ಸಿಎಂ ಸಿದ್ದರಾಮಯ್ಯ ವಿರುದ್ದದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಸೆ 9: ಭ್ರಷ್ಟಾಚಾರದ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅಂದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಸಂಬಂಧ ಆಗ ವಿರೋಧಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಸಂಸದರು-ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ನಿಗದಿತವಾಗಿರುವ ಹೈಕೋರ್ಟ್ ವಿಶೇಷ ನ್ಯಾಾಯಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಹೈಕೋರ್ಟ್ ಧಾರವಾಡ ಪೀಠದಲ್ಲಿ ಶುಕ್ರವಾರ ವಿಚಾರಣೆ ನಡೆಸಿದರು.

Karnataka High Court stays Case Against Chief Minister Siddaramaiah

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆವರೆಗೆ ಪ್ರಕರಣ್ಕಕೆ ತಡೆ ನೀಡಿತು. ಅಲ್ಲದೇ ಸರ್ಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಕೆ.ಎಸ್. ಈಶ್ವರಪ್ಪ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ 2022ರ ಏಪ್ರಿಲ್ 14ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದರ ಭಾಗವಾಗಿ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಯವರ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆ ನಡೆಸಲಾಗಿತ್ತು.

ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ, ಕಾನೂನು-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಪ್ರತಿಭಟನಾಕಾರರ ವಿರುದ್ದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು.

ತನಿಖೆ ನಡೆಸಿದ್ದ ಪೊಲೀಸರು 2023ರ ಫೆ.12ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಅದರಲ್ಲಿ ಸಿದ್ದರಾಮಯ್ಯನವರನ್ನು ಪ್ರಮುಖ ಆರೋಪಿಯನ್ನಾಾಗಿ ಮಾಡಲಾಗಿತ್ತು. ಪ್ರಕರಣವನ್ನು ಜೂನ್ 13ರಂದು 42ನೇ ಎಸಿಎಂಎಂ ನ್ಯಾಾಯಾಲಯ ವಿಚಾರಣೆಗೆ ಅಂಗೀಕರಿಸಿತ್ತು. ಪ್ರಕರಣ, ಎಫ್‌ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಏನಿದು ಪ್ರಕರಣ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಅಂದಿನ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಕಾರಣ ಎಂದು ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ 2022ರ ಏಪ್ರಿಲ್ 14ರಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ಇದರ ಭಾಗವಾಗಿ ರೇಸ್‌ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆ ನಡೆಸಲಾಗಿತ್ತು.

ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ, ಕಾನೂನು-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಪ್ರತಿಭಟನಾಕಾರರ ವಿರುದ್ದ ಹೈಗ್ರೌಂಡ್ಸ್‌ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು 2023ರ ಫೆಬ್ರವರಿ 12ರಂದು ಆರೋಪ ಪಟ್ಟಿ ಸಲ್ಲಿಸಿ, ಸಿದ್ದರಾಮಯ್ಯನವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+