋಪ ಪಟ್ಟಿ ಅಂದರೆ ಚಾರ್ಜ್‌ಶೀಟ್ ಸಲ್ಲಿಸಲು ವಿಫಲವಾದ ಹಿನ್ನೆಲೆಯಲ್ಲಿ, ಪ್ರಜ್ವಲ್ ರೇವಣ್ಣ ಜಾಮೀನು (ಕಡ್ಡಾಯ ಜಾಮೀನು) ಕೋರಲು ಹೈಕೋರ್ಟ್ ಅವಕಾಶ ನೀಡಿದೆ.

ಆದರೆ, ಈ ಆದೇಶದಿಂದ ಮಾಜಿ ಸಂಸದರಿಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಮಾತ್ರ ಸಿಗುವುದಿಲ್ಲ. ಹೌದು ಪ್ರತ್ಯೇಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವುದರಿಂದ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಮುಂದುವರಿಯಬೇಕಾಗಿದೆ.

Karnataka High Court Allows Prajwal Revanna To Seek Default Bail In Obscene Video Case Yet No Release From Jail

ಪೊಲೀಸರ ವಿಳಂಬದಿಂದ ಕಡ್ಡಾಯ ಜಾಮೀನು ಕೋರಲು ಅವಕಾಶ: ಹೈಕೋರ್ಟ್ ಹೇಳಿದ್ದೇನು?

ಅಶ್ಲೀಲ ದೃಶ್ಯ ಚಿತ್ರೀಕರಣ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಕಡ್ಡಾಯ ಜಾಮೀನು (Statutory Bail) ಅರ್ಜಿಯನ್ನ ಈ ಹಿಂದೆ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನ ಪ್ರಶ್ನಿಸಿ ಪ್ರಜ್ವಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಶೇಷ ನ್ಯಾಯಾಲಯದ ಆದೇಶವನ್ನ ರದ್ದುಗೊಳಿಸಿದೆ.

Prajwal Revanna: ಪ್ರಜ್ವಲ್‌ ರೇವಣ್ಣ ಜೈಲು ಮೊಬೈಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಮೂವರಿಗೂ ಜಾಮೀನು ತಿರಸ್ಕಾರ
Prajwal Revanna: ಪ್ರಜ್ವಲ್‌ ರೇವಣ್ಣ ಜೈಲು ಮೊಬೈಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಮೂವರಿಗೂ ಜಾಮೀನು ತಿರಸ್ಕಾರ

ನಿಗದಿತ ಕಾಲಮಿತಿಯೊಳಗೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸದ ಕಾರಣ, ಕಾನೂನಿನ ಪ್ರಕಾರ ಆರೋಪಿಯು ಕಡ್ಡಾಯ ಜಾಮೀನು ಪಡೆಯಲು ಅರ್ಹನಾಗಿರುತ್ತಾನೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆದಾಗ್ಯೂ, ಬೇರೆ ಪ್ರಕರಣದಲ್ಲಿ ಈಗಾಗಲೇ ದೋಷಿ ಎಂದು ಸಾಬೀತಾಗಿ ಶಿಕ್ಷೆ ಅನುಭವಿಸುತ್ತಿರುವುದರಿಂದ, ಈ ಕಡ್ಡಾಯ ಜಾಮೀನಿನ ನೇರ ಪ್ರಯೋಜನ ಪ್ರಜ್ವಲ್ ಅವರಿಗೆ ದೊರೆಯುವುದಿಲ್ಲ ಹಾಗೂ ಜೈಲಿನಿಂದ ಬಿಡುಗಡೆ ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಜೀವಾವಧಿ ಶಿಕ್ಷೆಯಿಂದಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಮುಂದುವರಿಕೆ

ಪ್ರಜ್ವಲ್ ರೇವಣ್ಣ ಅವರಿಗೆ ಜೈಲಿನಿಂದ ಹೊರಬರಲು ಪ್ರಮುಖ ಅಡ್ಡಿಯಾಗಿರುವುದು ಪ್ರತ್ಯೇಕ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ. 47 ವರ್ಷದ ಮನೆಗೆಲಸದ ಮಹಿಳೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿ, ಅದನ್ನ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದಡಿ ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ವಿಶೇಷ ನ್ಯಾಯಾಲಯವು ಆಗಸ್ಟ್ 2, 2025ರಂದು ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೊತೆಗೆ 11 ಲಕ್ಷ ರೂಪಾಯಿ ದಂಡ ವಿಧಿಸಿ, ಆ ಮೊತ್ತವನ್ನ ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿತ್ತು.

ಈ ಜೀವಾವಧಿ ಶಿಕ್ಷೆಯನ್ನ ಅಮಾನತುಗೊಳಿಸುವಂತೆ ಹಾಗೂ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ಡಿಸೆಂಬರ್ 3, 2025ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಅಪರಾಧದ ಗಂಭೀರತೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹಾಗೂ ಇನ್ನೂ ಹಲವು ಲೈಂಗಿಕ ದೌರ್ಜನ್ಯ ಪ್ರಕರಣಗಳು ಬಾಕಿ ಇರುವುದನ್ನು ನ್ಯಾಯಾಲಯ ಉಲ್ಲೇಖಿಸಿತ್ತು.

2024ರ ಪೆನ್‌ಡ್ರೈವ್ ಪ್ರಕರಣದ ಹಿನ್ನೆಲೆ

2024ರ ಲೋಕಸಭಾ ಚುನಾವಣೆಗೂ ಮುನ್ನ ಹಾಸನದಲ್ಲಿ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆಯಾದ ಬಳಿಕ ಮಾಜಿ ಜೆಡಿಎಸ್ ಸಂಸದರ ವಿರುದ್ಧ ಸಾಲು ಸಾಲು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಅಂದಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಕಾನೂನು ಹೋರಾಟ ವಿವಿಧ ನ್ಯಾಯಾಲಯಗಳಲ್ಲಿ ಮುಂದುವರಿದಿದೆ.

ಪ್ರಜ್ವಲ್‌ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದರೆ ಎಷ್ಟು ಮಂದಿ ದೂರು ನೀಡಿದ್ದಾರೆ? ರಾಹುಲ್‌ ಗಾಂಧಿಗೆ ಎಚ್‌ಡಿಕೆ ಪ್ರಶ್ನೆ
ಪ್ರಜ್ವಲ್‌ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದರೆ ಎಷ್ಟು ಮಂದಿ ದೂರು ನೀಡಿದ್ದಾರೆ? ರಾಹುಲ್‌ ಗಾಂಧಿಗೆ ಎಚ್‌ಡಿಕೆ ಪ್ರಶ್ನೆ

ಅತ್ಯಾಚಾರ ಪ್ರಕರಣದ ವಿಚಾರಣೆಯನ್ನ ಬೇರೆ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಕೋರಿ ಡಿಸೆಂಬರ್ 2025ರಲ್ಲಿ ಪ್ರಜ್ವಲ್ ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ ಏರಿದ್ದರು . ಇದಕ್ಕೂ ಮುನ್ನ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದ್ದವು. ಇದೀಗ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹೈಕೋರ್ಟ್ ಕಡ್ಡಾಯ ಜಾಮೀನಿಗೆ ಅವಕಾಶ ನೀಡಿರುವುದು ಕಾನೂನು ಪ್ರಕ್ರಿಯೆಯ ಹೊಸ ಬೆಳವಣಿಗೆಯಾಗಿದ್ದರೂ, ಜೀವಾವಧಿ ಶಿಕ್ಷೆ ಹಾಗೂ ಇತರ ಬಾಕಿ ಪ್ರಕರಣಗಳಿಂದಾಗಿ ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜೈಲುವಾಸದಿಂದ ಮುಕ್ತಿ ಇಲ್ಲದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+