IAS officers transfer: ರಾಜ್ಯದಲ್ಲಿ 6 ಹಿರಿಯ ಅಧಿಕಾರಿಗಳ ವರ್ಗಾವಣೆ, ಯಾರಿಗೆ ಯಾವ ಹುದ್ದೆ? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಆಡಳಿತ ಯಂತ್ರದಲ್ಲಿ ಪ್ರಮುಖ ಬದಲಾವಣೆಗಳು ಆರಂಭವಾಗಿವೆ. ಆಡಳಿತವನ್ನು ಮತ್ತಷ್ಟು ಚುರುಕುಗೊಳಿಸುವ ಮತ್ತು ಇಲಾಖೆಗಳ ಸಮನ್ವಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಬುಧವಾರ ಆರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹಾಗೂ ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಿ ಹೊಸದಾಗಿ ಅಧಿಕೃತ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದ ಪ್ರಕಾರ, ಸದ್ಯ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಅತ್ಯಂತ ಮಹತ್ವದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ. ಅದೇ ರೀತಿ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಅಂಜುಂ ಫರ್ವೇಜ್ ಅವರಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಸಮಕಾಲೀನ ಜವಾಬ್ದಾರಿಯನ್ನು ವಹಿಸಿಕೊಡಲಾಗಿದೆ.

Karnataka IAS Officers

ಇನ್ನುಳಿದಂತೆ, ವಸತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮೋಹನ್ ರಾಜ್ ಕೆ.ಪಿ. ಅವರನ್ನು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರಿಗೆ ವಸತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಉಸ್ತುವಾರಿಯನ್ನೂ ಮುಂದುವರಿಸಲಾಗಿದೆ. ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಸೆಲ್ವಮಣಿ ಆರ್. ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆ ಹಾಗೂ ಸ್ವಚ್ಛ ಭಾರತ್ ಮಿಷನ್ (ನಗರಾಭಿವೃದ್ಧಿ) ರಾಜ್ಯ ಮಿಷನ್ ನಿರ್ದೇಶಕರ ಹುದ್ದೆಗಳ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ.

ಇಷ್ಟು ದಿನಗಳ ಕಾಲ ಯಾವುದೇ ಹುದ್ದೆಯ ನಿಯೋಜನೆ ಇಲ್ಲದೆ ಹುದ್ದೆ ನಿರೀಕ್ಷೆಯಲ್ಲಿದ್ದ ಮಹೇಶ್ ಎಂ. ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಹಾಗೆಯೇ, ಸಹಕಾರ ಸಂಘಗಳ ನಿಬಂಧಕರಾಗಿರುವ ವೆಂಕಟೇಶ್ ಎಂ.ವಿ. ಅವರಿಗೆ ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.

ಮೇ 28ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ, ಜೂನ್ 3ರಂದು ಹೊಸ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು 13 ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಕೇವಲ ಕೆಲವೇ ದಿನಗಳಲ್ಲಿ ಈ ಉನ್ನತ ಮಟ್ಟದ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ನಡೆದಿದೆ.

ಸರ್ಕಾರದ ಹೊಸ ಆದ್ಯತೆಗಳು, ನೀತಿಗಳು ಮತ್ತು ಯೋಜನೆಗಳನ್ನು ತಳಮಟ್ಟಕ್ಕೆ ಪರಿಣಾಮಕಾರಿಯಾಗಿ ತಲುಪಿಸಲು ಪ್ರಮುಖ ಇಲಾಖೆಗಳ ಆಡಳಿತವನ್ನು ಪುನರ್‌ವ್ಯವಸ್ಥಿತಗೊಳಿಸುವುದು ಈ ವರ್ಗಾವಣೆಯ ಮುಖ್ಯ ಉದ್ದೇಶವಾಗಿದೆ ಎಂದು ಸರ್ಕಾರದ ಹಿರಿಯ ಮೂಲಗಳು ತಿಳಿಸಿವೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಇಲಾಖೆಗಳಲ್ಲಿ ಅಧಿಕಾರಿಗಳ ಅದಲು-ಬದಲು ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+