BS Yediyurappa: 'ಪೋಕ್ಸೋ' ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್
ಧಾರವಾಡ, ಫೆಬ್ರವರಿ 07:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠವು ತೀರ್ಪು ಪ್ರಕಟಿಸಿದ್ದು, ನ್ಯಾ.ಎಂ ನಾಗಪ್ರಸನ್ನ ಅವರು ಬಿ ಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದರು.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭವಾದ ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬಂಧನದ ಭೀತಿಯಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಇದೊಂದು ಬಿಗ್ ರಿಲೀಫ್ ಸಿಕ್ಕಂತಾಗಿದೆ. ಆದರೆ ಯಡಿಯೂರಪ್ಪ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ ಎಂದು ತಿಳಿದು ಬಂದಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ. ಆದರೆ, ಈ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದ್ರೆ ಈ ಪ್ರಕರಣದ ಕಷ್ಟ ತಪ್ಪಿಲ್ಲ. ಯಾಕಂದ್ರೆ ಕೋರ್ಟ್ ಕೇವಲ ಜಾಮೀನು ನೀಡಿದೆ ಹೊರತು ಪ್ರಕರಣ ರದ್ದು ಮಾಡಿಲ್ಲ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿದಿದ್ದು, ಅದರಂತೆ ಇದೀಗ ಧಾರವಾಡ ಹೈಕೋರ್ಟ್ ಪೀಠ, ಪ್ರಕರಣ ರದ್ದು ಮಾಡುವ ಬದಲು ಕೇವಲ ಜಾಮೀನು ನೀಡಿದೆ. ಹೀಗಾಗಿ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಇನ್ನು ತಾಂತ್ರಿಕ ಕಾರಣಕ್ಕೆ ಈ ಪ್ರಕರಣವನ್ನು ಹೈಕೋರ್ಟ್, ಪೋಕ್ಸೋ ಕೋರ್ಟ್ಗೆ ವಾಪಸ್ ಮರಳಿಸಿದೆ. ಹೀಗಾಗಿ ಪೋಕ್ಸೋ ಕೋರ್ಟ್ನಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಚಾರಣೆ ಎದುರಿಸಬೇಕಿದೆ.
ಏನಿದು ಪ್ರಕರಣ?
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಕಳೆದ 2024 ಮಾರ್ಚ್ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆದಿತ್ತು ಎನ್ನುವ ಆರೋಪ ಮಾಡಿ ಮಹಿಳೆ ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ. ಫೆಬ್ರವರಿ 2ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.












Click it and Unblock the Notifications