ಬಂಡೀಪುರದ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಕಟ್ಟಡ: ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ
ಬೆಂಗಳೂರು, ಸೆ 2: ಬಂಡೀಪುರ ಸೂಕ್ಷ್ಮ ಪರಿಸರ ವಲಯದಲ್ಲಿ ಬರುವ ಕುಂದುಕರೆ ವ್ಯಾಪ್ತಿಯ ಜಕ್ಕಳಿ ಗ್ರಾಮದಲ್ಲಿನ ತಮ್ಮ 1.24 ಎಕರೆ ಇರುವ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ನಟ ಗಣೇಶ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಅನುಮತಿ ನೀಡಿದೆ.
ಇದರಿಂದಾಗಿ ಗಣೇಶ್ ಗೆ ತಾತ್ಕಾಲಿಕ ಜಯ ದೊರೆತಿದೆ, ಆದರೆ ಅವರ ಮನೆ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ನಟ ಗಣೇಶ್ ಅವರು ಸಲ್ಲಿಸಿದ್ದ ಮೆಮೊ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿದ ಬಳಿಕ, ಅರ್ಜಿದಾರರು ಕಟ್ಟಡ ನಿರ್ಮಾಣ ಮಾಡಬಹುದು ಎಂದು ತಾತ್ಕಾಲಿಕ ಅನುಮತಿ ಮಂಜೂರು ಮಾಡಿದೆ.

ಅಡ್ವೊಕೇಟ್ ಜನರಲ್ ಅವರ ಮೂಲಕ ಸಲ್ಲಿಸುವಂತೆ ಅರ್ಜಿದಾರರಿಗೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ ನೀಡಬೇಕಾದ ಮನವಿ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.
ಸುಪ್ರೀಂಕೋರ್ಟ್ ಆದೇಶ ಉಲ್ಲೇಖ: ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲರು "2023ರಲ್ಲಿ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ಆದೇಶವಿದ್ದು, ಕಟ್ಟಡ ನಿರ್ಮಾಣಕ್ಕೆ ಯಾವುದೇ ನಿರ್ಬಂಧವಿಲ್ಲ. ಕಟ್ಟಡ ನಿರ್ಮಾಣ ನಿಯಂತ್ರಣ ಅಥವಾ ನಿಷೇಧಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಯಾವುದೇ ಅಧಿಕಾರವಿಲ್ಲ. ಇದರಿಂದ ಸ್ಥಳೀಯರಿಗೆ ಹಲವು ಸಮಸ್ಯೆಗಳಾಗುತ್ತಿವೆ ಎಂದರು.
ಅಲ್ಲದೆ, ಬೇರೆಯವರಿಗೆ ಮನೆ ನಿರ್ಮಾಣ ಮಾಡಲು ಅರಣ್ಯ ಇಲಾಖೆ ನೀಡಿದೆ. ಆದರೆ, ಅರ್ಜಿದಾರರಿಗೆ ನಿರ್ಬಂಧಿಸಿದೆ. ಒಂದೊಮ್ಮೆ ಅರ್ಜಿದಾರರ ತಪ್ಪುಕಂಡು ಬಂದರೆ ಕಟ್ಟಡ ತೆರವು ಮಾಡಲಾಗುವುದು" ಎಂದು ಪೀಠಕ್ಕೆ ಭರವಸೆ ನೀಡಿದರು. ಅಡ್ವೊಕೇಟ್ ಜನರಲ್ "ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ತಾತ್ಕಾಲಿಕ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಮಾತ್ರ ಅವಕಾಶವಿದೆ" ಎಂದರು.
ಅಗ ನ್ಯಾಯಪೀಠವು "ಹಾಗಾದರೆ ಬೇರೆಯವರಿಗೆ ಕಟ್ಟಡ ನಿರ್ಮಾಣ ಮಾಡಲು ಅರಣ್ಯ ಇಲಾಖೆ ಹೇಗೆ ಅನುಮತಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಹೊಸ ದಾಖಲೆಗಳನ್ನು ನೀಡಿದ್ದಾರೆ. ಮೇಲ್ನೋಟಕ್ಕೆ ಅವೆಲ್ಲವೂ ಹೊಸ ಅನುಮತಿಗಳೇ ಹಾಗಗಿ ಅರ್ಜಿದಾರರಿಗೆ ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಲಾಗುವುದು ಎಂದು ಆದೇಶಿಸಿತು.
ಹಿಂದಿನ ಆದೇಶವೇನು? ಆಗಸ್ಟ್ 21ರಂದು ನ್ಯಾಯಾಲಯ, ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರು ಸಲ್ಲಿಸಲು ಸೂಚಿಸಿರುವ ದಾಖಲೆಗಳನ್ನು ನಟ ಗಣೇಶ್ ಅವರು ಏಳು ದಿನಗಳಲ್ಲಿ ಸಲ್ಲಿಸಬೇಕು. ಅದಾದ ನಾಲ್ಕು ವಾರಗಳಲ್ಲಿ ಸಂಬಂಧಿತ ಅಧಿಕಾರಿ ಕ್ರಮಕೈಗೊಳ್ಳಬೇಕು" ಎಂದು ಆದೇಶ ನೀಡಿತ್ತು.












Click it and Unblock the Notifications