ಕಳ್ಳರಿಗೆ ಮಹಿಳೆಯರೇ ಪ್ರೇರೇಪಣೆ: ಗೃಹ ಸಚಿವ

Karnataka Home Minister George statement in Assembly
ಬೆಳಗಾಗಿ, ಡಿ 5: ಬಂಗಾರದ ಬೆಲೆಗಳು ಗಗನಕ್ಕೇರುತ್ತಿವೆ. ಮಹಿಳೆಯರು ಹೆಚ್ಚು ಆಭರಣಗಳನ್ನು ಧರಿಸಿಕೊಂಡು ಹೋಗುತ್ತಿರುವುದರಿಂದ ಸರಗಳ್ಳರಿಗೆ ಅವರೇ ಪ್ರೇರೇಪಣೆ ನೀಡಿದಂತಾಗುತ್ತದೆ ಎಂದು ಗೃಹ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.

ಮಹಿಳೆಯರು ಚಿನ್ನಾಭರಣಗಳನ್ನು ಧರಿಸಬಾರದೆನ್ನುವುದು ನಮ್ಮ ನಿಲುವಲ್ಲ. ಅವಶ್ಯಕತೆ ಇದ್ದಲ್ಲಿ ಧರಿಸಲಿ, ಕಡಿಮೆ ಆಭರಣಗಳನ್ನು ಧರಿಸಿದರೆ ಸರಗಳ್ಳತನ ಕಮ್ಮಿಯಾಗುತ್ತದೆ. ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಬೇಕೆಂದು ಸಚಿವರು ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಗುರುವಾರ (ಡಿ 5) ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡುತ್ತಿದ್ದ ಜಾರ್ಜ್, ರಾಜ್ಯದ ಪ್ರಮುಖ ನಗರಗಳಲ್ಲಿ ಸರಗಳ್ಳತನದ ಕೇಸುಗಳು ಹೆಚ್ಚಾಗುತ್ತಿವೆ.

ಚಿನ್ನಾಭರಣಕ್ಕಾಗಿ ಮಹಿಳೆಯರ ಮೇಲೆ ಹಲ್ಲೆ ನಡೆಸಿ ಒಡವೆಗಳನ್ನು ದೋಚಲಾಗುತ್ತದೆ. ಗೃಹ ಸಚಿವಾಲಯ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಜಾರ್ಜ್ ಹೇಳಿದ್ದಾರೆ.

ಸರಕಾರ ಇದಕ್ಕೆ ಕಡಿವಾಣ ಹಾಕಲು ಬೆಳಗಿನ ಜಾವ ಮತ್ತು ಸಂಜೆಯ ಹೊತ್ತಿನಲ್ಲಿ ನಾಕಾಬಂದಿ ಜೊತೆ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲಾಗಿದೆ.

ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದನ್ನು ಒಪ್ಪಿಕೊಳ್ಳುತ್ತೇನೆ. ತುರ್ತಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಸಿಬ್ಬಂದಿಗಳ ಅವಶ್ಯಕತೆ ಇದ್ದುದ್ದರಿಂದ ಹೋಂ ಗಾರ್ಡ್ ಸೇವೆಯನ್ನು ಪಡೆಯಲಾಗಿದೆ ಎಂದು ಸಚಿವರು ಪ್ರಶ್ನೋತ್ತರ ವೇಳೆಯಲ್ಲಿ ಹೇಳಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ನೆನೆಗುದಿಗೆ ಬಿದ್ದಿತ್ತು.

8500 ಸಾವಿರ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಿದ್ದೇವೆ. ನೇಮಕಾತಿ ಪ್ರಕ್ರಿಯೆಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಗೃಹ ಸಚಿವ ಜಾರ್ಜ್ ಪರಿಷತ್ತಿನಲ್ಲಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+