ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಲ್. ಮಂಜುನಾಥ್ ನಿಧನ

ಬೆಂಗಳೂರು, ಜನವರಿ 23; ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮತ್ತು ಹಾಲಿ ಕರ್ನಾಟಕ ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ಎಲ್. ಮಂಜುನಾಥ್ ವಿಧಿವಶರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದರು.

68 ವರ್ಷದ ಕೆ. ಎಲ್. ಮಂಜುನಾಥ್ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ನಿವಾಸದಲ್ಲಿ ಶನಿವಾರ ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಣಿಗಲ್ ರಸ್ತೆಯ ಕೆಂಪಲಿಂಗನಹಳ್ಳಿಯ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಬಸವರಾಜ ಬೊಮ್ಮಾಯಿ ಸಂತಾಪ ಸಂದೇಶದಲ್ಲಿ ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Karnataka High Court Retired Judge Justice KL Manjunath No More

1974ರ ಸೆಪ್ಟೆಂಬರ್ 13ರಂದು ವಕೀಲಿಕೆ ಆರಂಭಿಸಿದ್ದ ಮಂಜುನಾಥ್ 2000ದ ಡಿಸೆಂಬರ್ 11ರಂದು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2015ರ ಏಪ್ರಿಲ್ 20ರಂದು ನಿವೃತ್ತರಾದರು. ವಕೀಲರಾಗಿ, ನ್ಯಾಯಮೂರ್ತಿಯಾಗಿ ಅಪಾರ ಜನಪ್ರಿಯಯತೆಗಳಿಸಿದ್ದ ಮಂಜುನಾಥ್ ಹೈಕೋರ್ಟ್‌ನಲ್ಲಿ ವಕೀಲರ ಗುಮಾಸ್ತರ ಸಂಘದ ಸ್ಥಾಪನೆಗೆ ಕಾರಣರಾಗಿದ್ದರು.

Karnataka High Court Retired Judge Justice KL Manjunath No More

ಅಂತಿಮ ದರ್ಶನ ಪಡೆದ ಸಿಎಂ; ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯೂರ್ತಿ ಕೆ. ಎಲ್. ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತಿಮ‌ ನಮನ ಸಲ್ಲಿಸಿದರು. ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಸಲ್ಲಿಸಿದ ಸೇವೆಯನ್ನು ಸಿಎಂ ಸ್ಮರಿಸಿದರು.

ಡಿ. ಕೆ. ಶಿವಕುಮಾರ್ ಸಂತಾಪ; ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ನದಿ ನೀರು ಮತ್ತು ಗಡಿ ರಕ್ಷಣೆ ಆಯೋಗದ ಅಧ್ಯಕ್ಷರಾಗಿದ್ದ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾನೂನಿನ ಚೌಕಟ್ಟಿನ ಒಳಗೇ ಮಾನವೀಯ ಮೌಲ್ಯ ಹಾಗೂ ಜನಪರ ಕಾಳಜಿ ಮೆರೆದಿದ್ದ ಮಂಜುನಾಥ್ ಅವರು ನ್ಯಾಯಾಂಗ ವ್ಯವಸ್ಥೆಯ ಘನತೆ, ಗೌರವಗಳನ್ನು ಎತ್ತಿ ಹಿಡಿದಿದ್ದರು. ಅವರ ನಿಧನ ಬಹಳ ನೋವು ತಂದಿದೆ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೈತ್ರಿ ಸರಕಾರದ ಅವಧಿಯಲ್ಲಿ ತಾವು ಜಲಸಂಪನ್ಮೂಲ ಸಚಿವರಾಗಿದ್ದಾಗ ರಚಿಸಿದ ಕರ್ನಾಟಕ ರಾಜ್ಯ ನದಿ ನೀರು ಮತ್ತು ಗಡಿ ರಕ್ಷಣೆ ಆಯೋಗಕ್ಕೆ ನ್ಯಾಯಮೂರ್ತಿ ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಈ ಆಯೋಗವು ಸರಕಾರಕ್ಕೆ ಅನೇಕ ಉಪಯುಕ್ತ ಸಲಹೆ ಮತ್ತು ಶಿಫಾರಸ್ಸುಗಳನ್ನು ನೀಡಿದೆ ಎಂದು ಶಿವಕುಮಾರ್ ಸ್ಮರಿಸಿಕೊಂಡರು.

ಮೂಲತಃ ಚನ್ನರಾಯಪಟ್ಟಣದ ಕಾಂತರಾಜಪುರದವರಾದ ನಿವೃತ್ತ ನ್ಯಾಯಮೂರ್ತಿ ಮಂಜುನಾಥ್ ವಕೀಲಿ ವೃತ್ತಿ ಅವಧಿಯಲ್ಲಿ ಬಡವರಿಗೆ, ದೀನ, ದಲಿತರಿಗೆ ಉಚಿತ ಕಾನೂನು ಸೇವೆ ಒದಗಿಸಿದ್ದರು. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಕನ್ನಡ ಭಾಷೆ, ನೆಲ, ಜಲದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿಯೂ ಕಾನೂನು ಹೋರಾಟ ನಡೆಸಿದ್ದರು. ಅವರು ನ್ಯಾಯಮೂರ್ತಿ ಆಗಿದ್ದ ಅವಧಿಯಲ್ಲಿ ಹಲವು ಅತ್ಯಮೂಲ್ಯ ತೀರ್ಪುಗಳನ್ನು ನೀಡಿದ್ದರು ಎಂದು ಶಿವಕುಮಾರ್ ಶ್ಲಾಘಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಮಂಜುನಾಥ್ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬಂಧುಗಳು, ಅಭಿಮಾನಿಗಳಿಗೆ ನೀಡುವಂತೆ ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+