Hijab Verdict; ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ

ಬೆಂಗಳೂರು, ಮಾರ್ಚ್ 15; ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಪೂರ್ಣಗೊಂಡಿದ್ದು, ಮಂಗಳವಾರ ತೀರ್ಪು ಪ್ರಕಟವಾಗಲಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ಇಂದು ತೀರ್ಪು ಪ್ರಕಟವಾಗುತ್ತಿದೆ.

ಹಿಜಾಬ್ ಅರ್ಜಿಗಳ ಕುರಿತ ತೀರ್ಪು ಪ್ರಕಟವಾಗುವ ಹಿನ್ನಲೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Karnataka High Court Judgement on Hijab Latest News, Updates and Highlights

ಹಿಜಾಬ್ ವಿವಾದ ತೀರ್ಪಿನ ಬೆಳವಣಿಗೆಗಳು

* ಹಿಬಾಬ್ ವಿವಾದದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

* ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, "ನಾನು ನ್ಯಾಯಲಯದ ತೀರ್ಪನ್ನು ಸ್ವಾಗತಿಸುತ್ತೇನೆ. ಹೈಕೋರ್ಟ್‌ ತೀರ್ಪನ್ನು ಎಲ್ಲರೂ ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡುತ್ತೇನೆ. ವಿದ್ಯಾರ್ಥಿಗಳ ಮೊದಲ ಕೆಲಸ ವ್ಯಾಸಂಗ ಮಾಡುವುದು. ಬೇರೆ ಎಲ್ಲವನ್ನೂ ಬದಿಗಿಟ್ಟು ಒಟ್ಟಾಗಿ ಓದಿ" ಎಂದರು.

* ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, "ಹಿಜಾಬ್ ತೀರ್ಪು ಸಹಜವಾಗಿ ಸ್ವೀಕರಿಸಿ. ತೀರ್ಪಿನ ಬಳಿಕ ಉದ್ವಿಗ್ನತೆಯ ಹೇಳಿಕೆಗಳನ್ನು ಕೊಡಬಾರದು. ಸಭೆ, ಸಂಭ್ರಮಾಚರಣೆ ಮಾಡುವುದು ಬೇಡ. ಮೆರವಣಿ ನಡೆಸಬಾರದು. ಎಲ್ಲ ಸಂಘ ಸಂಸ್ಥೆಳು, ಸಂಘಟನೆಗಳು, ಸಮಾಜದ ಗಣ್ಯರು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು" ಎಂದು ಹೇಳಿದ್ದಾರೆ.

* ಹಿಬಾಬ್ ವಿವಾದದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಸಮಸ್ತ ಜನರಿಗೆ, ಎಲ್ಲಾ ಸಮುದಾಯದ ನಾಯಕರಿಗೆ, ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ನಾನು ಮನವಿ ಮಾಡುತ್ತೇನೆ. ಎಲ್ಲರೂ ಶಾಂತಿ ಕಾಪಾಡಿ. ಮಕ್ಕಳಿಗೆ ಶಿಕ್ಷಣ ನೀಡಲು ಎಲ್ಲರೂ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದರು.

* ಹಿಜಾಬ್‌ ವಿವಾದದ ತೀರ್ಪು ಪ್ರಕಟಿಸಿ ವಿಚಾರಣೆಯನ್ನು ವಿಶೇಷ ಪೀಠ ವಿಚಾರಣೆ ಮುಕ್ತಾಯಗೊಳಿಸಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

* ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

* ಹಿಜಾಬ್ ನಿರ್ಬಂಧ ವಿಚಾರದಲ್ಲಿ ಕರ್ನಾಟಕದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.

* ಸರ್ಕಾರದ ವಸ್ತ್ರ ಸಂಹಿತೆ ಆದೇಶವನ್ನು ಪ್ರಶ್ನೆ ಮಾಡುವಂತಿಲ್ಲ.

* ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

* ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ. ಅವುಗಳಿಗೆ ಉತ್ತರವನ್ನು ನೀಡಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ ಹೇಳಿದರು.

* ಮುಖ್ಯ ನ್ಯಾಯಮೂರ್ತಿಗಳು ತೀರ್ಪಿನ ಪ್ರತಿಗೆ ಸಹಿ ಹಾಕುತ್ತಿದ್ದಾರೆ.

* ಕರ್ನಾಟಕ ಹೈಕೋರ್ಟ್‌ ಕಲಾಪ ಆರಂಭವಾಗಿದೆ.

* ಅರ್ಜಿಗಳ ವಿಚಾರಣೆ ನಡೆಸುವಾಗ ಫೆಬ್ರವರಿ 11ರಂದು ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು.

* ಕರ್ನಾಟಕ ಹೈಕೋರ್ಟ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

* ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ವಿದ್ಯಾರ್ಥಿನಿಯರು ಜನವರಿ 31ರಂದು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.

* ಮೂವರು ನ್ಯಾಯಮೂರ್ತಿಗಳ ವಿಶೇಷ ಪೀಠ ಹಿಜಾಬ್ ವಿವಾದದ ಕುರಿತು ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದು, ಇಂದು ತೀರ್ಪು ಪ್ರಕಟಿಸುತ್ತಿದೆ.

* ಹಿಜಾಬ್‌ ವಿವಾದದ ತೀರ್ಪು ಪ್ರಕಟಿಸಿ ವಿಚಾರಣೆಯನ್ನು ವಿಶೇಷ ಪೀಠ ಮುಕ್ತಾಯಗೊಳಿಸಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+