ಎರಡನೇ ಪತ್ನಿಯ ಮಕ್ಕಳು ಕೂಡ ತಂದೆಯ ನೌಕರಿ ಪಡೆಯಲು ಅರ್ಹರು: ಹೈಕೋರ್ಟ್
ಬೆಂಗಳೂರು, ಜುಲೈ 15: ಎರಡನೇ ಪತ್ನಿ ಮಕ್ಕಳು ಕೂಡ ಅನುಕಂಪದ ಆಧಾರದಲ್ಲಿ ತಂದೆಯ ನೌಕರಿ ಪಡೆಯಲು ಅರ್ಹರು ಎಂದು ಹೈಕೋರ್ಟ್ ಹೇಳಿದೆ.
ಪೋಷಕರ ಸಂಬಂಧ ಅನಧಿಕೃತ ಇರಬಹುದು. ಆದರೆ, ಅವರ ಮಕ್ಕಳು ಅನಧಿಕೃತ ಅಲ್ಲ, ಹೀಗಾಗಿ ಎರಡನೆಯ ಪತ್ನಿಯ ಮಕ್ಕಳಿಗೂ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅಧಿಕಾರವಿರುತ್ತದೆ ಎಂದು ಹೇಳಲಾಗಿದೆ.
ಮಕ್ಕಳೆಲ್ಲರೂ ಸಮಾನರು ಎಂಬ ಕಾನೂನನ್ನು ಜಾರಿಗೆ ತರಬಹುದಾಗಿದೆ. ವಿವಾಹೇತರ ಸಂಬಂಧದಿಂದ ಜನಿಸಿದ ಮಕ್ಕಳಿಗೂ ನ್ಯಾಯ ದೊರಕಿಸಲು ಸಂಸತ್ ಮುಂದಾಗಬೇಕಿದೆ' ಎಂದು ಪೀಠ ಹೇಳಿತು. ಅರ್ಜಿದಾರರ ಮನವಿಯನ್ನು ಕಾನೂನಿನ ಅಡಿಯಲ್ಲಿ ಪರಿಗಣಿಸಲು ಕೆಪಿಟಿಸಿಎಲ್‌ಗೆ ಪೀಠ ನಿರ್ದೇಶನ ನೀಡಿತು.

ಎರಡನೇ ಪತ್ನಿಯ ಮಕ್ಕಳು ಅನುಕಂಪದ ನೌಕರಿ ಪಡೆಯಲು ಅರ್ಹರಲ್ಲ ಎಂದು 2011ರ ಕೆಪಿಟಿಸಿಎಲ್(ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ) ಸುತ್ತೋಲೆ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯಪಟ್ಟಿದೆ.
ಮೊದಲ ಪತ್ನಿ ಇದ್ದಾಗಲೇ ಎರಡನೇ ವಿವಾಹವಾದರೆ ಆ ಪತ್ನಿ ಅಧಿಕೃತ ಅಲ್ಲ. ತಾಯಿ ಅನಧಿಕೃತ ಆಗಿರುವ ಕಾರಣ ಮಗನೂ ಅನಧಿಕೃತ ಎಂದು ವಾದಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿ ಮತ್ತು ಮರು ಪರಿಶೀಲನಾ ಅರ್ಜಿಯನ್ನು ಏಕ ಸದಸ್ಯ ಪೀಠ ತಿರಸ್ಕರಿಸಿತ್ತು. ತಂದೆ ಮತ್ತು ತಾಯಿ ಇಲ್ಲದೆ ಮಗು ಜನಿಸಲು ಸಾಧ್ಯವಿಲ್ಲ. ಜನ್ಮ ತಾಳುವ ಪ್ರಕ್ರಿಯೆಯಲ್ಲಿ ಮಗುವಿನ ಪಾತ್ರ ಏನೂ ಇರುವುದಿಲ್ಲ.
Recommended Video
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಡವೆಕೆರೆ ನಿವಾಸಿ ಸಂತೋಷ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ನಡೆಸಿತು. ಲೈನ್‌ಮನ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು 2014ರ ಜೂನ್‌ನಲ್ಲಿ ನಿಧನರಾದರು. ಅನುಕಂಪದ ಆಧಾರದಲ್ಲಿ ನೌಕರಿ ಕೋರಿ ಎರಡನೇ ಪತ್ನಿ ಮಗ ಸಲ್ಲಿಸಿದ್ದ ಅರ್ಜಿಯನ್ನು ಕೆಪಿಟಿಸಿಎಲ್ ತಿರಸ್ಕರಿಸಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications