Prajwal Revanna: ಅಶ್ಲೀಲಕ್ಕೂ ಒಂದು ಮಿತಿ ಇರಬೇಕು: ಪ್ರಜ್ವಲ್​ ರೇವಣ್ಣಗೆ ಹೈಕೋರ್ಟ್‌ ಚಾಟಿ

ಬೆಂಗಳೂರು, ಜನವರಿ 16: ಜೆಡಿಎಸ್‌ ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ತೀವ್ರ ಸದ್ದು ಮಾಡಿತ್ತು. ಇದೀಗ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಹೈಕೋರ್ಟ್​​ನಲ್ಲಿ ಹಿನ್ನಡೆಯಾಗಿದೆ.

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಅಲ್ಲದೇ ಅಶ್ಲೀಲಕ್ಕೂ ಒಂದು ಮಿತಿ ಇರಬೇಕು, ಇದು ಎಲ್ಲಾ ಮೀರಿದೆ ಎಂದು ಕೋರ್ಟ್​ ಚಾಟಿ ಬೀಸಿದೆ.

Karnataka High Court denies Prajwal Revanna access to digital evidence

ಇನ್ನೂ ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಅಲ್ಲದೇ ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿದ. ಇದರಿಂದ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆಯಾಗಿದೆ.

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಿಆರ್‌ಪಿಸಿ ಸೆಕ್ಷನ್‌ 207ರ ಅಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಇಂದು (ಜನವರಿ 16) ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಗದೀಶ್, ಈಗಾಗಲೇ ಎಲ್ಲಾ ವಿಡಿಯೋ ಫೋಟೋ ನೀಡಲಾಗಿದೆ.

ಇನ್ನೂ ವಾದವನ್ನು ಆಲಿಸಿದ ಕೋರ್ಟ್,ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು. ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲಕ್ಕೂ ಒಂದು ಮಿತಿ ಇರಬೇಕು. ಇದು ಎಲ್ಲವನ್ನೂ ಮೀರಿದೆ. ಈ ರೀತಿಯ ಫೋಟೋಗಳನ್ನು ಯಾರು ಸೆರೆ ಹಿಡಿಯಲು ಸಾಧ್ಯ? ಎಂದು ಪ್ರಜ್ವಲ್‌ ಪರ ವಕೀಲ ಜಿ ಅರುಣ್‌ ಅವರನ್ನು ಕೋರ್ಟ್​ ಪ್ರಶ್ನಿಸಿದೆ.

ಸುಪ್ರೀಂ ಕೋರ್ಟ್‌ ಗೋಪಾಲಕೃಷ್ಣ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಪ್ರಕಾರ ಹಾಲಿ ಪ್ರಕರಣಕ್ಕೆ ಅಗತ್ಯವಾದ ಫೋಟೋ, ವಿಡಿಯೋಗಳನ್ನು ಪ್ರಾಸಿಕ್ಯೂಷನ್‌ ಒದಗಿಸಲಿದೆ. ಅದನ್ನು ಹೊರತುಪಡಿಸಿ ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ಫೋಟೋ, ವಿಡಿಯೋಗಳನ್ನು ನೀಡಲಾಗದು. ನೀವು ಏನೋ ಮಾಡಬೇಕು ಎಂಬುದಕ್ಕೆ ಬೇರೊಬ್ಬ ಮಹಿಳೆಯ ಖಾಸಗಿತನದ ಉಲ್ಲಂಘನೆಯಾಗುವುದಕ್ಕೆ ಅವಕಾಶ ನೀಡಲಾಗದು ಎಂದು ನ್ಯಾಯಾಲಯ ಚಾಟಿ ಬೀಸಿದೆ.

ಇಂದು(ಶುಕ್ರವಾರ) ಕೋರ್ಟ್​ಗೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಜರಾಗಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಟ್ರಯಲ್ ಪ್ರಾರಂಭವಾಗಿದ್ದು, ಜೈಲು ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿದ್ದರು. ಇನ್ನೂ ಟ್ರಯಲ್ ವೇಳೆ ಪ್ರಕರಣದ ವಿಡಿಯೋ, ಫೋಟೋಸ್ ಹಾಗೂ ಟೆಕ್ನಿಕಲ್ ಎವಿಡೆನ್ಸ್ ವೀಕ್ಷಣೆಗೆ ಅವಕಾಶ ನೀಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಮನವಿ ಮಾಡಿದ್ದರು. ಇದಕ್ಕೆ ಕೋರ್ಟ್ ಕೂಡ ಒಪ್ಪಿಗೆ ನೀಡಿದ್ದು, ನಾಳೆ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+