ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು, ನವೆಂಬರ್ 7: ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಕರ್ನಾಟಕ ಸರ್ಕಾರ ಇದೇ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಹಮ್ಮಿಕೊಂಡಿದೆ.
ಕೊಡಗು ನಿವಾಸಿ ಪವನ್ ಚಂದ್ರ ಎಂಬವರು ಸೋಮವಾರ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಪಿಐಎಲ್ ನಲ್ಲಿ ಪವನ್ ಚಂದ್ರ, "ಒಂದು ಭಾಗದ ಜನರ ಭಾವನೆಗೆ ಧಕ್ಕೆಯಾಗುವಾಗ ಟಿಪ್ಪು ಜಯಂತಿ ಆಚರಿಸುವ ಜರೂರತ್ತು ಏನು?" ಎಂದು ಪ್ರಶ್ನಿಸಿದ್ದರು. ಇದರಿಂದ ಕೋಮು ಭಾವನೆಗೂ ಧಕ್ಕೆಯಾಗುತ್ತದೆ ಎಂದು ಅರ್ಜಿಯಲ್ಲಿ ಅವರು ಹೇಳಿದ್ದರು.
ಈ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಯಾಕೆ ಕಾರ್ಯಾಂಗದ ನಿರ್ಧಾರಗಳಲ್ಲಿ ಮೂಗು ತೂರಿಸುತ್ತೀರಿ ಎಂದು ಅರ್ಜಿದಾರರನ್ನು ಪ್ರಶ್ನಿಸಿತ್ತು ನಂತರ ಮುಂದಿನ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.
ಇದೀಗ ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ನಿರಾಕರಿಸಿದೆ.












Click it and Unblock the Notifications