Breaking: ಪಿಎಸ್‌ಐ ನೇಮಕಾತಿ ಅಕ್ರಮ: ಐವರ ಜಾಮೀನು ಅರ್ಜಿ ವಜಾ
ಬೆಂಗಳೂರು ಜುಲೈ 22: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿಗಳ ಪೈಕಿ ಐವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಗಳು ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠವು ವಜಾಗೊಳಿಸಿ ಆದೇಶಿಸಿದೆ.

ಪಿಎಸ್‌ಐ ಅಕ್ರಮ ನೇಮಕಾತಿಯಲ್ಲಿ ಬಂಧಿತರಾಗಿದ್ದವರ ಪೈಕಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಸಿ.ಎನ್. ಶಶಿಧರ್, ದಿಲೀಪ್ ಕುಮಾರ್, ಸೂರ್ಯ ನಾರಾಯಣ, ರಘುವೀರ್, ನವೀನ್ ಪ್ರಸಾದ್ ಅವರ ಅರ್ಜಿ ವಜಾ ಮಾಡಿದೆ.












Click it and Unblock the Notifications