Menstrual Leave: ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಕರ್ನಾಟಕದಲ್ಲಿ ಮಹಿಳಾ ನೌಕರರಿಗೆ ಋತುಚಕ್ರ ಸಂದರ್ಭದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಮಹಿಳಾ ಉದ್ಯೋಗಿಗಳು ಸ್ವಾಗತಿಸಿದ್ದರು. ಅಲ್ಲದೆ ಬಹುತೇಕ ಸಂಸ್ಥೆಗಳಲ್ಲಿ ಈಗಾಗಲೇ ತಿಂಗಳಿಗೆ ಒಂದು ದಿನ ಮುಟ್ಟಿನ ರಜೆ ನೀಡುವ ನಿಯಮ ಜಾರಿಯೂ ಆಗಿದೆ. ಆದರೆ ಸರ್ಕಾರದ ಈ ಆದೇಶವನ್ನು ವಿರೋಧಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್, ಮುಟ್ಟಿನ ರಜೆ ನೀಡಬೇಕು ಎನ್ನುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.
ಮಹಿಳೆಯರಿಗೆ ರಜೆ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ವಿವರವಾದ ಪ್ರತಿಕ್ರಿಯೆಯನ್ನು ನ್ಯಾಯಾಲಯ ಕೋರಿದೆ. ಚಳಿಗಾಲದ ರಜೆಯ ನಂತರ ಇದರ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಮಹಿಳಾ ಉದ್ಯೋಗಿಗಳ ಋತುಚಕ್ರ ರಜೆಗೆ ವಿರೋಧ ವ್ಯಕ್ತವಾದ ಹಿನ್ನೆಲೆ ಹೈಕೋರ್ಟ್ನಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಯಾರಿಂದ ವಿರೋಧ?
ಬೆಂಗಳೂರು ಹೋಟೆಲ್ಗಳ ಸಂಘವು ಸರ್ಕಾರದ ಇತ್ತೀಚಿನ ಅಧಿಸೂಚನೆಯನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಸರ್ಕಾರಕ್ಕೆ ಇಂತಹ ನಿಯಮವನ್ನು ವಿಧಿಸಲು ಕಾನೂನು ಅಧಿಕಾರವಿಲ್ಲ. ಇದು ಉದ್ಯೋಗದಾತರ ಮೇಲೆ ಅನ್ಯಾಯದ ಹೊರೆಯನ್ನು ಹೇರುತ್ತದೆ ಎಂದು ವಾದಿಸಿಸಿದ್ದರು. ಹೀಗಾಗಿ ಕರ್ನಾಟಕ ಹೈಕೋರ್ಟ್ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ಮಾಸಿಕ ಮುಟ್ಟಿನ ರಜೆ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಮಹಿಳಾ ಉದ್ಯೋಗಿಗಳಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿತ್ತು. ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದ ರಜೆಯಂತೆ ವರ್ಷಕ್ಕೆ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿತ್ತು. ಈ ಆದೇಶ ಹೊರಬಿದ್ದ ಕೆಲವೇ ದಿನಗಳಲ್ಲಿ ವಿಘ್ನ ಎದುರಾಗಿದೆ.
ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರ ರಜೆ ಸೌಲಭ್ಯ ಕಲ್ಪಿಸುವ ಕುರಿತು ಅಧಿಕೃತ ಆದೇಶ ಪ್ರಕಟವಾಗಿತ್ತು. ಅದರಂತೆ ಖಾಸಗಿ, ಗುತ್ತಿಗೆ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ದುಡಿಯುವವರಿಗೂ ಈ ರಜೆ ಅನ್ವಯವಾಗಲಿದೆ. ನಾಡಿನ ಮಹಿಳಾ ಉದ್ಯೋಗಿಗಳ ಆರೋಗ್ಯ ಕಾಪಾಡಲು ಹಾಗೂ ಅವರ ಮನೋಸ್ಥೈರ್ಯ ಹೆಚ್ಚಿಸಲು ಋತುಚಕ್ರ ರಜೆ ಅನುಕೂಲವಾಗಲಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು.
ನಾಡಿನ ಲಕ್ಷಾಂತರ ಹೆಣ್ಣುಮಕ್ಕಳು, ಮಹಿಳೆಯರಿಗೆ ಋತುಚಕ್ರದ ಸಂದರ್ಭದಲ್ಲಿ ಕೆಲಸದ ಸ್ಥಳದಲ್ಲಿ ಎದುರಾಗುವ ಸವಾಲುಗಳು ಹಾಗೂ ಅವರು ಅನುಭವಿಸುವ ಮಾನಸಿಕ ಹಾಗೂ ದೈಹಿಕ ನೋವು, ಸಂಕಟವನ್ನು ಅರಿತು ಅವರಿಗೆ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡುವ ತೀರ್ಮಾನವನ್ನು ನಮ್ಮ ಸರ್ಕಾರ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications