ತೇಜಸ್ವಿ ಸೂರ್ಯ ವಿರುದ್ಧ ಪಿಐಎಲ್; ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಮೇ 14; ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಬೆಡ್ ಬ್ಲಾಕಿಂಗ್ ಹಗರಣ ಬಯಲಿಗೆ ತಂದ ಬಳಿಕ ಅರ್ಜಿ ಸಲ್ಲಿಕೆಯಾಗಿತ್ತು.

ಯುವ ಕಾಂಗ್ರೆಸ್‌ನ ಶ್ರೀವತ್ಸ ವೈ. ಬಿ. ಸಲ್ಲಿಕೆ ಮಾಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮೇ 12ರಂದು ತಿಳಿಸಿದೆ. ಇದು ರಾಜಕೀಯ ಪ್ರೇರಿತ ಅರ್ಜಿಯಾಗಿದೆ ಎಂದು ಕೋರ್ಟ್ ಹೇಳಿದೆ.

ಬಿಬಿಎಂಪಿ ವಾರ್ ರೂಂನ 17 ನೌಕರರ ಅಮಾನತು ಪ್ರಶ್ನಿಸಿ ಈ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ನೌಕರರಿಗೆ ಅನ್ಯಾಯವಾಗಿದ್ದರೆ ಅವರು ಕೋರ್ಟ್‌ಗೆ ಬರಲಿ ಎಂದು ನ್ಯಾಯಾಲಯ ತಿಳಿಸಿದೆ. ಬೆಡ್ ಬ್ಲಾಕಿಂಗ್ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಕೋರ್ಟ್‌ಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

high court

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಕೆಲವು ಶಾಸಕರು ಬಿಬಿಎಂಪಿ ವಾರ್ ರೂಂ ಮೇಲೆ ದಾಳಿ ನಡೆಸಿ ಬೆಡ್ ಬ್ಲಾಕಿಂಗ್ ಹಗರಣ ಪತ್ತೆ ಹಚ್ಚಿದ್ದರು. ವಾರ್ ರೂಂನಲ್ಲಿಯೇ ಬೆಡ್ ಬ್ಲಾಕ್ ಆಗುತ್ತಿದ್ದ ವಿಚಾರವನ್ನು ಬಹಿರಂಗಪಡಿಸಿದ್ದರು.

ವಾರ್‌ ರೂಂನಲ್ಲಿ ಕೆಲಸ ಮಾಡುತ್ತಿದ್ದ 17 ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಒಂದೇ ಸಮುದಾಯದವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಕರ್ನಾಟಕ ಸರ್ಕಾರ ಹಗರಣದ ತನಿಖೆಯನ್ನು ಸಿಸಿಬಿಗೆ ವಹಿಸಿತ್ತು.

ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುವಾಗ ಅರ್ಜಿದಾರರ ಪರ ವಕೀಲರು ಸಂಸದರು ಒಂದೇ ಕೋವಿನ ನೌಕರರನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಮಾಡಿರುವ ಆರೋಪದ ಕಾರಣ ನೌಕರರು ಅಮಾನತುಗೊಂಡಿದ್ದಾರೆ.

ಆದ್ದರಿಂದ ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ವಾದಿಸಿದರು. ನ್ಯಾಯಪೀಠ ಅರ್ಜಿದಾರರು ರಾಜಕೀಯ ಪ್ರೇರಿತವಾಗಿ ಅರ್ಜಿ ಸಲ್ಲಿಸಿದಂತೆ ಕಾಣುತ್ತಿದೆ. ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ನಿರಾಕರಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+