ಪ್ರಜ್ವಲ್‌ ರೇವಣ್ಣಗೆ ಒಂದೇ ದಿನ ಮೂರು ಆಘಾತ!

ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಕೇಸ್‌ನಲ್ಲಿ ಜೈಲು ಸೇರಿರುವ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಕೋರ್ಟ್‌ನಲ್ಲಿ ಪ್ರಜ್ವಲ್‌ ಅವರ ಜಾಮೀನು ಅರ್ಜಿ ವಜಾ ಆಗಿದೆ. ಅತ್ಯಾಚಾರ ಕೇಸ್‌ ಸಂಬಂಧ ಪ್ರಜ್ವಲ್‌ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಕೋರ್ಟ್‌ ಈ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಜ್ವಲ್‌ ಮೇಲೆ ಸದ್ಯ ನಾಲ್ಕು ಕೇಸ್‌ಗಳು ದಾಖಲಾಗಿದ್ದು, ಮೂರು ಕೇಸ್‌ಗಳಲ್ಲೂ ಜಾಮೀನು ಅರ್ಜಿ ನಿರಾಕರಣೆಯಾಗಿದೆ. ಅತ್ಯಾಚಾರದ ಎರಡು ಕೇಸ್‌, ಮಹಿಳೆಯ ಅಶ್ಲೀಲ ವಿಡಿಯೋ ಸೆರೆಹಿಡಿದ ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿದೆ. ಮತ್ತೊಂದು ಅತ್ಯಾಚಾರದ ಕೇಸ್‌ನಲ್ಲಿ ವಿಚಾರಣೆ ನಡೆದಿದ್ದು, ಆದೇಶ ಪ್ರಕಟಗೊಂಡಿಲ್ಲ.

Karnataka High Court Dismisses Former MP Prajwal Revanna s Bail Pleas

ಪ್ರಜ್ವಲ್‌ ರೇವಣ್ಣ ಅವರು ಮೂರು ಪ್ರಕರಣಗಳಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎರಡು ನಿರೀಕ್ಷಣಾ ಜಾಮೀನು, ಒಂದು ಕೇಸ್‌ನಲ್ಲಿ ಜಾಮೀನು ಕೋರಿದ್ದರು. ಆದರೆ, ವಿಚಾರಣೆ ನಡೆಸಿದ ಕೋರ್ಟ್‌ ಮೂರೂ ಪ್ರಕರಣಗಳಲ್ಲಿ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಗಳನ್ನು ವಜಾಗೊಳಿಸಿದೆ.

ಬರೋಬ್ಬರಿ ನಾಲ್ಕು ತಿಂಗಳುಗಳಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಪ್ರಜ್ವಲ್‌ ಅವರು ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್‌ನಲ್ಲಿ ಜಾಮೀನು ಕೋರಿದ್ದರು. ಮತ್ತೊಂದು ಸೈಬರ್‌ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ಎರಡು ಕೇಸ್‌ಗಳಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಮಹಿಳೆಯ ಬೆತ್ತಲೆ ವಿಡಿಯೋ ಸೆರೆಹಿಡಿದು ಅವರ ಘನತೆಗೆ ಧಕ್ಕೆ ತಂದ ಆರೋಪದ ಮೇರೆಗೆ ಪ್ರಜ್ವಲ್‌ ವಿರುದ್ಧ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿದ್ದವು.

ಪ್ರಜ್ವಲ್‌ ಮೇಲಿನ ಆರೋಪಗಳೇನು?: ಹಾಸನ ಹೊಳೆನರಸೀಪುರ ತೋಟದ ಮನೆಯಲ್ಲಿ ಕೆಲಸದಾಕೆ ಮೇಲಿನ ದೌರ್ಜನ್ಯ ಸಂಬಂಧ ಅತ್ಯಾಚಾರ ಕೇಸ್‌ ದಾಖಲಾಗಿತ್ತು. ಮತ್ತೊಬ್ಬ ಮಹಿಳೆಯ ಪುತ್ರನಿಗೆ ಪ್ರತಿಷ್ಠಿತ ಶಾಲೆಯಲ್ಲಿ ಅಡ್ಮಿಶನ್‌ ಮಾಡಿಸುವ ನೆಪದಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದರು ಎನ್ನಲಾಗಿದೆ. ಈ ಕೇಸ್‌ಗಳಲ್ಲಿ ಪ್ರಜ್ವಲ್‌ ನಿರೀಕ್ಷಣಾ ಜಾಮೀನು ಕೋರಿದ್ದರು. ಆದರೆ, ಹೈಕೋರ್ಟ್‌ ಎರಡೂ ಅರ್ಜಿಗಳನ್ನು ತಿರಸ್ಕರಿಸಿದೆ.

Karnataka High Court Dismisses Former MP Prajwal Revanna s Bail Pleas

ಹಾಸನ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯೆಯೊಬ್ಬರ ಮೇಲೆಯೂ ಪ್ರಜ್ವಲ್‌ ಅತ್ಯಾಚಾರ ಎಸಗಿರುವ ಆರೋಪವಿದ್ದು, ಈ ಸಂಬಂಧ ಅತ್ಯಾಚಾರ ಕೇಸ್‌ ದಾಖಲಾಗಿತ್ತು. ಈ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ಅರ್ಜಿ ಸಲ್ಲಿಸಿದ್ದರು. ಈ ಕೇಸ್‌ನಲ್ಲಿ ವಿಚಾರಣೆ ಮುಗಿದಿದ್ದು, ಶೀಘ್ರವೇ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

ಹಾಸನ ಜಿಲ್ಲೆಯ ಮಹಿಳೆಯೊಬ್ಬರು ಬೆಂಗಳೂರಿನ ಸೈಬರ್‌ ಪೊಲೀಸರಿಗೆ ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಆರೋಪ ಮಾಡಿ, ಕೇಸ್‌ ದಾಖಲಿಸಿದ್ದರು. ಹೀಗೆ ತಮ್ಮ ಮೇಲಿನ ಎಲ್ಲ ಕೇಸ್‌ಗಳಲ್ಲೂ ಜಾಮೀನು ಬೇಕೆಂದು ಪ್ರಜ್ವಲ್‌ ರೇವಣ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಮೂರು ಕೇಸ್‌ಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿದೆ. ಪ್ರಜ್ವಲ್‌ ರೇವಣ್ಣಗೆ ಮತ್ತೆ ಜೈಲುವಾಸ ಮುಂದುವರಿದಿದೆ. ಮತ್ತೊಂದೆಡೆ ತನಿಖೆ ಕೂಡ ಚುರುಕಾಗಿದ್ದು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳನ್ನು ಉಲ್ಲೇಖಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+