ಕಾಮೆಡ್-ಕೆ ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು, ಆಗಸ್ಟ್ 13 : ಕಾಮೆಡ್-ಕೆ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಪರೀಕ್ಷೆ ಮುಂದೂಡಲು ನ್ಯಾಯಾಲಯ ನಿರಾಕರಿಸಿದೆ.
Recommended Video
ವಕೀಲ ಅಬ್ದುಲ್ ಮನ್ನಾನ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರಿಂದಾಗಿ ನಿಗದಿಯಂತೆ ಕಾಮೆಡ್-ಕೆ ಪರೀಕ್ಷೆ ಆಗಸ್ಟ್ 19ರಂದು ನಡೆಯಲಿದೆ.
ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ ಸಾವಿರಾರು ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಇದರಿಂದಾಗಿ ಕೋವಿಡ್ ಸೋಂಕು ಹರಡಬಹುದು ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

70 ರಿಂದ 80 ಸಾವಿರ ವಿದ್ಯಾರ್ಥಿಗಳು ಕಾಮೆಡ್-ಕೆ ಪರೀಕ್ಷೆ ಬರೆಯುತ್ತಾರೆ. ಈ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವ ಸಾಧ್ಯತೆ ಇದೆ. ಆದ್ದರಿಂದ, ಪರೀಕ್ಷೆಯನ್ನು ಮುಂದೂಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ದ್ವಿತೀಯ ಪಿಯುಸಿ ಒಂದು ವಿಷಯದ ಪರೀಕ್ಷೆ ನಡೆಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು.
ಕರ್ನಾಟಕದಲ್ಲಿ ಬುಧವಾರ 7 ಸಾವಿರಕ್ಕೂ ಅಧಿಕ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,96,494ಕ್ಕೆ ಏರಿಕೆಯಾಗಿದೆ.












Click it and Unblock the Notifications