ಕೋರ್ಟ್ ಕಲಾಪಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಹೈಕೋರ್ಟ್

ಬೆಂಗಳೂರು, ಜೂನ್ 14 : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ. ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ ಕಲಾಪಕ್ಕೆ ಹೊಸ ಮಾರ್ಗಸೂಚಿ ಪ್ರಕಟವಾಗಿದೆ.

Recommended Video

      ಯಡಿಯೂರಪ್ಪ ಶಾಶ್ವತ ಅಲ್ಲ ಎಂದು ಏಕವಚನದಲ್ಲಿ ರೇಗಾಡಿದ ರೇವಣ್ಣ | Revanna | Yeddiyurappa

      ಕರ್ನಾಟಕ ಹೈಕೋರ್ಟ್ ಜೂನ್ 15ರಿಂದ ಜಾರಿಗೆ ಬರುವಂತೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ನ್ಯಾಯಾಲಯಗಳಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ಮಾತ್ರ ಅನುಮತಿ ಇದೆ.

      ಜೂನ್ 15ರಿಂದ ಎರಡು ವಾರಗಳ ಅವಧಿಗೆ ಒಂದು ಕೋರ್ಟ್‌ನಲ್ಲಿ ಬೆಳಗ್ಗೆ 10, ಮಧ್ಯಾಹ್ನ 10 ಪ್ರಕರಣಗಳ ವಿಚಾರಣೆಯನ್ನು ಮಾತ್ರ ನಡೆಸಬಹುದಾಗಿದೆ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

      Karnataka High Court Issues New SOPs For Courts Proceedings

      ಕೋರ್ಟ್ ಆವರಣಕ್ಕೆ ವಾದ ಮಂಡನೆ ಮಾಡಲಿರುವ ವಕೀಲರನ್ನು ಹೊರತುಪಡಿಸಿ ಇತರರಿಗೆ ಪ್ರವೇಶವಿಲ್ಲ. ವಕೀಲರು ಇಚ್ಛಿಸಿದರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಹ ವಾದವನ್ನು ಮಂಡಿಸಬಹುದಾಗಿದೆ.

      ಮುಂದಿನ ಎರಡು ವಾರಗಳ ಕಾಲ ಪರಿಸ್ಥಿತಿಯನ್ನು ನೋಡಿಕೊಂಡು ಮಾರ್ಗಸೂಚಿಗಳಲ್ಲಿ ಬದಲಾವಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

      ಮಾರ್ಚ್‌ನಲ್ಲಿ ಲಾಕ್ ಡೌನ್ ಘೋಷಣೆಯಾದ ಬಳಿ ತುರ್ತು ಪ್ರಕರಣಗಳ ವಿಚಾರಣೆಗೆ ಮಾತ್ರ ಅನುಮತಿ ನೀಡಲಾಗಿದೆ. ಜೂನ್ 1ರಿಂದ ದಿನಕ್ಕೆ 20 ಪ್ರಕರಣಗಳ ವಿಚಾರಣೆ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+