ನಾಳೆಯೇ ರಾಜೀನಾಮೆ ಕೊಡ್ತೀನಿ ಎಂದ ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಜಿ.ಪರಮೇಶ್ವರ್ ಅವರು ಶಾಕಿಂಗ್ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ದಲಿತ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಪರಮೇಶ್ವರ್ ಅವರು ದಿಢೀರನೆ ರಾಜೀನಾಮೆಯ ಸುಳಿವು ಕೊಟ್ಟಿದ್ದಾರೆ. ಇನ್ನೇನು ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ಸಿಗಲಿದೆ ಎಂಬ ಬೆಳವಣಿಗೆ ನಡುವೆಯೇ ರಾಜೀನಾಮೆ ಬಗ್ಗೆ ಮಾತನಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ಕಾಂಗ್ರೆಸ್ ವಲಯದಲ್ಲಿ ಪರಮೇಶ್ವರ್ ಅವರ ರಾಜೀನಾಮೆ ವಿಚಾರವಾಗಿ ಚರ್ಚೆಗಳು ಜೋರಾಗಿವೆ.
ಇತ್ತೀಚೆಗೆ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಬಂದಿದ್ದ ಪರಮೇಶ್ವರ್ ಅವರು ರಾಜ್ಯದಲ್ಲಿ ದಲಿತ ನಾಯಕರ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಅಲ್ಲದೆ ಕಾಂಗ್ರೆಸ್‌ನಲ್ಲಿ ದಲಿತ ನಾಯಕರನ್ನೇ ಮುಖ್ಯಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬಗ್ಗೆಯೂ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತಿದೆ. ಹಾಗಾಗಿ ಮುಂದೆ ಕಾಂಗ್ರೆಸ್‌ನಲ್ಲಿ ದಲಿತ ನಾಯಕರ ಭವಿಷ್ಯಕ್ಕೆ ಅಡಿಪಾಯ ಹಾಕುವ ಬೆಳವಣಿಗೆಗಳ ನಡುವೆ ಪರಮೇಶ್ವರ್ ಅವರು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ತುಮಕೂರಿನ ಕೊರಟಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪರಮೇಶ್ವರ್ ಅವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಅಲ್ಲಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ದಿಢೀರನೆ ನಾನು ರಾಜೀನಾಮೆ ಕೊಡುತ್ತೇನೆ ಎನ್ನುವ ಮೂಲಕ ಒಂದು ಕ್ಷಣ ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ ಹೋಂ ಮಿನಿಸ್ಟರ್. ಕಾರ್ಯಕರ್ತರಿಗೆ ಸರಿಯಾಗಿ ಸ್ಪಂದಿಸಲು ಆಗುತ್ತಿಲ್ಲ ಎಂಬ ಬೇಸರದಲ್ಲಿ ಪರಮೇಶ್ವರ್ ಅವರು ರಾಜೀನಾಮೆ ಕೊಡುವ ಮಾತನ್ನಾಡಿದ್ದಾರೆ.
"ಸ್ಥಳೀಯ ಕಾರ್ಯಕರ್ತರಿಗೆ ಸ್ಪಂದಿಸಲು ಆಗುತ್ತಿಲ್ಲ. ಕ್ಷೇತ್ರದ ಕಾರ್ಯಕರ್ತರ ಜೊತೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ನಿಮಗೆ ಸ್ಪಂದಿಸದೇ ಇರುವುದಕ್ಕಾಗಿ ಕ್ಷಮಿಸಿ. ನೀವು ಹೇಳಿದರೆ ನಾನು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ" ಎಂದು ಪರಮೇಶ್ವರ್ ಗಾಬರಿ ಹುಟ್ಟಿಸಿದ್ದಾರೆ. ಪರಮೇಶ್ವರ್ ಅವರು ರಾಜೀನಾಮೆ ಬಗ್ಗೆ ಹೇಳಿದ ತಕ್ಷಣ ಅಲ್ಲಿದ್ದ ಕಾರ್ಯಕರ್ತರೆಲ್ಲ ಆತಂಕಕ್ಕೆ ಒಳಗಾಗಿದ್ದಾರೆ. ಯಾವ ಕಾರಣಕ್ಕೂ ನೀವು ರಾಜೀನಾಮೆ ಕೊಡಬೇಡಿ. ನೀವು ಮುಖ್ಯಮಂತ್ರಿ ಆಗಬೇಕು ಎಂದು ಘೋಷಣೆ ಕೂಗಿದ್ದಾರೆ.
ನಾನು ನಿಮ್ಮ ಕೈಗೆ ಸಮಯಕ್ಕೆ ಸರಿಯಾಗಿ ಸಿಗುವುದಿಲ್ಲ ಎಂದು ನಿಮಗೆಲ್ಲ ನಿರಾಸೆಯಾಗಿರಬಹುದು. ಕ್ಷೇತ್ರದ ಪಂಚಾಯಿತಿಗೆ ಬರುತ್ತಿಲ್ಲ, ಪರಮೇಶ್ವರ್ ಅವರು ನಮ್ಮನ್ನು ಸರಿಯಾಗಿ ಮಾತನಾಡಿಸುತ್ತಿಲ್ಲ ಎಂದೆಲ್ಲ ಅನಿಸಿರುತ್ತೆ. ಆದರೆ, ಟೈಮ್ ಅನ್ನೋದು ನನ್ನ ಕೈಯಲ್ಲಿ ಇಲ್ಲ. ಹಾಗಾಗಿ ನೀವೆಲ್ಲ ಮನಸ್ಸು ಮಾಡಿ ಹೇಳಿದರೆ, ನಾಳೆಯೇ ರಾಜೀನಾಮೆ ಕೊಟ್ಟು ನಿಮ್ಮ ಜೊತೆ ಇರುತ್ತೇನೆ ಎಂದು ಜಿ.ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಆಗ ಅಲ್ಲಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಯಾವ ಕಾರಣಕ್ಕೂ ನೀವು ರಾಜೀನಾಮೆ ಕೊಡಬಾರದು, ನೀವು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಆದರೆ, ಎಷ್ಟೆಲ್ಲ ಬೇಸರವಿದ್ದರೂ ಪರಮೇಶ್ವರ್ ಅವರು ಈ ರೀತಿ ರಾಜೀನಾಮೆಯ ಮಾತನ್ನಾಡಿರಲಿಲ್ಲ. ಅದರಲ್ಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಯಲ್ಲಿರುವಾಗಲೇ ರಾಜೀನಾಮೆ ಕೊಡ್ತೀನಿ ಎನ್ನುವ ಮೂಲಕ ಅವರು ಚರ್ಚೆ ಹುಟ್ಟುಹಾಕಿದ್ದಾರೆ.
ಪರಮೇಶ್ವರ್ ಅವರು ರಾಜೀನಾಮೆ ಬಗ್ಗೆ ನೀಡಿರುವ ಹೇಳಿಕೆ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸ್ಪಷ್ಟನೆಯೂ ನೀಡಿರುವ ಅವರು ಕೊರಟಗೆರೆಯಲ್ಲಿ ಕ್ಷೇತ್ರದ ಕಾರ್ಯಕರ್ತರೊಂದಿಗೆ ಮಾತನಾಡುವಾಗ ಅವರ ಮನಸ್ಸಿನಲ್ಲಿದ್ದ ವಿಚಾರವಾಗಿ ನಾನು ಆ ರೀತಿ ಮಾತನಾಡಿದೆ. ಅದನ್ನು ಇಷ್ಟು ದೊಡ್ಡದು ಮಾಡುವ ಅಗತ್ಯವಿಲ್ಲ. ಅದು ಸಂಚಲನವಾಗುವ ವಿಷಯ ಕೂಡ ಅಲ್ಲ. ನನ್ನ ಗೆಲ್ಲಿಸಿರುವ ನನ್ನ ಕ್ಷೇತ್ರದ ಜನರ ಅಪೇಕ್ಷೆಯಂತೆ ನಾನು ಮಾತನಾಡಿದ್ದೇನೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications