BREAKING: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್: MUDA case updates
ಬೆಂಗಳೂರು, ಫೆಬ್ರವರಿ 07: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮುಡಾ ಪ್ರಕರಣದ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ಬಿಗ್ ರಿಲೀಪ್ ನೀಡಿದೆ. ಸಿಎಂ ವಿರುದ್ಧದ ಕಾನೂನು ಹೋರಾಟದಲ್ಲಿ ಸಾಮಾಜಿಕ ಹೋರಾಟಗಾರ ಮತ್ತು ದೂರುದಾರ ಸ್ನೇಹಮಯಿ ಕೃಷ್ಣಗೆ ಹಿನ್ನೆಲಡೆ ಆಗಿದೆ. ಅವರ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಸಿಎಂ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿ ಇಂದು ಗುರುವಾರ (ಫೆಬ್ರವರಿ 07) ತೀರ್ಪು ನೀಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತವರ ಕುಟುಂಬದ ಮೇಲೆ ಸಾಕಷ್ಟು ಆರೋಪ ಕೇಳಿ ಬಂದಿತ್ತು. ಸ್ನೇಹಿಮಯಿ ಕೃಷ್ಣ ಅವರು ಸಿಎಂ ವಿರುದ್ಧ ದೂರು ನೀಡಿದ್ದರು. ಸಿಎಂ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿವಿಧ ಆರೋಪ ದೂರಿನಲ್ಲಿ ಮಾಡಿದ್ದರು. ಇದರ ವಿಚಾರಣೆ ನಡೆಸಿ, ಮೈಸೂರು ಲೋಕಾಯುಕ್ತ ಪೊಲೀಸ್ ತನಿಖೆಗೆ ಅಸ್ತು ಎಂದಿತ್ತು.

ಆದರೆ ಲೋಕಾಯುಕ್ತ ತನಿಖೆ ಬೇಡ, ಸಿದ್ದರಾಮಯ್ಯ ಅವರ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾಯಪೀಠವು ಈ ಅರ್ಜಿ ವಜಾಗೊಳಿಸಿ, ಸಿಬಿಐಗೆ ಬಿಗ್ ರಿಲೀಫ್ ನೀಡಿದೆ. ಮುಡಾ ಪ್ರಕರಣವನ್ನು ಪೊಲೀಸರೇ ತನಿಖೆ ಮುಂದುವರಿಸಲಿದ್ದಾರೆ.
ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯನ್ನು ಸಿಬಿಐಗೆ ವಹಿಸಲು ಧಾರವಾಡದ ಹೈಕೋರ್ಟ್ ನ್ಯಾಯಪೀಠ ನಿರಾಕರಿಸಿ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಸ್ನೇಹಮಯಿ ಕೃಷ್ಣ ಅವರಿಗೆ ಹಿನ್ನಡೆ ಆಗಿದೆ. ಈ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.
ಮುಡಾದಿಂದ ಬದಲಿ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸಿಎಂ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಅಕ್ರಮವಾಗಿ ಸಿದ್ದರಾಮಯ್ಯ ಅವರು ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇದಾಗುತ್ತಿದ್ದಂತೆ ಜಾರಿ ನಿರ್ದೇಶನಾಲಯ (ಇಡಿ) ಸಿಎಂ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೂ ನೋಟಿಸ್ ಜಾರಿ ಮಾಡಿತ್ತು. ವಿಚಾರಣೆ ನಡೆಸಿತ್ತು. ಇದೇ ಪ್ರಕರಣ ಸಂಬಂಧ ಮುಡಾ ಆಯುಕ್ತರು ಮತ್ತರು ಕಚೇರಿ ಮೇಲೆ ಇಡಿ ದಾಳಿ ಮಾಡಿತ್ತು. ಹಲವುರಿಗೆ ನೋಟಿಸ್ ಜಾರಿ ಮಾಡಿತ್ತು. ಬಳಿಕ ಪೊಲೀಸ್ ತನಿಖೆಗೆ ಕೋರ್ಟ್ ಆದೇಶಿಸಿತ್ತು.
ಕಾನೂನು ಹಿನ್ನಡೆ ಬಗ್ಗೆ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ
ಮುಖ್ಯಮಂತ್ರಿ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ. ಇದು ತಾತ್ಕಾಲಿಕ ಹಿನ್ನೆಯಾಗಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಕ್ರಮ ನಡೆದಿದೆ ಎಂಬುದು ಸತ್ಯ ಆರೋಪಿಸಿದ ಅವರು, ನಾನು ಇದರ ವಿರುದ್ಧ ನನ್ನ ಕಾನೂನು ಹೋರಾಟ ಮುಂದುವರೆಸುತ್ತೇನೆ. ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.
ಕರ್ನಾಟಕ ಹೈಕೋರ್ಟ್ ನ್ಯಾಯಪೀಠ ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣ ಪೊಲೀಸ್ ತನಿಖೆಯಿಂದ ಸಿಬಿಐಗೆ ಕೊಡುವುದು ಬೇಡ ಎಂದು ಆದೇಶಿಸಿದೆ. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ತಮ್ಮ ವಕೀಲರೊಂದಿಗೆ ಮಾತುಕತೆ ನಡೆಸಿದ್ದಾರೆ.












Click it and Unblock the Notifications