ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಮೆಡ್‌-ಕೆ ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

|
Google Oneindia Kannada News

ಬೆಂಗಳೂರು, ಆಗಸ್ಟ್ 13 : ಕಾಮೆಡ್‌-ಕೆ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಪರೀಕ್ಷೆ ಮುಂದೂಡಲು ನ್ಯಾಯಾಲಯ ನಿರಾಕರಿಸಿದೆ.

Recommended Video

Corona vaccine ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ | Oneindia Kannada

ವಕೀಲ ಅಬ್ದುಲ್ ಮನ್ನಾನ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರಿಂದಾಗಿ ನಿಗದಿಯಂತೆ ಕಾಮೆಡ್-ಕೆ ಪರೀಕ್ಷೆ ಆಗಸ್ಟ್ 19ರಂದು ನಡೆಯಲಿದೆ.

ಸಿಇಟಿ ಪರೀಕ್ಷೆ ಬರೆಯಲು ಬಂದ ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ಬಂದ ಕೋವಿಡ್ ಸೋಂಕಿತ ವಿದ್ಯಾರ್ಥಿಗಳು

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಯಲಿರುವ ಕಾಮೆಡ್‌-ಕೆ ಪರೀಕ್ಷೆಗೆ ಸಾವಿರಾರು ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಇದರಿಂದಾಗಿ ಕೋವಿಡ್ ಸೋಂಕು ಹರಡಬಹುದು ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

Karnataka High Court Refuses To Postpone COMEDK Exam Scheduled On August 19

70 ರಿಂದ 80 ಸಾವಿರ ವಿದ್ಯಾರ್ಥಿಗಳು ಕಾಮೆಡ್-ಕೆ ಪರೀಕ್ಷೆ ಬರೆಯುತ್ತಾರೆ. ಈ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವ ಸಾಧ್ಯತೆ ಇದೆ. ಆದ್ದರಿಂದ, ಪರೀಕ್ಷೆಯನ್ನು ಮುಂದೂಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಸಿಇಟಿ ಪರೀಕ್ಷೆ ನಿರಾತಂಕ: ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿದ ಡಿಸಿಎಂಸಿಇಟಿ ಪರೀಕ್ಷೆ ನಿರಾತಂಕ: ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿದ ಡಿಸಿಎಂ

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ದ್ವಿತೀಯ ಪಿಯುಸಿ ಒಂದು ವಿಷಯದ ಪರೀಕ್ಷೆ ನಡೆಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು.

ಕರ್ನಾಟಕದಲ್ಲಿ ಬುಧವಾರ 7 ಸಾವಿರಕ್ಕೂ ಅಧಿಕ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,96,494ಕ್ಕೆ ಏರಿಕೆಯಾಗಿದೆ.

English summary
High Court of Karnataka refused to postpone the COMEDK exam. Exam scheduled on August 19, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X