• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋವಿಡ್ ನಿಯಂತ್ರಣ SOP ಕಟ್ಟು ನಿಟ್ಟು ಜಾರಿಗೆ ಹೈಕೋರ್ಟ್ ನಿರ್ದೇಶನ

|
Google Oneindia Kannada News

ಬೆಂಗಳೂರು, ಜ. 14: ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಜಾಥಾ, ಮೆರವಣಿಗೆ, ಪಾದಯತ್ರೆಗಳಿಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಖಡಕ್ ವಾರ್ನಿಂಗ್ ನೀಡಿದೆ.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ತಡೆಯುವಂತೆ ಕೋರಿ ತಿಂಡ್ಲು ನಿವಾಸಿ ಎ.ವಿ.ನಾಗೇಂದ್ರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಋತುರಾಜ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಯಾವುದೇ ಅನುಮತಿ ಪಡೆಯದೇ ಮೇಕೆದಾಟು ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಪಕ್ಷದ ಪರ ಹಾಜರಾದ ವಕೀಲ ಉದಯ ಹೊಳ್ಳ ಅವರು, 'ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ' ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಕೋವಿಡ್ ನಿಯಂತ್ರಣ ಸಂಬಂಧ ಜ. 4 ರಂದು ಹೊರಡಿಸಲಾಗಿರುವ ಎಸ್ಒಪಿಯನ್ನು ರಾಜ್ಯದಾದ್ಯಂತ ಕಟ್ಟು ನಿಟ್ಟಾಗಿ ಜಾರಿಗೆ ತರಬೇಕು' ಎಂದು ಸರ್ಕಾರಕ್ಕೆ ನಿರ್ದೇಶಿಸಿತು.

'ಮೇಕೆದಾಟು ಯೋಜನೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ಮುಂದುವರಿಸದಂತೆ ಕೆಪಿಸಿಸಿಯನ್ನು ನಿರ್ಬಂಧಿಸಬೇಕು. ಯಾವುದೇ ರಾಜಕೀಯ ಪಕ್ಷಗಳಿಗೆ ಮೆರವಣಿಗೆ, ಧರಣಿ ಹಾಗೂ ಪ್ರತಿಭಟನೆ ನಡೆಸಲು ಅನುಮತಿ ನೀಡಬಾರದು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಬೇಕು' ಎಂದು ಕೋರಿ ತಿಂಡ್ಲು ನಿವಾಸಿ ನಾಗೇಂದ್ರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

Karnataka High Court Asks State Govt To Strictly Implement Covid SOP

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಮತ್ತು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ರಾಮನಗರ ಜಿಲ್ಲಾಧಿಕಾರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖರನ್ನು ಪ್ರತಿವಾದಿಯನ್ನಾಗಿ ಉಲ್ಲೇಖಿಸಲಾಗಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ತೆಡೆಯಲು ಸರ್ಕಾರ ವಿಧಿಸಿರುವ ನಿರ್ಬಂಧಗಳ ನಡುವೆಯೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಜ. 9 ರಿಂದ ಹತ್ತು ದಿನಗಳ ಪಾದಯಾತ್ರೆ ಆಯೋಜಿಸಿತ್ತು. ಸರ್ಕಾರದ ಅನುಮತಿ ಇಲ್ಲದಿದ್ದರೂ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿ ಮೂರು ದಿನ ಪಾದಯಾತ್ರೆ ಮಂದುವರೆದಿತ್ತು. ಕಾರ್ಯಕರ್ತರು, ಮುಖಂಡರು, ಸಾಂಸ್ಕೃತಿಕ ತಂಡಗಳು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಕೋವಿಡ್ ನಿರ್ಬಂಧ ಉಲ್ಲಂಘಿಸಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಸರ್ಕಾರ ಮತ್ತು ಕೆಪಿಸಿಸಿಯನ್ನು ನ್ಯಾಯಪೀಠ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂತ್ತು. ಇದರ ಬೆನ್ನಲ್ಲೇ ಪಾದಯಾತ್ರೆಯನ್ನು ಮೊಟಕಗೊಳಿಸಲಾಗಿತ್ತು.

English summary
Karnataka High Court directed state government to strictly execute the SOP issued on January 4 in all districts in view of Covid-19 pandemic. It clarified that no rallies, dharnas or any other political gathering shall be permitted in the entire state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X