ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಏಪ್ರಿಲ್ 27 ರಾತ್ರಿಯಿಂದ 14 ದಿನಗಳ ಕಾಲ ಲಾಕ್‌ಡೌನ್

|
Google Oneindia Kannada News

ಬೆಂಗಳೂರು, ಏಪ್ರಿಲ್ 26: ಕೊವಿಡ್ 19 ಸೋಂಕು ತಡೆಗಟ್ಟಲು ಸಚಿವ ಸಂಪುಟ ಸಭೆಯಲ್ಲಿ ಕಠಿಣ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ಹರಡುವಿಕೆ ತಡೆಯಲು 14 ದಿನ ಇಡೀ ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಜೊತೆಗೆ ಲಸಿಕೆ ಅಭಿಯಾನ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು.

ಮೇ 1ರಿಂದ 18 ರಿಂದ 45 ವರ್ಷದೊಳಗಿನವರಿಗೆ ಕೊರನಾ ಲಸಿಕೆ ಉಚಿತ ನೀಡಲಾಗುವುದು, ಜೊತೆಗೆ ಕೇಂದ್ರ ಸರ್ಕಾರದ ಸೂಚನೆಯಂತೆ 65 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ಸಿಗಲಿದೆ ಎಂದು ಹೇಳಿದರು.

ಇನ್ಮುಂದೆ ಆಕ್ಸಿಜನ್ ಕೊರತೆ ಬರಲ್ಲ, ಕೇಂದ್ರ 800 ಮೆಟ್ರಿಕ್ ಟನ್ ಕೊಡಲಿದೆ, ರೆಮ್‌ಡಿಸಿವರ್ 1 ಲಕ್ಷ 20 ಸಾವಿರ ಪೂರೈಕೆ ಮಾಡುತ್ತಿದೆ ಎಂದರು.

ಬೆಳಗ್ಗೆ 6 ರಿಂದ 10 ಗಂಟೆ ತನಕ ಅಗತ್ಯ ವಸ್ತುಗಳನ್ನು ಖರೀದಿಸಬಹುದು, ನಂತರ ಕೋವಿಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಎರಡು ವಾರಗಳಲ್ಲಿ ನಿಯಂತ್ರಣಕ್ಕೆ ಬರಬೇಕು, ಬರದಿದ್ದರೆ ಕಠಿಣ ಕ್ರಮ ಮುಂದುವರಿಯಲಿದೆ, ಇದಕ್ಕೆ ಜನರು ಸಹಕರಿಸಬೇಕು ಎಂದು ಹೇಳಿದರು.

Karnataka Imposes 14 days Lockdown in the state from April 27th to 10th May

ಏಪ್ರಿಲ್ 27ರಿಂದ 14 ದಿನ ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಲಾಕ್‌ಡೌನ್ ಆಗಲಿದೆ. ಗಾರ್ಮೆಂಟ್ಸ್‌ ಮತ್ತು ಉತ್ಪಾದಕ ಕ್ಷೇತ್ರಕ್ಕೆ ಲಾಕ್ ಡೌನ್‌ನಿಂದ ವಿನಾಯಿತಿ ನೀಡಿಲ್ಲ, ಉತ್ಪಾದನಾ ವಲಯ, ಕಟ್ಟಡ ನಿರ್ಮಾಣ ,ಕೃಷಿ ಚಟುವಟಿಕೆಗೆ ವಿನಾಯಿತಿ ನೀಡಲಾಗಿದೆ.

ಕರ್ನಾಟಕ; 14 ದಿನ ಲಾಕ್ ಡೌನ್, ಏನು ಓಪನ್, ಕ್ಲೋಸ್?ಕರ್ನಾಟಕ; 14 ದಿನ ಲಾಕ್ ಡೌನ್, ಏನು ಓಪನ್, ಕ್ಲೋಸ್?

ಈ ಹಿಂದೆ ಕರ್ನಾಟಕ ಸರ್ಕಾರ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹೊಸ ಕಠಿಣ ಮಾರ್ಗಸೂಚಿಯನ್ನು ಏಪ್ರಿಲ್ 20ರಂದು ರಾತ್ರಿ ಪ್ರಕಟಿಸಿತ್ತು. ಏಪ್ರಿಲ್ 21ರಿಂದ ಮೇ 4 ರ ತನಕ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಸದ್ಯ ನೈಟ್ ಕರ್ಫ್ಯೂ ರಾತ್ರಿ 9 ರಿಂದ 6 ತನಕ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ರಾತ್ರಿ 9 ರಿಂದ ಬೆಳಗ್ಗೆ 6 ರ ತನಕ ಇದೆ(ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ) ಈಗ ಹೊಸ ಮಾರ್ಗಸೂಚಿಯನ್ನು ಸರ್ಕಾರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಪ್ರತ್ಯೇಕವಾಗಿ ಪ್ರಕಟಿಸಲಿದ್ದಾರೆ.

ಬಸ್ ಸಂಚಾರ ಇಲ್ಲ:
* ಕೆಎಸ್ಸಾರ್ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ ಸೇರಿದಂತೆ ಸಾರಿಗೆ ಸಂಚಾರ 14 ದಿನಗಳ ಕಾಲ ಬಂದ್ ಆಗಲಿದೆ. ಅಂತಾರಾಜ್ಯ ಬಸ್ ಸಂಚಾರವೂ ಸ್ಥಗಿತ. ಖಾಸಗಿ ವಾಹನಗಳಲ್ಲಿ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.

* ಕರ್ಫ್ಯೂ ಅವಧಿಯಲ್ಲಿ ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು/ ಸರಕು ಸಾಗಾಣಿಕೆ ವಾಹನಗಳು/ ಹೋಂ ಡೆಲಿವರಿ/ ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಅಂತಾರಾಜ್ಯ ಸರಕು ಸಾಗಣೆ ಸಂಚಾರಕ್ಕೂ ಅನುಮತಿ.

* ಸಿನಿಮಾ ಹಾಲ್, ಜಿಮ್, ಕ್ರೀಡಾಂಗಣ, ಆಡಿಟೋರಿಯಂ, ಈಜುಕೊಳ ಎಲ್ಲವೂ ಬಂದ್.

* ಹೋಟೆಲ್, ರೆಸ್ಟೋರೆಂಟ್ ಬಂದ್ ಆಗಿರಲಿದ್ದು, ಟೇಕ್ ಅವೇ, ಪಾರ್ಸೆಲ್ ವ್ಯವಸ್ಥೆಗೆ ಅನುಮತಿ ಇರಲಿದೆ.

Recommended Video

ಕೊರೋನ ತಡಿಯೋಕೆ 14 ದಿನಗಳ ಕಾಲ Lock Down! | Oneindia Kannada

* ಮದ್ಯ ಮಳಿಗೆಯಲ್ಲಿ ಪಾರ್ಸೆಲ್ ವ್ಯವಸ್ಥೆ, ಬಾರ್, ರೆಸ್ಟೋರೆಂಟ್ ಬಂದ್, ಟೇಕ್ ಅವೇಗೆ ಮಾತ್ರ ಅನುಮತಿ

English summary
Karnataka Imposes 14 days Lockdown in the state from April 27th to 11th May.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X