ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಎಲ್ಎಲ್‌ಸಿ ಪರೀಕ್ಷೆ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

|
Google Oneindia Kannada News

ಬೆಂಗಳೂರು, ಜುಲೈ 12: ಕೋವಿಡ್ 19 ಸಾಂಕ್ರಾಮಿಕದ ನಡುವೆ ಎಸ್ಎಲ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ, ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಜಸ್ಟೀಸ್ ಬಿವಿ ನಾಗರತ್ನ ಹಾಗೂ ಜಸ್ಟೀಸ್ ಎಚ್ ಸಂಜೀವ್ ಕುಮಾರ್ ಅವರಿದ್ದ ನ್ಯಾಯಪೀಠವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತ, ಸರ್ಕಾರ ಕೈಗೊಂಡ ಮಾರ್ಗಸೂಚಿಗಳು ಸಮರ್ಪಕವಾಗಿದೆ ಎಂದು ಪರಿಗಣಿಸಿದೆ, 2ನೇ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ ಎಂದು ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದು ಎಂಬ ವಾದವನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಬಲವಂತವಾಗಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಅರ್ಥವಿಲ್ಲ ಎಂದು ನ್ಯಾಯಪೀಠ ಹೇಳಿದೆ.

 Karnataka High Court dismisses petition demanding cancellation of SSLC exams

ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ರಾಜ್ಯದ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ನ್ಯಾಯಾಲಯಕ್ಕೆ ಕರ್ನಾಟಕ ಸರ್ಕಾರ ತಿಳಿಸಿದೆ.

ಕಳೆದ ವರ್ಷ 8 ಲಕ್ಷ ಮಂದಿ ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಳೆದ ವರ್ಷ 40 ಸಾವಿರ ಕೊಠಡಿಗಳನ್ನು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಬಳಸಲಾಗಿತ್ತು. ಈ ಬಾರಿ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಕೋವಿಡ್ 19 ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸಕ್ಕೆ ಹೆಚ್ಚಿಸಲು ಅಣಕು ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಬಟ್ಟೆ ಮಾಸ್ಕ್ ಇಲ್ಲವೇ N 95 ಮಾಸ್ಕ್ ಧರಿಸಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ಪರೀಕ್ಷಾ ಕೇಂದ್ರಕ್ಕೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು. ಎಲ್ಲಾ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Recommended Video

ಸುಮಲತಾ ವಿಚಾರದಲ್ಲಿ ಮೂಗು ತೂರಿಸಿ ರಾಕ್ಲೈನ್ ತಪ್ಪು ಮಾಡಿದ್ರಾ !! | Oneindia Kannada

ಜುಲೈ 19 ರಂದು ಪರೀಕ್ಷೆ: ಪೂರ್ವ ನಿಗದಿಯಂತೆ ಜುಲೈ 19 ರಂದು ಕೋರ್ ವಿಷಯಗಳಾದ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಆಧಾರಿತ ಒಂದು ಪ್ರಶ್ನೆ ಪತ್ರಿಕೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ 1.30 ರ ವರೆಗೆ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಮೂರು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ತಲಾ ಮೂರು ವಿಷಯಗಳಿಗೆ ಆಧರಿಸಿ ಒಂದು ಪ್ರಶ್ನೆ ಪತ್ರಿಕೆ ನೀಡಲಾಗುವುದು. ಕಳೆದ ವರ್ಷ ಪರೀಕ್ಷೆ ಆಗಿರಲಿಲ್ಲ. ಮಕ್ಕಳ ಹಬ್ಬ ಆಗಿತ್ತು. ಈ ಬಾರಿಯೂ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದ್ದೇವೆ. ಅದರಂತೆ ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದೆ. ಜೂನ್ 30 ರಿಂದ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಸುರೇಶ್ ಕುಮಾರ್ ತಿಳಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

English summary
Karnataka High Court dismisses petition demanding cancellation of SSLC exams and allowed State Government to hold SSLC exams in physical form for students of Class
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X