• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹೊರಗೆ ಕಾಲಿಟ್ರೆ ಹುಷಾರ್: ಕರ್ನಾಟಕದಲ್ಲಿ ಕೊರೊನಾವೈರಸ್ ಮಾರ್ಗಸೂಚಿ!

|

ಬೆಂಗಳೂರು, ಮಾರ್ಚ್ 25: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಕೊವಿಡ್-19 ಶಿಷ್ಟಾಚಾರ ಪಾಲನೆ ಮಾಡದವರಿಗೆ ದುಬಾರಿ ದಂಡ ವಿಧಿಸುವುದಕ್ಕೆ ಬಿಬಿಎಂಪಿ ತೀರ್ಮಾನಿಸಿದೆ.

   ಕೊರೊನಾ ಕಂಟ್ರೋಲ್ ಗೆ ರಾಜ್ಯ ಸರ್ಕಾರದಿಂದ ಹೊಸ ಗೈಡ್ ಲೈನ್ಸ್..! ನಿಯಮ ಉಲ್ಲಂಘಿಸಿದ್ರೆ ದಂಡ | Oneindia Kannada

   ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾವೈರಸ್ ಶಿಷ್ಟಾಚಾರ ಪಾಲನೆ ಮಾಡದೇ ಮಾಸ್ಕ್ ಧರಿಸದೇ ಸಂಚರಿಸುವವರಿಗೆ 250 ರೂಪಾಯಿ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಘೋಷಿಸಿದೆ.

   ಭಾರತದಲ್ಲಿ ಮೊದಲ ಲಾಕ್‌ಡೌನ್: ಅಂದು ಮತ್ತು ಇಂದಿನ ಕೊರೊನಾ ಸ್ಥಿತಿ

   ಮದುವೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ 200ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮುಚ್ಚಿದ ಸಭಾಂಗಣದಲ್ಲಿ 200 ಮತ್ತು ತೆರೆದ ಪ್ರದೇಶಗಳಲ್ಲಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಕೇವಲ 500 ಜನರು ಭಾಗವಹಿಸುವುದಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಹುಟ್ಟುಹಬ್ಬದ ಕಾರ್ಯಕ್ರಮಗಳು ಸಭಾಂಗಣಗಳಲ್ಲಿ ನಡೆದರೆ ಪಾಲ್ಗೊಳ್ಳುವವರ ಮಿತಿಯನ್ನು 50ಕ್ಕೆ ಇಳಿಸಲಾಗಿದೆ. ತೆರೆದ ಸ್ಥಳದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಲ್ಲಿ 100 ಜನರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

   ಅಂತ್ಯಸಂಸ್ಕಾರದಲ್ಲಿ 100 ಮಂದಿ ಭಾಗವಹಿಸಲು ಅವಕಾಶ

   ಅಂತ್ಯಸಂಸ್ಕಾರದಲ್ಲಿ 100 ಮಂದಿ ಭಾಗವಹಿಸಲು ಅವಕಾಶ

   ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು ಕಡಿತಗೊಳಿಸಲಾಗಿದೆ. ಸಾರ್ವಜನಿಕ ಪ್ರದೇಶದ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಯುವುದಾದರೆ ಅಂಥಲ್ಲಿ 100 ಜನರಿಗೆ ಮತ್ತು ನಿಗದಿತ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಸುವುದಾದರೆ ಕೇವಲ 50 ಮಂದಿಯಷ್ಟೇ ಭಾಗವಹಿಸಬೇಕು ಎಂದು ನಿಯಮ ಜಾರಿಗೊಳಿಸಲಾಗಿದೆ.

   ನಗರದಲ್ಲಿ ಮಾರ್ಗಸೂಚಿ ಉಲ್ಲಂಧಿಸಿದರೆ ದಂಡ

   "ಬಿಬಿಎಂಪಿ ನಿಯಮಗಳನ್ನು ಜಾರಿಗೊಳಿಸಿದ ಹೊರತಾಗಿಯೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ದುಬಾರಿ ದಂಡವನ್ನು ವಿಧಿಸುವ ಎಚ್ಚರಿಕೆ ನೀಡಲಾಗಿದೆ. ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ/ಸ್ಥಳಗಳ ಮಾಲೀಕರಿಗೆ ₹5,000 ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ ₹10,000 ದಂಡ ವಿಧಿಸಲಾಗುವುದು" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

   ಕರ್ನಾಟಕದಲ್ಲಿ ಕೊರೊನಾ ಲಸಿಕೆ ಪಡೆಯುವವರಿಗೆ ಸಿಹಿಸುದ್ದಿ!

   ರಾಜ್ಯದಲ್ಲಿ ಒಂದೇ ದಿನ 2298 ಮಂದಿಗೆ ಕೊರೊನಾವೈರಸ್

   ರಾಜ್ಯದಲ್ಲಿ ಒಂದೇ ದಿನ 2298 ಮಂದಿಗೆ ಕೊರೊನಾವೈರಸ್

   ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಕ್ರಮೇಣ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 2298 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, 12 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಪ್ರಕರಣಗಳ ಸಂಖ್ಯೆ 975955ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12461ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 16886 ಸಕ್ರಿಯ ಪ್ರಕರಣಗಳಿವೆ.

   ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಯಾವುದೇ ಅಭಾವವಿಲ್ಲ

   ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಯಾವುದೇ ಅಭಾವವಿಲ್ಲ

   "ನಿನ್ನೆ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೊನಾವೈರಸ್ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರವು ನೀಡಿದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಕೊವಿಡ್-19 ಲಸಿಕೆ ರವಾನೆಯಾಗಲಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು, ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕೆಂದು ಕೋರುತ್ತೇನೆ" ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

   English summary
   Karnataka Imposes New Coronavirus Guidelines: Rs 250 Fine For Not Wearing Mask, Read Here To know More.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X