ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

By Sachhidananda Acharya
|
Google Oneindia Kannada News

ಬೆಂಗಳೂರು, ನವೆಂಬರ್ 7: ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಕರ್ನಾಟಕ ಸರ್ಕಾರ ಇದೇ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಹಮ್ಮಿಕೊಂಡಿದೆ.

ಟಿಪ್ಪು ಜಯಂತಿ ವಿರೋಧಿಸಿ ಒನಕೆ ಹಿಡಿದು ವಿನೂತನ ಪ್ರತಿಭಟನೆಟಿಪ್ಪು ಜಯಂತಿ ವಿರೋಧಿಸಿ ಒನಕೆ ಹಿಡಿದು ವಿನೂತನ ಪ್ರತಿಭಟನೆ

ಕೊಡಗು ನಿವಾಸಿ ಪವನ್ ಚಂದ್ರ ಎಂಬವರು ಸೋಮವಾರ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

Karnataka High Court refuses to stay Tipu Jayanti celebrations

ಪಿಐಎಲ್ ನಲ್ಲಿ ಪವನ್ ಚಂದ್ರ, "ಒಂದು ಭಾಗದ ಜನರ ಭಾವನೆಗೆ ಧಕ್ಕೆಯಾಗುವಾಗ ಟಿಪ್ಪು ಜಯಂತಿ ಆಚರಿಸುವ ಜರೂರತ್ತು ಏನು?" ಎಂದು ಪ್ರಶ್ನಿಸಿದ್ದರು. ಇದರಿಂದ ಕೋಮು ಭಾವನೆಗೂ ಧಕ್ಕೆಯಾಗುತ್ತದೆ ಎಂದು ಅರ್ಜಿಯಲ್ಲಿ ಅವರು ಹೇಳಿದ್ದರು.

ಟಿಪ್ಪು ಜಯಂತಿ ಆಚರಣೆ ವಿವಾದ : ಬೆಳಗಾವಿಯಲ್ಲಿ ಕಲ್ಲು ತೂರಾಟಟಿಪ್ಪು ಜಯಂತಿ ಆಚರಣೆ ವಿವಾದ : ಬೆಳಗಾವಿಯಲ್ಲಿ ಕಲ್ಲು ತೂರಾಟ

ಈ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಯಾಕೆ ಕಾರ್ಯಾಂಗದ ನಿರ್ಧಾರಗಳಲ್ಲಿ ಮೂಗು ತೂರಿಸುತ್ತೀರಿ ಎಂದು ಅರ್ಜಿದಾರರನ್ನು ಪ್ರಶ್ನಿಸಿತ್ತು ನಂತರ ಮುಂದಿನ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಇದೀಗ ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ನಿರಾಕರಿಸಿದೆ.

English summary
The Karnataka High Court has refused to stay the celebration of Tippu Jayanti.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X