ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಮಾರ್ಚ್ 13ರಿಂದ ನಡೆಯಬೇಕಿದ್ದ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಕರ್ನಾಟ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸಬಹುದು ಎಂದು ಹೇಳಿದೆ.
ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಈ ಆದೇಶ ನೀಡಿದ್ದು, ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ತಿಳಿಸಿದ್ದಾರೆ. ಪಬ್ಲಿಕ್ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಗೆ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದರು.

2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು. ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಸೂಚಿಸಿತ್ತು. ಈ ತಿಂಗಳ 13 ರಿಂದ 18ರ ವರೆಗೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಶಿಕ್ಷಣ ಇಲಾಖೆ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ.
ಶೈಕ್ಷಣಿಕ ವರ್ಷದ ಮಧ್ಯದಲ್ಲಿ 5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರವು ಹೊರಡಿಸಿದ ಡಿಸೆಂಬರ್ 12, 2022 ರಲ್ಲಿ ಸುತ್ತೋಲೆ ನೀಡಿತ್ತು. ಇದನ್ನು ಪ್ರಶ್ನಿಸಿ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆಯು ಹೈಕೋರ್ಟ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಿತ್ತು.
ಆದರೆ, ಬೋರ್ಡ್ ಪರೀಕ್ಷೆ ಮಾಡುತ್ತಿಲ್ಲ. ಮಕ್ಕಳ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಮಾತ್ರ ಅಲ್ಪಸ್ವಲ್ಪ ಬದಲಾವಣೆ ಮಡಲಾಗಿದೆ. ಶೈಕ್ಷಣಿಕ ವರ್ಷದ ಆರಂಭದಿಂದ ಆಯಾ ಶಾಲೆಗಳು ನಡೆಸುವ ನಿರಂತರ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಒಟ್ಟು 100 ಅಂಕಗಳಲ್ಲಿ ಶೇ.80ರಷ್ಟು ಅಂಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಅಂತಿಮ ಮೌಲ್ಯಮಾಪನ ಪ್ರಕ್ರಿಯೆಗೆ ಉಳಿದ ಶೇಕಡಾ 20 ಅಂಕಗಳಿಗೆ ಮಾತ್ರ ರಾಜ್ಯ ಮಟ್ಟದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತದೆ. ಪತ್ರಿಕೆಯ ಮೌಲ್ಯಮಾಪನವನ್ನು ತಾಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ವಾದಿಸಿತ್ತು.

ಪ್ರಶ್ನೆ ಪತ್ರಿಕೆಗಳು 40 ಅಂಕಗಳಿಗೆ (20 ಬಹು ಆಯ್ಕೆಯ ಪ್ರಶ್ನೆಗಳು ಮತ್ತು 20 ವಿವರಣೆ) ಮತ್ತು ಈ ಪರೀಕ್ಷೆಯಲ್ಲಿ ಪಡೆದ ಅಂಕಗಳ 50%, 20 % ಮೌಲ್ಯಮಾಪನವನ್ನು ಎಣಿಸಲು ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರವು ವಾದಿಸಿತು. ಆರ್‌ಟಿಇ ಕಾಯ್ದೆಯ ಸೆಕ್ಷನ್ 16 ರ ಪ್ರಕಾರ ಮೌಲ್ಯಮಾಪನ ಪ್ರಕ್ರಿಯೆಯನ್ನು ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಆದರೆ ರಾಜ್ಯ ಸರ್ಕಾರದ ವಾದಗಳ್ನನು ತಳ್ಳಿಹಾಕಿರುವ ಹೈಕೋರ್ಟ್ ಪಬ್ಲಿಕ್ ಪರೀಕ್ಷೆಯನ್ನು ರದ್ದು ಮಾಡಿದೆ.












Click it and Unblock the Notifications