ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2 (ಪೂರಕ ಪರೀಕ್ಷೆ) ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ಪ್ರಕಟಿಸಿದೆ. ಪರೀಕ್ಷೆ-2ರ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಈ ಹಿಂದೆ ನಿಗದಿಯಾಗಿದ್ದ ಪರೀಕ್ಷಾ ದಿನಾಂಕಗಳನ್ನು ಮರುನಿಗದಿಗೊಳಿಸಲಾಗಿದೆ. ಹೊಸ ವೇಳಾಪಟ್ಟಿಯ ಪ್ರಕಾರ ಏಪ್ರಿಲ್ 30, 2026 ರಿಂದ ಪರೀಕ್ಷೆಗಳು ಶುರುವಾಗಲಿವೆ.

ಯಾರಿಗೆ ಶುಲ್ಕ ವಿನಾಯಿತಿ?

2026ರಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು, ಇತ್ತೀಚೆಗೆ ಪ್ರಕಟವಾದ ಮೊದಲನೇ ಪರೀಕ್ಷೆಯ ಫಲಿತಾಂಶದಲ್ಲಿ ಪೂರ್ಣಗೊಳಿಸದ (Not Completed / ಅನುತ್ತೀರ್ಣ) ವಿದ್ಯಾರ್ಥಿಗಳಿಗೆ ಮಂಡಳಿಯು ಸಿಹಿಸುದ್ದಿ ನೀಡಿದೆ. ಈ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಸಂಪೂರ್ಣ ಉಚಿತವಾಗಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮಂಡಳಿ ಅವಕಾಶ ಕಲ್ಪಿಸಿದೆ.

PUC

ಅರ್ಜಿ ಸಲ್ಲಿಕೆ ಹೇಗೆ ಹಾಗೂ ಕೊನೆಯ ದಿನಾಂಕ?

ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಏಪ್ರಿಲ್ 09, 2026 ರಿಂದ ಏಪ್ರಿಲ್ 17, 2026 ರ ವರೆಗೆ ಕಾಲಾವಕಾಶ ನೀಡಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅಧಿಕೃತ ಲಿಂಕ್ ಬಳಸಿ ನೇರವಾಗಿ ನೋಂದಾಯಿಸಿಕೊಳ್ಳಬಹುದು. ಅಥವಾ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪಿಯು ಎಕ್ಸಾಮ್ ಪೋರ್ಟಲ್ ಮುಖಾಂತರವೂ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಪ್ರಾಂಶುಪಾಲರಿಗೆ ಮಂಡಳಿಯ ಸೂಚನೆ

2026ರ ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ವಿವಿಧ ಕಾರಣಗಳಿಂದ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳನ್ನು ತಮ್ಮ ಪಿಯು ಎಕ್ಸಾಮ್ ಪೋರ್ಟಲ್ ಲಾಗಿನ್ ಮುಖಾಂತರ ನೋಂದಣಿ ಮಾಡಲು ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಈ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ, ಶುಲ್ಕ ವಿನಾಯಿತಿಯ ಲಾಭ ಪಡೆಯಲು ನೆರವಾಗಬೇಕು ಎಂದು ಮಂಡಳಿ ನಿರ್ದೇಶಿಸಿದೆ.

ಪರೀಕ್ಷೆ-2ಕ್ಕೆ ಯಶಸ್ವಿಯಾಗಿ ನೋಂದಾಯಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ನಿಗದಿತ ಸಮಯದಲ್ಲಿ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳ ಲಾಗಿನ್‌ನಲ್ಲಿ ಪ್ರವೇಶ ಪತ್ರಗಳನ್ನು ಲಭ್ಯಗೊಳಿಸಲಾಗುವುದು. ವಿದ್ಯಾರ್ಥಿಗಳು ಮಂಡಳಿಯ ಜಾಲತಾಣದ ಪಿಯುಸಿ ವಿದ್ಯಾರ್ಥಿ ಅಂಕಣದಲ್ಲಿ ಲಭ್ಯವಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಳಸಿ ಯಾವುದೇ ಆತಂಕವಿಲ್ಲದೆ, ಶಾಂತ ಚಿತ್ತದಿಂದ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಮಂಡಳಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+