Get Updates
Get notified of breaking news, exclusive insights, and must-see stories!

ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೋರ್ಟ್‌ನಿಂದ ರಿಲೀಫ್‌; ಯಾವ ಕೇಸ್‌?

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ ಸದ್ಯ ಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದೆ. ಈ ಪ್ರಕರಣದಲ್ಲಿ ತಮ್ಮನ್ನು ಬಂಧಿಸಬಾರದು ಎಂದು ಬಿ.ಎಸ್‌.ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್‌ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಲಾಗಿದ್ದ ಮಧ್ಯಂತರ ಆದೇಶವನ್ನು ಮತ್ತೆ ಮುಂದುವರಿಸಿದೆ.

ಇದೇ ಪ್ರಕರಣದಲ್ಲಿ ಯಡಿಯೂರಪ್ಪ ಅವರ ವಿರುದ್ಧ ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿತ್ತು. ಬಳಿಕ ಈ ಪ್ರಕರಣ ರದ್ದು ಮಾಡುವಂತೆ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ಹೊರಡಿಸಿತ್ತು.

Karnataka High Court Relief To Former CM BS Yediyurappa In POCSO Case

ಏನಿದು ಪ್ರಕರಣ?: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಅಪ್ರಾಪ್ತೆಯಾಗಿರುವ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಇನ್ನು ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಕೂಡ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.

ಇನ್ನು ಮಹಿಳೆ ನೀಡಿದ ದೂರಿನ ಮೇರೆಗೆ ಸದಾಶಿವನಗರ ಪೊಲೀಸ್‌ ಸ್ಟೇಷನ್‌ನಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರವು ತನಿಖೆ ನಡೆಸುವಂತೆ ಸಿಐಡಿಗೆ ಸೂಚಿಸಿತ್ತು.

ತನಿಖೆ ಚುರುಕುಗೊಳಿಸಿದ್ದ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ಸಿಐಡಿ ಅಧಿಕಾರಿಗಳ ಮುಂದೆ ನೀಡಿದ್ದರು. ಬಳಿಕ ಈ ಕೇಸ್‌ ರದ್ದು ಮಾಡುವಂತೆ ಹಾಗೂ ಜಾಮೀನು ಮಂಜೂರು ಮಾಡುವಂತೆ ಯಡಿಯೂರಪ್ಪ ಅವರು ಕೋರ್ಟ್‌ ಮೊರೆ ಹೋಗಿದ್ದರು. ಈ ಸಂಬಂಧ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ, ಹೈಕೋರ್ಟ್ ಆದೇಶವನ್ನು ಆಗಸ್ಟ್‌ 30ರವರೆಗೆ (ಇಂದು) ವಿಸ್ತರಣೆ ಮಾಡಿತ್ತು.

Karnataka High Court Relief To Former CM BS Yediyurappa In POCSO Case

ಇದೇ ಕೇಸ್‌ ಸಂಬಂಧ ಜೂನ್​ನಲ್ಲಿ ಯಡಿಯೂರಪ್ಪ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಕೆ ಮಾಡಲಾಗಿತ್ತು. ಅದರಲ್ಲಿ ಯಡಿಯೂರಪ್ಪ ಅವರು ಅಪ್ರಾಪ್ತ ಬಾಲಕಿಯನ್ನು ಕೋಣೆಗೆ ಕರೆದೊಯ್ದು, ಅನುಚಿತವಾಗಿ ವರ್ತಿಸಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಬಾಲಕಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಹಣ ನೀಡಿ ವಾಪಸ್‌ ಕಳುಹಿಸಲಾಗಿದೆ ಎಂಬ ಆರೋಪಗಳನ್ನು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಇದೇ ಕೇಸ್‌ ವಿಚಾರಣೆ ವೇಳೆ ಯಡಿಯೂರಪ್ಪ ಪರ ವಕೀಲರು ಈ ಪ್ರಕರಣ ಮುಂದಿಟ್ಟುಕೊಂಡು ರಾಜಕೀಯ ನಾಯಕರು ಬಿಎಸ್‌ವೈ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ವಾದ-ಪ್ರತಿವಾದಗಳನ್ನು ಆಲಿಸಿ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಅಲ್ಲದೆ ಬಿಎಸ್​ವೈ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೇ ಮುಂದುವರಿಸಿದೆ.

ಇನ್ನು ತಮ್ಮ ಮಗಳ ಮೇಲೆ ಯಡಿಯೂರಪ್ಪ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದ ಮಹಿಳೆಯು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಸದ್ಯಕ್ಕೆ ಈ ಪ್ರಕರಣದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ತುಸು ನಿರಾಳ ಸಿಕ್ಕಂತಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+