Get Updates
Get notified of breaking news, exclusive insights, and must-see stories!

Bike Taxi: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕೊನೆಗೂ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ರಾಜ್ಯ ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಬೈಕ್‌ಗಳನ್ನು ಟ್ಯಾಕ್ಸಿಗಳನ್ನಾಗಿ ಬಳಸಲು ಹೈಕೋರ್ಟ್ ಅನುಮತಿ ನೀಡಿದ್ದು, ಆ ಮೂಲಕ ಈ ಹಿಂದೆ ರಾಜ್ಯ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ತಡೆ ನೀಡಿದಂತಾಗಿದೆ.

ಕೊನೆಗೂ ಬೈಕ್ ಟ್ಯಾಕ್ಸಿ ಸೇವೆ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರಿಂದಾಗಿ ಇನ್ಮುಂದೆ ಬೈಕ್ ಟ್ಯಾಕ್ಸಿ ಸೇವೆ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

Karnataka High Court Gives Green Signal to Bike Taxis

ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದವರಿಗೆ ಈ ತೀರ್ಪು ನಿರಾಳತೆ ಉಂಟುಮಾಡಿದರೆ, ಸಾರ್ವಜನಿಕರಿಗೂ ಕಡಿಮೆ ದರದಲ್ಲಿ ಸೇವೆಗಳು ದೊರೆತು ಅನುಕೂಲವಾಗಲಿದೆ. ಈ ಹಿಂದೆ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಹೈಕೋರ್ಟ್ ಈಗ ರದ್ದುಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಬೈಕ್ ಟ್ಯಾಕ್ಸಿ ಸೇವೆ ನೀಡುವ ಓಲಾ ಮತ್ತು ಊಬರ್ ಕಂಪನಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿಸಿದೆ.

ಇನ್ನೂ ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ತೀರ್ಪಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಅಧಿಕೃತ ಪುನರಾರಂಭಕ್ಕೆ ಅವಕಾಶ ದೊರೆತಂತಾಗಿದ್ದು, ಉದ್ಯೋಗಾವಕಾಶಗಳು ಕೂಡ ಹೆಚ್ಚುವ ಸಾಧ್ಯತೆ ಇದೆ. ಅಲ್ಲದೇ ಬೆಂಗಳೂರಿನ ದುಬಾರಿ ಜೀವನ ಶೈಲಿಯಿಂದಾಗಿ ಪ್ರಯಾಣಿಕರಿಗೂ ಸಹ ಕಡಿಮೆ ವೆಚ್ಚದ ಸುಲಭ ಸಾರಿಗೆ ಸೌಲಭ್ಯ ಲಭ್ಯವಾಗಲಿದೆ.

ಏನಿದು ಪ್ರಕರಣ?

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಂದ ಸಂಚಾರ ನಿಯಮ ಉಲ್ಲಂಘನೆಯಾಗುತ್ತಿದೆ ಮತ್ತು ಆಟೋ ರಿಕ್ಷಾ ಚಾಲಕರ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಖಾಸಗಿ ಕಂಪನಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು. ಇದೀಗ ಕರ್ನಾಟಕ ಹೈಕೋರ್ಟ್‌ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ಕಲ್ಪಿಸಿ ಕೊಟ್ಟಿದೆ.

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಇನ್ನೂ ಕೋರ್ಟ್ ಆದೇಶದ ಪ್ರತಿ ಸಿಕ್ಕಿಲ್ಲ. ಆದೇಶದ ಪ್ರತಿ ಬಂದ ನಂತರ ಅದನ್ನು ಕೂಲಂಕಷವಾಗಿ ಪರಿಶೀಲಿಸುತ್ತೇನೆ. ಈ ಬಗ್ಗೆ ಇಲಾಖೆಯ ಕಮಿಷನರ್ ಅವರೊಂದಿಗೆ ಚರ್ಚಿಸಿ, ಮುಂದಿನ ಕಾನೂನು ಹೋರಾಟ ಅಥವಾ ತೀರ್ಮಾನದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+