ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, ಜು.25 : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು ಶೇ.30.78 ಮಂದಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆ ಬರೆದಿದ್ದ 2,18,537 ವಿದ್ಯಾರ್ಥಿಗಳಲ್ಲಿ 67,276 ಮಂದಿ ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣವಾಗಿರುವ ಸಿಇಟಿ ಅಭ್ಯರ್ಥಿಗಳಿಗೆ ಆಗಸ್ಟ್ ಮೊದಲ ವಾರದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಯಲಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಗುರುವಾರ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆಯಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯರಲ್ಲಿ ಶೇ.35.93ರಷ್ಟು ಜನ ಉತ್ತಿರ್ಣರಾಗಿದ್ದಾರೆ. ಜುಲೈನಲ್ಲಿ ನಡೆದ ಪೂರಕ ಪರೀಕ್ಷೆಯನ್ನು 2,18,537 ವಿದ್ಯಾರ್ಥಿಗಳು ಬರೆದಿದ್ದರು. ಇವರಲ್ಲಿ 67,276 ಮಂದಿ ಉತ್ತೀರ್ಣರಾದ್ದಾರೆ.

ಏಳು ವರ್ಷಗಳ ಬಳಿಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಫಲಿತಾಂಶ ಶೇ.30 ದಾಟಿದೆ. ಈ ಹಿಂದೆ 2006ರಲ್ಲಿ ಶೇ.36ರಷ್ಟು ಫಲಿತಾಂಶ ಬಂದಿತ್ತು. ಶುಕ್ರವಾರ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. [ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ]
ಆ.3ರೊಳಗೆ ಅರ್ಜಿ ಸಲ್ಲಿಸಬಹುದು : ಪೂರಕ ಪರೀಕ್ಷಾ ಫಲಿತಾಂಶ ಪಡೆದ ಅಭ್ಯರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಫೋಟೋ ಪ್ರತಿ, ಮರುಮೌಲ್ಯಮಾಪನ ಮತ್ತು ಅಂಕಗಳ ಮರುಎಣಿಕೆಗೆ ಜು.25ರಿಂದ ಆ.3ರೊಳಗೆ ಅರ್ಜಿ ಸಲ್ಲಿಸಬಹುದು. ಪೋಟೋ ಪ್ರತಿ (ಪ್ರತಿ ವಿಷಯಕ್ಕೆ 504 ರೂ. ಶುಲ್ಕ) ಪಡೆಯಲು ಅರ್ಜಿ ಸಲ್ಲಿಕೆಗೆ ಜು.28, ಮರುಮೌಲ್ಯಮಾಪನ (ಪ್ರತಿ ವಿಷಯಕ್ಕೆ 1260 ರೂ.ಶುಲ್ಕ) ಮತ್ತು ಅಂಕಗಳ ಮರು ಎಣಿಕೆಗೆ (336 ರೂ.ಶುಲ್ಕ) ನಿಗದಿಪಡಿಸಲಾಗಿದೆ.
ಆಗಸ್ಟ್‌ನಲ್ಲಿ ಕೌನ್ಸೆಲಿಂಗ್ : ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣವಾಗಿರುವ ಸಿಇಟಿ ಅಭ್ಯರ್ಥಿಗಳಿಗೆ ಆಗಸ್ಟ್ ಮೊದಲ ವಾರದಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಯಲಿದೆ. ಸಿಇಟಿ ಸೀಟುಗಳ 2ನೇ ಮುಂದುವರಿದ ಸುತ್ತಿನ ಆಪ್ಷನ್ ಎಂಟ್ರಿ ಪ್ರಕ್ರಿಯೆ ಬಳಿಕವೂ ಒಟ್ಟು 10,340 ಸಿಇಟಿ ಸೀಟುಗಳು ಹಂಚಿಕೆಯಾಗದೆ ಉಳಿದಿವೆ.












Click it and Unblock the Notifications